ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಹನ ತೆರಿಗೆ ಪಾವತಿಸುವವರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ವಾಹನ ತೆರಿಗೆ ಪಾವತಿಸುವವರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಿದ್ದಾರೆ.

ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಲಾಗಿದೆ.

ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Due Date For Payment Of Vehicle Tax Extended Due To Covid-19 Says Minister Lakshman Savadi

ಅಧಿಸೂಚನೆ ಸಂಖ್ಯೆ ಟಿಡಿ 1 ಟಿಡಿಆರ್ 2021 ದಿನಾಂಕ: ಏಪ್ರಿಲ್ 12, 2021 ಅನ್ವಯ ದಿನಾಂಕ: ಏಪ್ರಿಲ್ 15, 2021ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏಪ್ರಿಲ್ 30, 2021ರವರೆಗೆ ವಿಸ್ತರಿಸಿದ ಅವಧಿಯನ್ನು ಮತ್ತು ದಿನಾಂಕ: ಮೇ 15, 2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ: ಮೇ 31, 2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Recommended Video

ಸೋಂಕು ಹೆಚ್ಚಿದರು ಬುದ್ಧಿ ಕಲಿಯದ ಜನ-ಮಂಡ್ಯ ಮಾರುಕಟ್ಟೆಯಲ್ಲಿ ಜನಜಂಗುಳಿ | Oneindia Kannada

English summary
The government has issued a notification extending the vehicle tax payment period for all registered transport passengers vehicle in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X