• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕುಡಿಯುವ ನೀರಿನ ಸಮಸ್ಯೆಯೇ ಸಹಾಯವಾಣಿಗೆ ಕರೆ ಮಾಡಿ

|

ಬೆಂಗಳೂರು, ಮೇ 12 : ಭೀಕರ ಬರದ ಹಿನ್ನಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜನರು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ನೀಡಲು ಕಾಲ್ ಸೆಂಟರ್ ಆರಂಭಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ನೀಡಲು ಕಾಲ್ ಸೆಂಟರ್ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ 1,112 ಹಳ್ಳಿಗೆ ಟ್ಯಾಂಕರ್ ನೀರು ಆಧಾರ

ಸಹಾಯವಾಣಿಗೆ ಬಂದ ಕರೆಗಳನ್ನು ಸ್ವೀಕರಿಸಿ, ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನರು ಸಹಾಯವಾಣಿಗೆ ಕರೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ನೀಡಬಹುದು ಎಂದು ಸಚಿವರು ಹೇಳಿದ್ದಾರೆ.

ಕಲಬುರಗಿ : 133 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ

ಗ್ರಾಮೀಣಾಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಎಲ್ಲಾ ಜಿಲ್ಲೆಗಳ ಕಾಲ್ ಸೆಂಟರ್ ದೂರವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಕಾಲ್ ಸೆಂಟರ್‌ಗೆ ಬರುವ ಕರೆಯನ್ನು ಆದ್ಯತೆಯ ಮೇಲೆ ಸ್ವೀಕರಿಸಿ, ಸಮಸ್ಯೆ ಪರಿಸಹರಿಸಲು ಅಧಿಕಾರಿಗಳು ಸಿದ್ದವಾಗಿದ್ದಾರೆ.

ನೀರಿನ ದರ ಹೆಚ್ಚಳಕ್ಕೆ ಮುಂದಾದ ಬೆಂಗಳೂರು ಜಲಮಂಡಳಿ

ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರಾಜ್ಯದ 1,112 ಗ್ರಾಮಗಳಲ್ಲಿ ನೀರಿನ ಮೂಲಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ. ಈ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಟ್ಯಾಂಕರ್ ಆಧಾರವಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳು ಮಾತ್ರವಲ್ಲ, ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ.

ಜನರು ಅಂತರ್ಜಲದ ಮೇಲೆ ವಿಪರೀತ ಅಂದರೆ ಶೇ 86ರಷ್ಟು ಅವಲಂಬನೆಯಾಗಿದ್ದಾರೆ. ಆದರೆ, ಈಗ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರಿನ ಕೊರತೆ ಉಂಟಾಗಿದೆ. ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ.

English summary
Rural development and panchayat raj department has set up the call centres in all districts and taluks to address drinking water problems, people can call the call centres and submit their complaints.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X