ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ : ಕುಮಾರಸ್ವಾಮಿ ಬೇಸರ

ಬೆಂಗಳೂರು, ಮೇ 16: ರಾಜ್ಯದಲ್ಲಿ ಬೀಕರ ಬರಗಾಲದಿಂದ ರೈತರು ರೋಸಿ ಹೋಗಿದ್ದು, ರಾಜ್ಯ ಸರ್ಕಾರದ ಒತ್ತಯದ ಮೇರೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿತ್ತು. ಆರೆ, ಬರ ಪರಿಹಾರದ ಹಣ ಬಿಡುಗಡೆಯಾದರೂ ಅನೇಕ ರೈತರ ಕೈಗೆ ಮಾತ್ರ ಬರಪರಿಹಾರದ ಹಣ ಸಿಗುತ್ತಿಲ್ಲ.

ರೈತರಿಗೆ ಬರ ಪರಿಹಾರದ ಹಣ ಬಿಡುಗಡೆಯಾಗದೂ ಆ ಹಣವನ್ನು ಬ್ಯಾಂಕ್​ಗಳು ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿವೆ. ಕೇಂದ್ರ ಸರ್ಕಾರದ ವತಿಯಿಂದ ರೈತರಿಗೆ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್​ಗಳು ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Drought Relief Fund HD Kumaraswamy Lashed Out At Banks Karnataka Congress Government

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ.‌

ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ.

ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಉಲ್ಲೇಖಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+