ಡಿ.ಕೆ. ಶಿವಕುಮಾರ್ ಬಿಚ್ಚಿಟ್ಟ ನೈಟ್ ಕರ್ಫ್ಯೂ ಹಿಂದಿನ ಕರಾಳ ಸತ್ಯ!
ಬೆಂಗಳೂರು, ಡಿಸೆಂಬರ್ 25: ನೈಟ್ ಕರ್ಫ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಮುಜುಗುರ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಮಸ್ಯೆ ಎದುರಾಗಿದೆ. ವೈಜ್ಞಾನಿಕವಲ್ಲದ ನೈಟ್ ಕರ್ಫ್ಯೂ ಹೇರಿಕೆಯಿಂದ ರೂಪಾಂತರಿ ವೈರಸ್ ಹರಡುವುದನ್ನು ಹೇಗೆ ತಡೆಯಬಹುದು ಎಂಬ ಪ್ರಶ್ನೆಗೆ ರಾಜ್ಯ ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಸಂಪೂರ್ಣ ಲಾಕ್‌ಡೌನ್ ಮಾಡುವುದರಿಂದ ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಬಹುದು. ಆದರೆ ರಾತ್ರಿ ಕರ್ಫ್ಯೂನಿಂದ ಹೇಗೆ ಸಾಂಕ್ರಾಮಿಕ ರೋಗ ನಿಯಂತ್ರಣ ಮಾಡಬಹುದು ಎಂಬುದಕ್ಕೂ ಸರ್ಕಾರದ ಬಳಿ ಉತ್ತರವಿಲ್ಲ.
ಈ ಬಗ್ಗೆ ತಜ್ಞರು ಸಲಹೆ ಕೊಟ್ಟಿದ್ದಾರೆ ಎನ್ನುತ್ತಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಅವರು, ತಜ್ಞರು ಕೊಟ್ಟಿರುವ ಸಲಹೆ ಏನು ಎಂಬುದನ್ನು ಹೇಳುತ್ತಿಲ್ಲ. ಹೀಗಾಗಿ ನೈಟ್ ಕರ್ಫ್ಯೂ ವಿಚಾರದಲ್ಲಿ ಸರ್ಕಾರದ ತೀರ್ಮಾನಗಳೆ ಒಂದು ರೀತಿಯಲ್ಲಿ ನಿಗೂಢವಾಗಿದೆ. ಹೀಗಾಗಿಯೇ ಇದೊಂದು ದುಡ್ಡು ಹೊಡೆಯುವ ಪ್ರಯತ್ನದ ಮುನ್ನುಡಿ ಮಾತ್ರ ಎಂದು ಸಾರ್ವಜನಿಕರು ಮಾಡುತ್ತಿರುವ ಆರೋಪದಲ್ಲಿ ತಪ್ಪಿಲ್ಲ ಎಂಬಂತಾಗಿದೆ.
ಇದೇ ಸಂದರ್ಭದಲ್ಲಿ ನೈಟ್ ಕರ್ಫ್ಯೂ ಹೇರಿಕೆ ಸರ್ಕಾರದ ನಿರ್ಧಾರವಲ್ಲ ಎಂಬ ಸ್ಪೋಟಕ ಮಾಹಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಂಚಿಕೊಂಡಿದ್ದಾರೆ. ಡಿಕೆಶಿ ಅವರ ಹೇಳಿಕೆಯಿಂದ ರಾಜ್ಯದ ಜನರು ಸರ್ಕಾರದ ನಿರ್ಧಾರವನ್ನು ಮತ್ತಷ್ಟು ಸಂಶಯದಿಂದ ನೋಡುವಂತಾಗಿದೆ. ಅಷ್ಟಕ್ಕೂ ಇದು ಸರ್ಕಾರದ ನಿರ್ಧಾರ ಅಲ್ಲದೆ ಇದ್ದಲ್ಲಿ ಅದು ಯಾರ ನಿರ್ಧಾರವಾಗಿತ್ತು? ಮುಂದಿದೆ ಸ್ಪೋಟಕ ಮಾಹಿತಿ.

ಅವರ ಫೋಟೊ ಕೊಡಿ!
ಲಾಕ್‌ಡೌನ್‌ನಿಂದಾಗಿ ಇಡೀ ವರ್ಷ ಜನ ನರಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೋವು ವ್ಯಕ್ತಪಡಿಸಿದ್ದಾರೆ. ಇವರು ಯಾರ ಅಭಿಪ್ರಾಯವನ್ನೂ ಪಡೆಯದೆ ಏಕಾಏಕಿ ನೈಟ್ ಕರ್ಫ್ಯೂ ನಿರ್ಧಾರವನ್ನು ತೆಗೆದುಕೊಂಡಿದ್ದು ಯಾಕೆ? ಇವರಿಗೆ ಯಾರಾದರೂ ತಜ್ಞರು ರಾತ್ರಿ ವೇಳೆ ಕರ್ಫ್ಯೂ ಮಾಡಿದರೆ ಸೋಂಕು ಬರುವುದಿಲ್ಲ ಎಂದು ಸಲಹೆ ನೀಡಿದ್ದಾರಾ? ಆ ರೀತಿ ಯಾರಾದರೂ ಕೊಟ್ಟಿದ್ದರೆ ಅವರ ಫೋಟೋ ಇದ್ದರೆ ಕೊಡಿ. ಅವರದು, ಇವರ ಫೋಟೋನಾ ಮನೆಯಲ್ಲಿ ಇಟ್ಟುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ. ಜೊತೆಗೆ ಸ್ಪೋಟಕ ಮಾಹಿತಿಯನ್ನು ಅವರು ಇದೇ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.

ಅದು ಸರ್ಕಾರದ ನಿರ್ಧಾರವಲ್ಲ!
ರಾತ್ರಿ ಕರ್ಫ್ಯೂ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರದಲ್ಲ, ಅದು ಆರೋಗ್ಯ ಸಚಿವ ಡಾ. ಸುಧಾಕರ್ ಅವರದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಇಡೀ ಪ್ರಪಂಚ ನಮ್ಮ ರಾಜ್ಯ ಹಾಗೂ ಈ ನಗರವನ್ನು ಗಮನಿಸುತ್ತಿದೆ. ಹಗಲಲ್ಲಿ ಸೋಂಕು ಬರಲ್ಲ, ರಾತ್ರಿ ವೇಳೆ ಸೋಂಕು ಬರುತ್ತದೆಯೇ? ಪರಿಜ್ಞಾನ ಇರುವವರು ಯಾರೂ ಇಂತಹ ನಿರ್ಧಾರಕ್ಕೆ ಬರುವುದಿಲ್ಲ. ರಾತ್ರಿ 11 ಗಂಟೆ ಮೇಲೆ ಯಾರು ಓಡಾಡುತ್ತಾರೆ? ಎಂದು ಸ್ವತಃ ವೈದ್ಯರೂ ಆಗಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಅಜ್ಞಾನಿಗಳ ನಿರ್ಧಾರ
ಇದು ಸಾಮಾನ್ಯ ಜ್ಞಾನದ ವಿಚಾರ. ಇದರಲ್ಲಿ ಯಾವುದೇ ವಿಜ್ಞಾನ ಅಡಗಿಲ್ಲ. ರಸ್ತೆ, ಮಾರುಕಟ್ಟೆ ಸೇರಿದಂತೆ ಹಗಲೆಲ್ಲಾ ಜನ ಸಾವಿರಾರು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಎಲ್ಲೆಲ್ಲಿ ಯಾವ ರೀತಿ ನಿಯಂತ್ರಣ ಮಾಡಬೇಕೋ ಆ ರೀತಿ ಕ್ರಮ ಕೈಗೊಳ್ಳಬೇಕು. ಸರ್ಕಾರ ಜನರಿಗೆ ಔಷಧಿ ಒದಗಿಸಬೇಕು. ಅವರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕು. ನೊಂದವರಿಗೆ, ನಷ್ಟ ಅನುಭವಿಸಿರುವವರಿಗೆ ಪರಿಹಾರ ನೀಡಬೇಕು ಎಂದು ಪರಿಸ್ಥಿತಿ ನಿಭಾಯಿಸಲು ಸಿದ್ಧವಾಗಿರುವಂತೆ ಸರ್ಕಾರಕ್ಕೆ ಡಿಕೆಶಿ ಸಲಹೆ ನೀಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವವರಿಗೆ ತೆರಿಗೆ ವಿನಾಯಿತಿ ಏನಾದರೂ ಕೊಟ್ಟಿದ್ದಾರಾ? ಉದ್ಯೋಗ ಭತ್ಯೆ ನೀಡಿದ್ದಾರಾ? ಬ್ಯಾಂಕ್ ಗಳಿಗೆ ಸೂಚನೆ ನೀಡಿ ಸಾಲ ಮನ್ನಾ ಮಾಡದಿದ್ದರೂ ಬಡ್ಡಿ ಮನ್ನಾ ಮಾಡಿದ್ದಾರಾ? ಅರ್ಧಕ್ಕರ್ಧ ರೆಸ್ಟೋರೆಂಟ್ ಗಳು ಬಾಗಿಲು ತೆರೆಯಲು ಆಗಿಲ್ಲ. ತಮಗೆ ಪ್ರಚಾರ ಸಿಗುತ್ತದೆ ಅಂತಾ ಅವರಿಗೆ ಇಷ್ಟಬಂದ ಹಾಗೆ ತೀರ್ಮಾನ ಮಾಡಿದರೆ ಕೇಳಲು ಸಾಧ್ಯವೇ? ಎಂದು ಡಾ. ಸುಧಾಕರ್ ಅವರ ಮೇಲೆ ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ.

ಯುಟರ್ನ್ ಸರ್ಕಾರ
ಈ ಸರ್ಕಾರ ಬಂದ ಮೇಲೆ ಎಷ್ಟು ನಿರ್ಧಾರಗಳಲ್ಲಿ ಯುಟರ್ನ್ ಹೊಡೆದಿದೆ ಎಂದು ಲೆಕ್ಕ ಹಾಕಿ. ಸರ್ಕಾರ ಯುವಕರ ಭಾವನೆ ಮತ್ತು ಆಕ್ರೋಶಕ್ಕೆ ಸ್ಪಂದಿಸಿದೆ. ನಾವು ಕೂಡ ಅವರ ಭಾವನೆಗೆ ಸ್ಪಂದಿಸಿದ್ದು, ಅದು ನಮ್ಮ ಕರ್ತವ್ಯ. ನಮ್ಮ ಯುವಕರಿಗೆ ಈ ಸಚಿವರಿಗಿಂತ ಉತ್ತಮ ಪರಿಜ್ಞಾನ ಇದೆ. ಈ ರಾಜ್ಯದ ಜನರಿಂದ ನಮ್ಮ ರಾಜ್ಯಕ್ಕೆ ಹೆಸರು ಬಂದಿದೆಯೇ ಹೊರತು ಇವರಿಂದ ಅಲ್ಲ ಎಂದು ಡಿಕೆ ಶಿವಕುಮಾರ್ ಅವರು ಡಾ. ಸುಧಾಕರ್ ಅವರನ್ನು ಲೇವಡಿ ಮಾಡಿದ್ದಾರೆ.
ಯಡಿಯೂರಪ್ಪನವರು ಬೇಲ್ ಮೇಲೆ ಬಂದಿದ್ದನ್ನು ನೋಡಿದ್ದೇವೆ, ದೊಡ್ಡ ನಾಯಕರು ಬಂದಿದ್ದನ್ನು ನೋಡಿದ್ದೇವೆ. ಇದಕ್ಕೆಲ್ಲ ಕಾಲ ಉತ್ತರ ಕೊಡುತ್ತದೆ. ರಾಜ್ಯದಿಂದ ಈ ಮಾಹಾಮಾರಿ ತೊಲಗಿ, ಜನರಿಗೆ ನೆಮ್ಮದಿ ಶಾಂತಿ ಸಿಗಲಿ ಎಂದು ನಾನು ವೈಕುಂಠ ಏಕಾದಶಿ ದಿನ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಅವರು ಪ್ರಾರ್ಥಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications