ರಾಜ್ಯಾದ್ಯಂತ ಮಳೆ ಕಡಿಮೆಯಾಗಿ ಚಳಿ ಹೆಚ್ಚಳ

ಬೆಂಗಳೂರು, ಡಿಸೆಂಬರ್ 18 : ರಾಜ್ಯಾದ್ಯಂತ ಕ್ರಮೇಣವಾಗಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಪೂರ್ವ ಮಾರುತಗಳು ಮತ್ತು ಈಶಾನ್ಯ ಮಾರುತಗಳ ಪ್ರಭಾವದಿಂದಾಗಿ ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್ 18ರವರೆಗೆ ಶುಷ್ಕ ವಾತಾವರಣವಿರಲಿದೆ. ಆದರೂ ಕರ್ನಾಟಕದ ಹಲವಾರು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಇಂದಿನಿಂದ ಡಿಸೆಂಬರ್ 18ರವರೆಗೆ ಒಣ ಹವೆ ಮುಂದುವರೆಯಲಿದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಇಂದಿನಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮುಂದಿನ ಐದು ದಿನಗಳಲ್ಲಿ ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ. IMD ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನವು 6-10 ಡಿಗ್ರಿ ಸೆಲ್ಷಿಯಸ್ ಇರಲಿದೆ. ಇಂದಿನಿಂದ ಈಶಾನ್ಯ ತ್ರಿಪುರ, ವಾಯುವ್ಯ ಮಿಜೋರಾಂ, ದಕ್ಷಿಣ ಅಸ್ಸಾಂ ಮತ್ತು ಈಶಾನ್ಯ ಅರುಣಾಚಲ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.

ಇಂದಿನಿಂದ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 17ರ ಮಧ್ಯಾಹ್ನದಿಂದ ಡಿಸೆಂಬರ್ 20ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶದಲ್ಲಿ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಇಂದಿನಿಂದ 3 ದಿನಗಳವರೆಗೆ ಕಾಶ್ಮೀರ ಮತ್ತು ಲಡಾಖ್‌ನ ಪ್ರತ್ಯೇಕ ಭಾಗಗಳಲ್ಲಿ ಮತ್ತು ಹಿಮಾಚಲ ಪ್ರದೇಶದ ಮೇಲೆ ಮಳೆಯಾಗುವ ಸಾಧ್ಯತೆಯಿದೆ.

ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿ. 17ರವರೆಗೆ ದಕ್ಷಿಣ ಭಾರತ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಿಂಚಿನೊಂದಿಗೆ ಸೇರಿದ ಮಳೆಯಾಗಲಿದೆ.

ಡಿಸೆಂಬರ್ 19ರವರೆಗೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಡಿಸೆಂಬರ್ 17ರವರೆಗೆ ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಮತ್ತು ಡಿ. 17ರ ನಡುವೆ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಉತ್ತರ ಭಾಗಗಳಲ್ಲಿ ಲಘು ಮಳೆಯ ಮುನ್ಸೂಚನೆ ನೀಡಲಾಗಿದೆ.

ಡಿಸೆಂಬರ್ 19ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಮುಂದಿನ 3 ದಿನ ಮಳೆಯಾಗಲಿದೆ. ಇಂದು ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ, ಪೂರ್ವ ಪ್ರದೇಶದಲ್ಲಿ ಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಡಿಸೆಂಬರ್ 17ರಿಂದ ಡಿಸೆಂಬರ್ 20ರವರೆಗೆ ಹಗುರ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್​ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ. ಡಿಸೆಂಬರ್ 17ರ ಅವಧಿಯಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಲಘು ಮಳೆಯ ಮುನ್ಸೂಚನೆ ಇದೆ.

 ಬೆಂಗಳೂರಲ್ಲಿ ಹವಾಮಾನ ಹೇಗಿದೆ?

ಬೆಂಗಳೂರಲ್ಲಿ ಹವಾಮಾನ ಹೇಗಿದೆ?

ಬೆಂಗಳೂರಲ್ಲಿ ಬೆಳಗ್ಗೆಯಿಂದಲೂ ಶುಭ್ರ ಆಕಾಶವಿದೆ, ಸ್ವಲ್ಪ ಚಳಿ ಇದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಕಲಾಗಿದೆ.
 ಕರ್ನಾಟಕದ ಹವಾಮಾನ ಹೇಗಿದೆ?

ಕರ್ನಾಟಕದ ಹವಾಮಾನ ಹೇಗಿದೆ?

ರಾಜ್ಯದ ಕೆಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

 ಕನಿಷ್ಠ ಉಷ್ಣಾಂಶ

ಕನಿಷ್ಠ ಉಷ್ಣಾಂಶ

ಬೀದರ್‌ ಹಾಗೂ ವಿಜಯಪುರದಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆ

ಎಲ್ಲೆಲ್ಲಿ ಮಳೆ

ದಕ್ಷಿಣ ಅಸ್ಸಾಂ, ಮಣಿಪುರ, ಈಶಾನ್ಯ ಅರುಣಾಚಲ ಪ್ರದೇಶ, ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ದಟ್ಟವಾದ ಮಂಜು ಉಂಟಾಗಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇನ್ನೂ 3 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ. ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ.

ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ.

Recommended Video

      ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಎಂಜಾಯ್ ಮಾಡಿಬಿಡಬೇಕು | Oneindia kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+