Dr.Sharanprakash Patil Profile: ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಡಾ.ಶರಣಪ್ರಕಾಶ್ ಪಾಟೀಲ್
ಕಲಬುರಗಿ, ಮೇ, 27: ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಾ.ಶರಣಪ್ರಕಾಶ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಈ ಇಲಾಖೆಯ ಸಚಿವರಾಗಿ ಆಯ್ಕೆ ಆಗಿದ್ದಾರೆ. ಹಾಗಾದರೆ ಡಾ.ಶರಣಪ್ರಕಾಶ್ ಪಾಟೀಲ್ ಅವರ ರಾಜಕೀಯ ಅನುಭವ ಹಾಗೂ ಪರಿಚಯದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸೇಡಂ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಶರಣಪ್ರಕಾಶ್ ಪಾಟೀಲ್ 93,377 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಇವರಿಗೆ ಪೈಪೋಟಿ ನೀಡಿದ್ದ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜಕುಮಾರ ಪಾಟೀಲ್ 43,561 ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಇನ್ನು ಶರಣಪ್ರಕಾಶ್ ಪಾಟೀಲ್ ಅವರು ಗುಲ್ಬರ್ಗ ಜಿಲ್ಲೆಯ ಸೇಡಂ ಕ್ಷೇತ್ರವನ್ನು ಪ್ರತಿನಿಧಿಸಿ 3 ಬಾರಿ ಶಾಸಕರಾಗಿದ್ದರು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸುವ ಮೂಲಕ 4ನೇ ಬಾರಿ ಶಾಸಕರಾಗಿದ್ದಾರೆ. ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ ಮತ್ತು ಚರ್ಮರೋಗ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅಲ್ಲದೆ ಡಾ. ಶರಣಪರಕಾರ್ಶ್ ರುದ್ರಪ್ಪ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿಯೂ ಕಾರ್ಯನಿರ್ಹಿಸಿದ್ದಾರೆ.
ಇನ್ನು ಈ ಬಾರಿ ಮುಸ್ಲಿಂ ಸಮುದಾಯದಿಂದ ಇಬ್ಬರು ಸಚಿವ ಸ್ಥಾನ ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಮತ್ತೊಂದೆಡೆ ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.
ಇನ್ನು ಒಕ್ಕಲಿಗರಲ್ಲಿ ಐದು ಜನರಿಗೆ ಸಚಿವ ಸ್ಥಾನ ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.
ದಲಿತ ಸಮುದಾಯಕ್ಕೆ 9 ಸಚಿವ ಸ್ಥಾನ ಲಭಿಸಿದ್ದು, ಮುನಿಯಪ್ಪ, ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಈ ಮೂಲಕ ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.
ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.
ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ಮುಖ್ಯ ಸಚೇತಕರಾಗಿರುವುದರಿಂದ ಕಡೆ ಗಳಿಗೆಯ ಒತ್ತಡದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ.
ಲಿಂಗಾಯತ ಸಮುದಾಯದ 8 ಜನರಿಗೆ ಸಚಿವ ಸ್ಥಾನ ಸಿದ್ದರಾಮಯ್ಯ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು, ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ನಾಮಧಾರಿ ರೆಡ್ಡಿ ಖೋಟಾದಲ್ಲಿ ಸಚಿವರಾಗಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications