Karnataka Railway: ದಸರಾ ಪ್ರಯುಕ್ತ ಈ ಮಾರ್ಗದ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಜೋಡಣೆ

ಹುಬ್ಬಳ್ಳಿ, ಸೆಪ್ಟಂಬರ್ 20: ದಸರಾ ಹಬ್ಬದಲ್ಲಿ ಊರಿಂದ ಬೇರೆ ಪ್ರದೇಶಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿಸುತ್ತದೆ. ಈ ಕಾರಣದಿಂದ ನೈಋತ್ಯ ರೈಲ್ವೆ (SWR) ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಮತ್ತು ಸಂಚಾರಕ್ಕೆ ಅನುಕೂಲವಾಗುವಂತೆ ಹೆಚ್ಚಿವರಿ ಬೋಗಿಗಳ ಜೋಡಣೆಗೆ ಮುಂದಾಗಿದೆ.

ಹೌದು, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ರೈಲ್ವೆ ಅಧಿಕಾರಿಗಳು ನಿರ್ಧರಿಸಿದ್ದಾರೆ. ಅಕ್ಟೋಬರ್ 4 ರಿಂದ 15 ರವರೆಗೆ ಓಡಾಡುವ ರಾಜ್ಯದ ವಿವಿಧ ಮಾರ್ಗಗಳು ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುವುದು ಎಂದು ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಮಾಹಿತಿ ನೀಡಿದ್ದಾರೆ.

Dussehra Festival 2024 SWR to Add Additional Coaches to Trains of This Route

ಹಾಗಾದರೆ ರಾಜ್ಯದ ಯಾವ ಮಾರ್ಗ, ಯಾವೆಲ್ಲ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸಮೇತ ಕಾರ್ಯಾಚರಣೆ ಮಾಡುತ್ತವೆ. ರೈಲು ಸಂಖ್ಯೆ ಮಾಹಿತಿ ಇಲ್ಲಿದೆ.

ಈ ರೈಲುಗಳು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿ ಜೋಡಣೆ

* ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 17301)

* ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 17302)

* ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 06233/06234)

* ಮೈಸೂರು-ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 17307/17308)

* ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 16591)

* ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ ರೈಲು(ಸಂಖ್ಯೆ 16592)

* ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 16535)

* ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 16536) ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

* 02 ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿ ಅಳವಡಿಕೆ ರೈಲುಗಳು

*ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 16227) ಹಾಗೂ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ16228) ರೈಲುಗಳಿಗೆ ಅಕ್ಟೋಬರ್ 4 ರಿಂದ 13 ರವರೆಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Dussehra Festival 2024 SWR to Add Additional Coaches to Trains of This Route

01 ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿ ಜೋಡಣೆ

* ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್ ರೈಲು (ಸಂಖ್ಯೆ 06543/0654)

* ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 16221)

* ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ರೈಲು (ಸಂಖ್ಯೆ 06273/06274)

* ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ರೈಲು(ಸಂಖ್ಯೆ 06581/06582)

* ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು (ಸಂಖ್ಯೆ 06213)

* ಮೈಸೂರು-ಅರಸೀಕೆರೆ ಪ್ಯಾಸೆಂಜರ್ ರೈಲು (ಸಂಖ್ಯೆ 06214)

* ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ16225)

* ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 16226)

* ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ ರೈಲು (ಸಂಖ್ಯೆ 07365)

* ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ ರೈಲು (ಸಂಖ್ಯೆ 07366)

* ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 16239/16240)

* ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು (ಸಂಖ್ಯೆ 06267)

* ಮೈಸೂರು-ಅರಸೀಕೆರೆ ಪ್ಯಾಸೆಂಜರ್ ರೈಲು (ಸಂಖ್ಯೆ 06268)

* ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ರೈಲು (ಸಂಖ್ಯೆ 06269)

* ಎಸ್ಎಂವಿಟಿ ಬೆಂಗಳೂರು-ಮೈಸೂರು ರೈಲು (ಸಂಖ್ಯೆ 06270) ರೈಲು

* ಕರೈಕಲ್- ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿ ಜೋಡಣೆ ಮಾಡುವ ಮೂಲಕ ಸಂಚಾರಕ್ಕೆ ಅನುಕೂಲ ಮಾಡಿಕೊಲಡಾಗುವುದು ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+