ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂದ್‌ಗೆ ನೀರಸ ಪ್ರತಿಕ್ರಿಯೆ: ಮೈಸೂರಲ್ಲಿ ಸಂಸದ ಪ್ರತಾಪ್ ಸಿಂಹ ವಶಕ್ಕೆ

|
Google Oneindia Kannada News

Recommended Video

ಬಿಜೆಪಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ | ಪ್ರತಾಪ್ ಸಿಂಹ ವಶಕ್ಕೆ | Oneindia Kannada

ಬೆಂಗಳೂರು, ಮೇ 28: ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಕರೆ ನೀಡಲಾಗಿದ್ದ ಬಂದ್‌ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜನಜೀವನ ಎಂದಿನಂತೆ ನಡೆಯುತ್ತಿದ್ದು, ಸಾರಿಗೆ ಸಂಚಾರ, ಅಂಗಡಿ ಮುಂಗಟ್ಟುಗಳ ವ್ಯವಹಾರಕ್ಕೆ ಯಾವುದೇ ತೊಂದರೆಯಾಗಿಲ್ಲ.

ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಾಗೂ ಬಂದ್ ವಾತಾವರಣ ತಕ್ಕಮಟ್ಟಿಗೆ ಕಂಡುಬಂದಿದೆ.

ಸೋಮವಾರ ಕರ್ನಾಟಕ ಬಂದ್ : ಏನಿರುತ್ತೆ?, ಏನಿರಲ್ಲ?ಸೋಮವಾರ ಕರ್ನಾಟಕ ಬಂದ್ : ಏನಿರುತ್ತೆ?, ಏನಿರಲ್ಲ?

ಮೈಸೂರಿನಲ್ಲಿ ಬಸ್ ತಡೆದು ಪ್ರತಿಭಟನೆಗೆ ಯತ್ನಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಬನ್ನಿಮಂಟಪ ಡಿಪೊ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

In Pics : ರೈತರ ಸಾಲಮನ್ನಾಗೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್

ತಮಿಳನಾಡಿಗೆ ತೆರಳುವ ಬಸ್‌ಗಳನ್ನು ಅಡ್ಡಗಟ್ಟಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ಅವರನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ.

dull response to the karnataka bandh call

ಪ್ರಣಾಳಿಕೆಯಲ್ಲಿ ರೈತರ ಸಾಲಮನ್ನಾದ ಭರವಸೆ ನೀಡಿದ್ದ ಜೆಡಿಎಸ್ ಅಧಿಕಾರಕ್ಕೆ ಬಂದ ಬಳಿಕ ಉಲ್ಟಾ ಹೊಡೆಯುತ್ತಿದೆ. ಕೊಟ್ಟ ಭರವಸೆಯನ್ನು ಕುಮಾರಸ್ವಾಮಿ ಉಳಿಸಿಕೊಳ್ಳಬೇಕು ಎಂದು ಪ್ರತಾಪ್ ಸಿಂಹ ಆಗ್ರಹಿಸಿದರು.

ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್ rally ನಡೆಸಿದರು. ಬಸ್ ನಿಲ್ದಾಣದಲ್ಲಿ ರೈತ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ, ದಾವಣಗೆರೆ, ಗದಗ, ಬೀದರ್, ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು, ಬಸ್, ಆಟೊಗಳನ್ನು ತಡೆದು ಬಂದ್‌ಗೆ ಬೆಂಬಲ ನೀಡುವಂತೆ ಆಗ್ರಹಿಸಿದರು.

ಮೇ 28ರಂದು ಕರ್ನಾಟಕ ಬಂದ್ ಕರೆ ನೀಡಲ್ಲ : ಯಡಿಯೂರಪ್ಪ ಮೇ 28ರಂದು ಕರ್ನಾಟಕ ಬಂದ್ ಕರೆ ನೀಡಲ್ಲ : ಯಡಿಯೂರಪ್ಪ

ಆದರೆ, ಬಿಜೆಪಿಯ ಪ್ರಾಬಲ್ಯವಿರುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಕೆಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ, ಜನಜೀವನ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

dull response to the karnataka bandh call

ಬೀದರ್‌ನಲ್ಲಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದರೂ, ಬಿಜೆಪಿ ಕಾರ್ಯಕರ್ತರು ಬಸ್ ಓಡಾಟಕ್ಕೆ ಅಡ್ಡಿಪಡಿಸಿದ್ದಾರೆ.

ವಿವಿಧೆಡೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಹಲವೆಡೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಬೆಂಕಿ ನಂದಿಸಿ, ಟೈರ್ ಸುಡದಂತೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಖಾಸಗಿ ವಾಹನ ಸಂಚಾರ ಎಂದಿನಂತೆ ನಡೆದಿವೆ.

English summary
There is dull response to the karnataka bandh called for demanding waiving of formers loan. Protests are being held at some district where BJP has strong hold. Member of Parliament Prathap Simha detained by police in Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X