ಡಿಸಿಎಂ ಗೋವಿಂದ ಕಾರಜೋಳಗೆ ಕೋವಿಡ್ ಸೋಂಕು
ಬೆಂಗಳೂರು, ಏಪ್ರಿಲ್ 9; ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಈ ಕುರಿತು ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ.
ಗೋವಿಂದ ಕಾರಜೋಳ ಅವರು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಏಪ್ರಿಲ್ 10 ಮತ್ತು 11ರಂದು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಅವರು ಪ್ರಚಾರ ನಡೆಸಬೇಕಿತ್ತು.
ಆದರೆ, ಕೋವಿಡ್ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನಗಿರುವ ಕೋವಿಡ್ ಸೋಂಕು ಇತರರಿಗೆ ಹರಡಬಾರದೆಂಬ ಕಾರಣಕ್ಕೆ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಅನುಭವಿ ವೈದ್ಯರು ನನಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸುಧಾರಿಸುತ್ತಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತನ್ನು ಇಂದಿನ ಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಇದಕ್ಕಾಗಿ ವಿಷಾದಿಸಿ, ಮತದಾರರ ಕ್ಷಮೆ ಕೋರುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಶ್ರೀ ಗೋವಿಂದ ಎಂ ಕಾರಜೋಳ ಅವರಿಗೆ ಕೋವಿಡ್ pic.twitter.com/OdKP8kMmcs
— Deputy Chief Minister (@GovindKarjol) April 9, 2021
ಏಪ್ರಿಲ್ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್ ಮತ್ತು ಕಾಂಗ್ರೆಸ್‌ನಿಂದ ಆರ್. ಬಸನಗೌಡ ತುರ್ವಿಹಾಳ ಅಭ್ಯರ್ಥಿಗಳಾಗಿದ್ದಾರೆ.












Click it and Unblock the Notifications