ರಾಜ್ಯಾದ್ಯಂತ ತಗ್ಗಿದ ಮಳೆ, ಒಣಹವೆ, ಚಳಿಗಾಳಿ ಮುಂದುವರಿಕೆ

ಬೆಂಗಳೂರು, ಡಿಸೆಂಬರ್ 17: ರಾಜ್ಯಾದ್ಯಂತ ಮಳೆ ಕಡಿಮೆಯಾಗಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಇಂದಿನಿಂದ ಡಿಸೆಂಬರ್ 20ರವರೆಗೆ ಹಗುರ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್​ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ. ಇಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 3 ದಿನ ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ.

ಕರ್ನಾಟಕದ ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಧಾರವಾಡದಲ್ಲಿ ಇಂದು ಒಣಹವೆ ಇರಲಿದೆ. ಪೂರ್ವ ಮಾರುತಗಳು ಮತ್ತು ಈಶಾನ್ಯ ಮಾರುತಗಳ ಪ್ರಭಾವದಿಂದಾಗಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಒಣಹವೆ ಇರಲಿದೆ.

ಡಿಸೆಂಬರ್ 19ರವರೆಗೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.

ಡಿಸೆಂಬರ್ 19ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗಲಿದೆ.

ಕರಾವಳಿಯಲ್ಲಿಂದು ಮಳೆಯಾಗಲಿದೆ. ಕರಾವಳಿಯಲ್ಲಿ ಡಿಸೆಂಬರ್ 18ರವರೆಗೆ ಶುಷ್ಕ ವಾತಾವರಣವಿರಲಿದೆ. ಆದರೂ ಕರ್ನಾಟಕದ ಹಲವಾರು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಇಂದು ಮತ್ತು ಡಿಸೆಂಬರ್ 18ರಂದು ಒಣ ಹವೆ ಮುಂದುವರೆಯಲಿದೆ.

IMD ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನವು 6-10 ಡಿಗ್ರಿ ಸೆಲ್ಷಿಯಸ್ ಇರಲಿದೆ. ಇಂದಿನಿಂದ ಈಶಾನ್ಯ ತ್ರಿಪುರ, ವಾಯುವ್ಯ ಮಿಜೋರಾಂ, ದಕ್ಷಿಣ ಅಸ್ಸಾಂ ಮತ್ತು ಈಶಾನ್ಯ ಅರುಣಾಚಲ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಹವಾಮಾನ ಹೇಗಿದೆ?

ಬೆಂಗಳೂರಲ್ಲಿ ಹವಾಮಾನ ಹೇಗಿದೆ?

ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜಯ ವೇಳೆ ಸ್ವಲ್ಪ ಮೋಡಕವಿಯುವ ಸಾಧ್ಯತೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್‌ನಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನ ಹೇಗಿದೆ?

ಕರ್ನಾಟಕದ ಹವಾಮಾನ ಹೇಗಿದೆ?

ರಾಜ್ಯದ ಕೆಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಕನಿಷ್ಠ ಉಷ್ಣಾಂಶ

ಕನಿಷ್ಠ ಉಷ್ಣಾಂಶ

ಬೀದರ್‌ನಲ್ಲಿ 11.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅಸ್ಸಾಂನಲ್ಲಿ ಮಳೆ

ಅಸ್ಸಾಂನಲ್ಲಿ ಮಳೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.

ಇಂದು ಕರ್ನಾಟಕ ಮಾತ್ರವಲ್ಲದೆ ಬೆಳಿಗ್ಗೆ, ದಕ್ಷಿಣ ಅಸ್ಸಾಂ, ಮಣಿಪುರ, ಈಶಾನ್ಯ ಅರುಣಾಚಲ ಪ್ರದೇಶ, ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ದಟ್ಟವಾದ ಮಂಜು ಉಂಟಾಗಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇನ್ನೂ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ. ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ.

Recommended Video

      ಕಾಡಂಚಿನ ಗ್ರಾಮಗಳಲ್ಲಿ ದಟ್ಟವಾಗಿ ಆವರಿಸಿ ಮಂಜು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+