• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನೀಟ್ ಬರೆಯಲು ಮತ್ತೆ ಅವಕಾಶ ಕೊಡಿ: ಜಾವಡೇಕರ್‌ಗೆ ಸದಾನಂದಗೌಡ ಪತ್ರ

|

ಬೆಂಗಳೂರು, ಮೇ 6: ಪರೀಕ್ಷಾ ಕೇಂದ್ರಗಳಲ್ಲಿ ಮಾಡಲಾದ ಬದಲಾವಣೆ ಮತ್ತು ಹಂಪಿ ಎಕ್ಸ್‌ಪ್ರೆಸ್ ರೈಲು ಮಾರ್ಗ ಬದಲಾವಣೆಯಿಂದ ಉಂಟಾದ ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲಾಗದೆ ವಂಚಿತರಾದ ರಾಜ್ಯದ ಸುಮಾರು 500 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೆ ಅವಕಾಶ ನೀಡಬೇಕೆಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಿಂದ ಹೊರಡುವ ಹಂಪಿ ಎಕ್ಸ್‌ಪ್ರೆಸ್ ರೈಲು ಬಳ್ಳಾರಿ, ಹೊಸಪೇಟೆ ಮಾರ್ಗವಾಗಿ ಬೆಂಗಳೂರಿಗೆ ಬೆಳಿಗ್ಗೆ 7 ಗಂಟೆಗೆ ತಲುಪಬೇಕಿತ್ತು. ನೀಟ್ (ಎನ್‌ಇಇಟಿ) ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆಗೆ ಮುಗಿಯುವಂತೆ ವೇಳಾಪಟ್ಟಿ ನಿಗದಿಪಡಿಸಲಾಗಿತ್ತು. ಮಧ್ಯಾಹ್ನ 1.30ಕ್ಕೆ ಪರೀಕ್ಷಾ ಕೊಠಡಿ ಪ್ರವೇಶಿಸಬೇಕಿತ್ತು.

ತಪ್ಪಿದ ನೀಟ್ ಪರೀಕ್ಷೆ: ವಿದ್ಯಾರ್ಥಿಗಳ ಪರ ಮೋದಿಗೆ ಎಚ್‌ಡಿಕೆ ಮನವಿ

ಆದರೆ, ರೈಲು ಬೆಂಗಳೂರಿಗೆ ತಲುಪಿದ್ದೇ ಮಧ್ಯಾಹ್ನ ಸುಮಾರು 2.30ರ ವೇಳೆಗೆ. ಆ ವೇಳೆಗಾಗಲೇ ಪರೀಕ್ಷೆಗಳು ಆರಂಭವಾಗಿದ್ದವು. ಹೀಗಾಗಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿದ್ದರು.

ಲೋಕಸಭಾ ಚುನಾವಣೆ ವಿಶೇಷ ಪುಟ

ತಮ್ಮದಲ್ಲದ ತಪ್ಪಿಗೆ ಪರೀಕ್ಷೆ ಬರೆಯುವುದರಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶನೀಡುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದರು. ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿರುವ ಸಚಿವ ಡಿ.ವಿ. ಸದಾನಂದ ಗೌಡ ಅವರೂ ಸಂಬಂಧಪಟ್ಟ ಇಲಾಖೆಯ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದಾರೆ.

ನನ್ನ ಗಮನಕ್ಕೆ ಬಂದಿದೆ

ಪರೀಕ್ಷಾ ಕೇಂದ್ರ ಬದಲಾವಣೆ ಮತ್ತು ರೈಲು ಆಗಮನ ವಿಳಂಬದಿಂದಾಗಿ ಅನೇಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ತಪ್ಪಿಸಿಕೊಂಡದ್ದು ಮಧ್ಯಾಹ್ನವೇ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳ ಪರವಾಗಿ ಸಂಬಂಧಪಟ್ಟ ಮಂಡಳಿಯ ಮತ್ತು ಸಚಿವರ ಜೊತೆ ಮಾತನಾಡಿ ತಕ್ಷಣ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿದ್ದೇನೆ ಎಂದು ಡಿ.ವಿ. ಸದಾನಂದಗೌಡ ಭಾನುವಾರ ಟ್ವೀಟ್ ಮಾಡಿದ್ದರು.

ನೀಟ್ ಪರೀಕ್ಷೆ ಗೊಂದಲ : ಸಿದ್ದರಾಮಯ್ಯ ಟ್ವೀಟ್

ಮತ್ತೊಮ್ಮ ಅವಕಾಶ ನೀಡಿ

ಹಂಪಿ ಎಕ್ಸ್‌ಪ್ರೆಸ್ ರೈಲು ಸುಮಾರು ಐದು ಗಂಟೆ ತಡವಾಗಿ ಬಂದಿದ್ದರಿಂದ ಉತ್ತರ ಕರ್ನಾಟಕದ ವಿವಿಧ ಭಾಗಗಳ 300ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿದ್ದಾರೆ ಮತ್ತು ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದಲೂ ಅನೇಕರು ಪರೀಕ್ಷೆ ತಪ್ಪಿಸಿಕೊಂಡಿದ್ದು, ಸುಮಾರು 500 ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಬದಲಾದ ಪರೀಕ್ಷಾ ಕೇಂದ್ರಗಳ ಬಗ್ಗೆ ವ್ಯಾಪಕವಾದ ಪ್ರಚಾರ ನೀಡಬೇಕಿತ್ತು ಮತ್ತು ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಬೇಕಿತ್ತು. ಇದರಿಂದ ಈ ಪರಿಸ್ಥಿತಿಯನ್ನು ಸುಲಭವಾಗಿ ತಪ್ಪಿಸಬಹುದಾಗಿತ್ತು. ಈ ಬಗ್ಗೆ ಗಮನ ಹರಿಸಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕು ಎಂದು ಸದಾನಂದ ಗೌಡ ಅವರು ಪ್ರಕಾಶ್ ಜಾವಡೇಕರ್ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ನೀಟ್ ಪರೀಕ್ಷೆ: ಅಂಗಿ, ಶೂ, ಮೂಗುತಿ ಬಿಚ್ಚಿಸಿದ ಪರೀಕ್ಷಾ ವೀಕ್ಷಕರು

ರೈಲ್ವೆ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೇರೆಯವರ ಸಾಧನೆಗಳನ್ನು ಮುಂದಿಟ್ಟುಕೊಂಡು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತೀರಿ. ಆದರೆ, ನಿಮ್ಮ ಸಂಪುಟ ಸಚಿವ ಅಸಮರ್ಥತೆಯ ಹೊಣೆಗಾರಿಕೆಯನ್ನು ನೀವು ತೆಗೆದುಕೊಳ್ಳುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದರು.

ರೈಲು ಸೇವೆಯ ವಿಳಂಬದಿಂದಾಗಿ ನೂರಾರು ವಿದ್ಯಾರ್ಥಿಗಳು ಕರ್ನಾಟಕದಲ್ಲಿ ನೀಟ್ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ನಿಮ್ ಸಚಿವ ಪಿಯೂಷ್ ಗೋಯಲ್ ಅವರಿಗೆ ಮುಂದಿನ ಕೆಲವು ದಿನಗಳವರೆಗೆ ಸರಿಯಾಗಿ ಕೆಲಸ ಮಾಡಲು ಹೇಳಿ. ಬಳಿಕ ನಾವು ಅದನ್ನು ಸರಿಪಡಿಸುತ್ತೇವೆ. ಜತೆಗೆ ಈ ವಂಚಿತ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯಲು ಮತ್ತೊಮ್ಮೆ ಅವಕಾಶ ನೀಡಿ ಎಂದು ಸಿದ್ದರಾಮಯ್ಯ ಹೇಳಿದ್ದರು.

ಮತ್ತೊಂದು ಅವಕಾಶಕ್ಕೆ ಕುಮಾರಸ್ವಾಮಿ ಆಗ್ರಹ

ಹಂಪಿ ಎಕ್ಸ್‌ಪ್ರೆಸ್ ರೈಲು ಸುಮಾರು 7 ಗಂಟೆ ವಿಳಂಬವಾಗಿ ಬಂದಿದ್ದರಿಂದ ಉತ್ತರ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆದ ನೀಟ್ ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದಾರೆ. ಪರೀಕ್ಷಾ ಕೇಂದ್ರದ ಕೊನೆಯ ಕ್ಷಣದ ಬದಲಾವಣೆ ಮತ್ತು ಸೂಕ್ತ ಸಂವಹನದ ಕೊರತೆಯಿಂದಾಗಿ ಕೂಡ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿತ್ತು. ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

English summary
Union Minister DV Sadananda Gowda requested Human Resource Development Minister Prakash Javadekar to give one more opportunity to students who missed the NEET exam on May 5 due to Trail delayed and changes of examination centres.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more