ಕುಡಿಯುವ ನೀರಿಗೆ 100 ಕೋಟಿ ತುರ್ತು ಹಣ

Subscribe to Oneindia Kannada

ಬೆಂಗಳೂರು.ಏಪ್ರಿಲ್, 20: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ತುರ್ತಾಗಿ 100 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ ಜಾನುವಾರುಗಳ ಮೇವು ಮತ್ತು ಗೋಶಾಲೆ ತೆರೆಯಲು ಪ್ರತ್ಯೇಕವಾಗಿ 15 ಕೋಟಿ ರೂ ಬಿಡುಗಡೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ 800 ಕೋಟಿ ರು. ಬಳಕೆಯನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದೆ.[ನೀಲಕಂಠರಾಯನಗಡ್ಡಿ ವಾಸಿಗಳಿಗೆ ನೀರು ಎಂದೂ ಶಾಪ!]

karnataka

ಬರಗಾಲದ ಅಧ್ಯಯನಕ್ಕೆಂದು ಸಚಿವರ ನೇತೃತ್ವದಲ್ಲಿ ರಚಿಸಲಾಗಿರುವ ನಾಲ್ಕು ಸಂಪುಟ ಉಪಸಮಿತಿಗಳು ಗುರುವಾರದಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದು ಏಪ್ರಿಲ್ 30 ರೊಳಗೆ ವಸ್ತುಸ್ಥಿತಿಯ ವರದಿ ನೀಡಲಿವೆ ಎಂದು ಜಯಚಂದ್ರ ತಿಳಿಸಿದರು.[ಬರಪರಿಹಾರ ನಿಧಿಗೆ ಬಿಜೆಪಿ ಸದಸ್ಯರ ತಿಂಗಳ ಸಂಬಳ]

ಬರ ಪರಿಣಾಮದಿಂದ ಜನ ಗುಳೆ ಹೋಗುತ್ತಿದ್ದಾರೆ. ಅದನ್ನು ತಡೆಯಲು ಕ್ರಮ ತೆಗೆದುಕೊಳ್ಳಲಾಗಿದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಜಯಚಂದ್ರ ಈ ಮಾಹಿತಿ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
After the drought hit areas visit of CM Siddaramaiah Karnataka state government release 100 crore for drinking water.
Please Wait while comments are loading...