ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸ್ಮಾರ್ಟ್ ಕಾರ್ಡ್ ಬಳಸಿ

ಬೆಂಗಳೂರು, ಜೂನ್ 07 : ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಪಡೆಯಲು 5 ರೂ. ಬಳಕೆ ಮಾಡುವುದಕ್ಕೆ ಕಡಿವಾಣ ಬೀಳಲಿದೆ. ಹೌದು, ಘಟಕಗಳು ಅಭಿವೃದ್ಧಿಯಾಗುತ್ತಿದ್ದು, ಸ್ಮಾರ್ಟ್ ಕಾರ್ಡ್ ಬಳಕೆ ಮಾಡಬಹುದಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸ್ಮಾರ್ಟ್ ಕಾರ್ಡ್‌ ವ್ಯವಸ್ಥೆ ಜಾರಿಗೆ ತರಲು ಒಪ್ಪಿಗೆ ನೀಡಲಾಗಿದೆ. ಇದಕ್ಕಾಗಿ ಹೊರಗುತ್ತಿಗೆಯನ್ನು ನೀಡಲಾಗುತ್ತದೆ. 5 ರೂ. ಬದಲು ಜನರು ಕಾರ್ಡ್ ಬಳಕೆ ಮಾಡಬಹುದು.

ರಾಜ್ಯದಲ್ಲಿ 1,800 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಇವುಗಳಲ್ಲಿ 1,600 ಮಾತ್ರ ಕಾರ್ಯ ನಿರ್ವಹಣೆ ಮಾಡುತ್ತಿವೆ. ತಾಂತ್ರಿಕ ಸಮಸ್ಯೆಗಳ ಕಾರಣ ಉಳಿದ ಘಟಕಗಳು ಕಾರ್ಯ ನಿರ್ವಹಣೆ ಮಾಡುತ್ತಿಲ್ಲ. ಸ್ಮಾರ್ಟ್ ಕಾರ್ಡ್ ಬಳಕೆ ಆರಂಭವಾದರೆ ಘಟಕ ದಿನದ 24 ಗಂಟೆಯೂ ಕಾರ್ಯ ನಿರ್ವಹಣೆ ಮಾಡುವ ವ್ಯವಸ್ಥೆ ಜಾರಿಗೆ ಬರಲಿದೆ.

Drinking water ATM soon have smart card system

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಈ ಘಟಕಗಳನ್ನು ನಿರ್ವಹಣೆ ಮಾಡುತ್ತಿದೆ. ಈಗ ಸ್ಮಾರ್ಟ್ ಕಾರ್ಡ್ ಬಳಕೆ ಮಾಡುವ ವ್ಯವಸ್ಥೆ ಜಾರಿಗೆ ತಂದರೆ ಘಟಕ ನಿರ್ವಹಣೆ ಹೊಣೆಯನ್ನು ಖಾಸಗಿ ಅವರಿಗೆ ನೀಡಲಾಗುತ್ತದೆ.

ಸ್ಮಾರ್ಟ್ ಕಾರ್ಡ್ ಬಳಕೆ ವ್ಯವಸ್ಥೆ ಜಾರಿಗೆ ಬಂದರೆ 5 ರೂ.ಗಾಗಿ ಹುಡುಕಾಟ ನಡೆಸುವುದು ತಪ್ಪಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 5 ರೂ.ಗೆ 20 ಲೀಟರ್ ಶುದ್ಧ ಕುಡಿಯುವ ನೀರು ಸಿಗುತ್ತಿದೆ. ಈ ಕುರಿತು ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+