ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಾದ್ಯಂತ ಮೇ 23ರವರೆಗೆ ಸಬ್‌ ರಿಜಿಸ್ಟ್ರಾರ್ ಕಚೇರಿ ಸ್ಥಗಿತ

|
Google Oneindia Kannada News

ಬೆಂಗಳೂರು, ಮೇ 11: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24ರವರೆಗೆ ಲಾಕ್‌ಡೌನ್ ಜಾರಿಮಾಡಲಾಗಿದೆ.

ಹಾಗೆಯೇ ರಾಜ್ಯಾದ್ಯಂತ ಸಬ್‌ರಿಜಿಸ್ಟ್ರಾರ್ ಕಚೇರಿಗಳು ಕೂಡ ಸ್ಥಗಿತಗೊಂಡಿವೆ, ಮೇ 23ವರೆಗೆ ರಾಜ್ಯದ ಎಲ್ಲಾ ಜಿಲ್ಲಾ ನೋಂದಣಿಮತ್ತು ಉಪನೋಂದಣಿ ಕಚೇರಿಗಳಲ್ಲಿ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ, ಸಬ್‌ ರಿಜಿಸ್ಟ್ರಾರ್ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿರಬೇಕು ಎಂದು ತಿಳಿಸಲಾಗಿದೆ.

Due To Covid 19 Surge Karnataka All Sub Registrar Offices Are Closed Till May 23

ಕೊರೊನಾ ಸೋಂಕು ಹೆಚ್ಚಾಗಿದ್ದರೂ ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು, ಜನರು ಸಹ ನೋಂದಣಿಗೆ ಬರುತ್ತಿದ್ದರು. ನೋಂದಣಿ ಪ್ರಕ್ರಿಯೆ ಸಂದರ್ಭದಲ್ಲಿ ಅನಿವಾರ್ಯವಾಗಿ ಬಯೋ ಮೆಟ್ರಿಕ್ ಮಾಡಿಸಲು, ಫೋಟೊ ತೆಗೆಯಲು ಮಾಸ್ಕ್ ತೆಗೆಯಬೇಕಾಗಿತ್ತು. ಇದರ ವಿರುದ್ಧ ಸಾರ್ವಜನಿಕರಲ್ಲಿ ಮತ್ತು ಇಲಾಖೆ ಅಧಿಕಾರಿಗಳು-ಸಿಬ್ಬಂದಿಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಕೊರೊನಾ ಸೋಂಕಿನಿಂದಾಗಿ ಸಬ್‌ರಿಜಿಸ್ಟ್ರಾರ್ ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು, ಮೇ 23ರವರೆಗೆ ಕಚೇರಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ದೇಶದಲ್ಲಿ ಒಂದೇ ದಿನ 3,29,942 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,26,62,575ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಮಹಾಯುದ್ದವನ್ನ ಜೈವಿಕ ಶಸ್ತ್ರಾಸ್ತ್ರಗಳೊಂದಿಗೆ ಹೋರಾಟ ಮಾಡಿ ಪ್ಲಾನ್! | Oneindia Kannada

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಈವರೆಗೂ 2,49,99 ಜನರು ಜೀವ ಚೆಲ್ಲಿದ್ದಾರೆ. ಒಂದು ದಿನದಲ್ಲಿ 3,56,082 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,90,27,304 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

English summary
Due To Coronavirus Karnataka All Sub Registrar Offices Are Closed Till May 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X