ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ

ಬೆಂಗಳೂರು, ಡಿಸೆಂಬರ್ 12: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ನಿರೀಕ್ಷೆ ಇದೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಉಡುಪಿಯ ಕೋಟಾದಲ್ಲಿ 2 ಸೆಂ.ಮೀ, ಮಾಣಿ, ಕದ್ರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Rain

ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ತುಂತುರು ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಇಡೀ ದಿನ ಮೋಡ ಮುಸುಕಿದ ವಾತಾವರಣವಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಚಂಡಮಾರುತ ಅಪ್ಪಳಿಸಿತ್ತು. ಅದರ ಪರಿಣಾಮ ಇಷ್ಟು ದಿನಗಳು ಅಲ್ಲಲ್ಲಿ ಮಳೆಯಾಗಿತ್ತು. ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ.

Recommended Video

      ಹೊಸ ವರುಷ ಆಚರಣೆ ಮೂಡ್ ಅಲ್ಲಿ ಇದ್ರೆ ಬ್ರೇಕ್ ಹಾಕಿ! | New Year 2021 | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+