ಕರ್ನಾಟಕ; ಕೋವಿಡ್‌ನಿಂದ 44 ಪೊಲೀಸ್ ಸಿಬ್ಬಂದಿ ಸಾವು

ಬೆಂಗಳೂರು, ಸೆಪ್ಟೆಂಬರ್ 03: " ಕೋವಿಡ್ನಿಂದಾಗಿ ಇದುವರೆಗೂ ಕರ್ನಾಟಕದಲ್ಲಿ 44 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬ ಸದಸ್ಯರಿಗೆ 30 ಲಕ್ಷ ಪರಿಹಾರವನ್ನು ನೀಡಲಾಗಿದೆ" ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

Recommended Video

      Bollywood ಹಾಗು ನಮ್ಮ ಇಂಡಸ್ಟ್ರಿಗೂ Drugs link ತಿಳಿಸಿದ Prashanth Sambargi | Filmibeat Kannada

      ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಡಿಜಿ&ಐಜಿಪಿ ಪ್ರವೀಣ್ ಸೂದ್, "ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪೊಲೀಸರನ್ನು ಸಹ ಕೊರೊನಾ ವಾರಿಯರ್ಸ್ ಎಂದು ಗುರುತಿಸಿದ್ದಾರೆ. ಆದ್ದರಿಂದ, 30 ಲಕ್ಷ ಪರಿಹಾರ ಸಿಕ್ಕಿದೆ" ಎಂದರು.

      "ಕೋವಿಡ್‌ನಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ 30 ಲಕ್ಷ ಪರಿಹಾರ ಮಾತ್ರವಲ್ಲ. ವಿಮೆ ಸಹ ಲಭ್ಯವಾಗಲಿದೆ. ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗವನ್ನು ಸಹ ನೀಡಲಾಗುತ್ತದೆ" ಎಂದು ಹೇಳಿದರು.

      Due To Covid 44 Police Personnel Lost Life In Karnataka

      "ಕೋವಿಡ್‌ನಿಂದ ಸಿಬ್ಬಂದಿ ಮೃತಪಟ್ಟರೆ 48 ಗಂಟೆಗಳಲ್ಲಿ ಪರಿಹಾರ ತಲುಪಿಸಲಾಗುತ್ತದೆ. ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಿಬ್ಬಂದಿಗೆ ರಜೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ವಿವರಣೆ ನೀಡಿದರು.

      "ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿದೆ. ಅದರಲ್ಲೂ ವಿಡಿಯೋ ಕಾನ್ಫರೆನ್ಸ್ ಬಳಕೆ ಹೆಚ್ಚುತ್ತಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವುದನ್ನು ಸ್ಥಗಿತಗೊಳಿಸಲಾಗಿದೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ" ಎಂದು ತಿಳಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+