Dr Sudha Yadav: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

Dr Sudha Yadav: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರು ಇಂದು (ಅಕ್ಟೋಬರ್ 16) ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಧಾನಿ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅವರಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು ಅವರು ಪ್ರಮಾಣವಚನ ಬೋಧಿಸಿದರು.

ನೂತನ ರಾಜ್ಯಪಾಲರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಪ್ರಮುಖ ರಾಜಕೀಯ ನಾಯಕರು ಹಾಗೂ ಗಣ್ಯರು ಭಾಗವಹಿಸಿದ್ದರು. ಈ ಹಿಂದೆ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ನೂತನ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು.

Dr Sudha Yadav Takes Oath as New Karnataka Governor in Bengaluru s Raj Bhavan Know complete details

ಅಲ್ಲದೆ, ರಾಜ್ಯ ಸಚಿವ ಸಂಪುಟದ ಹಲವು ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಹಾಗೂ ಹೈಕೋರ್ಟ್‌ನ ನ್ಯಾಯಮೂರ್ತಿಗಳು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಪ್ರಮಾಣವಚನ ಸ್ವೀಕಾರದ ನಂತರ ಮುಖ್ಯಮಂತ್ರಿಗಳು ಹಾಗೂ ಇತರ ಗಣ್ಯರು ನೂತನ ರಾಜ್ಯಪಾಲರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು. ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೂ ಬೀಳ್ಕೊಡುಗೆಯ ಗೌರವ ಸಲ್ಲಿಸಲಾಯಿತು. ನೂತನ ರಾಜ್ಯಪಾಲರ ಆಗಮನದೊಂದಿಗೆ ರಾಜ್ಯ ರಾಜಕೀಯ ಹಾಗೂ ಆಡಳಿತದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+