• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

MBBS ಪದವೀಧರರಿಗೆ ಗ್ರಾಮೀಣ ಸೇವೆ ಕಡ್ಡಾಯದಲ್ಲಿ ವಿನಾಯಿತಿ ಇಲ್ಲ: ಹೈಕೋರ್ಟ್

|
Google Oneindia Kannada News

ಬೆಂಗಳೂರು, ಜುಲೈ 22: ಎಂಬಿಬಿಎಸ್ ಪದವೀಧರರಿಗೆ ಗ್ರಾಮೀಣ ಸೇವೆ ಕಡ್ಡಾಯದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಈ ವಿಷಯದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಕರಾರು ಮಾಡಿಕೊಟ್ಟಿದ್ದಾರೆ ಎಂದು ಪೀಠ ಹೇಳಿದೆ. 2020-21ನೇ ಸಾಲಿನಲ್ಲಿ ಎಂಬಿಬಿಎಸ್ ಮುಗಿಸಿದ ವಿದ್ಯಾರ್ಥಿಗಳು ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳಬೇಕು ಎಂದು 2021ರ ಜೂನ್ 8ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಡಾ. ಎನ್. ಪ್ರಾರ್ಥನಾ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು.

ಕೋವಿಡ್‌ 3ನೇ ಅಲೆಯ ನಿರೀಕ್ಷೆ ಇರುವ ಸಂದರ್ಭದಲ್ಲಿ ವೈದ್ಯಕೀಯ ಪದವಿ ಪಡೆದ ಹೊಸ ವಿದ್ಯಾರ್ಥಿಗಳ ಗ್ರಾಮೀಣ ಸೇವೆ ಸರ್ಕಾರಕ್ಕೆ ಅಗತ್ಯವಿದೆ, 'ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಾರೆ ಎಂಬ ವಿಶ್ವಾಸದಿಂದ ಶುಲ್ಕ ರಿಯಾಯಿತಿಯೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಸರ್ಕಾರ ನೀಡಿದೆ ಎಂದು ಹೈಕೋರ್ಟ್ ತಿಳಿಸಿದೆ.

ಈ ಅಧಿಸೂಚನೆ ವಿಷಯದಲ್ಲಿ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ಪೀಠ, 'ಒಂದು ವರ್ಷದ ಗ್ರಾಮೀಣ ಸೇವೆಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರ ಸಮಂಜಸವಾಗಿದೆ' ಎಂದು ಅಭಿಪ್ರಾಯ ಪಟ್ಚಿದೆ.

ವೃತ್ತಿಪರ ವೈದ್ಯರು ತಮ್ಮ ಕರ್ತವ್ಯ ಅರ್ಥ ಮಾಡಿಕೊಳ್ಳುವ ಸಮಯ ಇದಾಗಿದೆ' ಎಂದು ತಿಳಿಸಿತು. 'ಹೊಸದಾಗಿ ಎಂಬಿಬಿಎಸ್‌ ಪದವಿ ಪಡೆದವರ ಗ್ರಾಮೀಣ ಸೇವೆ ಜೂನ್ 30ರಿಂದ ಆರಂಭವಾಗಿದೆ.

ಆಡಳಿತ ಮಂಡಳಿ ಕೋಟಾದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯ ಆಗುವುದಿಲ್ಲ. ಆದ್ದರಿಂದ ಇದು ವಿದ್ಯಾರ್ಥಿಗಳಲ್ಲಿ ತಾರತಮ್ಯ ಹುಟ್ಟು ಹಾಕಿದೆ. ಉನ್ನತ ಶಿಕ್ಷಣಕ್ಕಾಗಿ ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದು, ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದರು.

English summary
The Karnataka High Court declined to stay the notification issued by the State Government which calls upon fresh doctors to undergo compulsory rural service for a period of one year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X