ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಜಾರ್ಜ್ ಬಂಧನಕ್ಕೆ ಆಗ್ರಹಿಸಿ ಬೀದಿಗಿಳಿದ ಬಿಜೆಪಿ

By Madhusoodhan
|
Google Oneindia Kannada News

ಬೆಂಗಳೂರು, ಜುಲೈ, 08: ಡಿವೈ ಎಸ್ ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಭಾವಿಗಳು ನೀಡಿರುವ ಒತ್ತಡವೇ ಕಾರಣ. ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ ಜೆ ಜಾರ್ಜ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು, ದಾವಣಗೆರೆ, ಬೆಳಗಾವಿ ಕೊಡಗು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.[ಕರ್ನಾಟಕ ಪೊಲೀಸ್ ಇಲಾಖೆಗೆ ಬಡಿದಿದೆಯಾ ಗ್ರಹಣ!]

bjp

ಬಿಜೆಪಿ ಮುಖಂಡ, ಮಾಜಿ ಗೃಹ ಸಚಿವ ಆರ್ ಅಶೋಕ್, ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು. ಸೋಮವಾರದಿಂದ ವಿಧಾನಸಭೆ ಕಲಾಪ ಆರಂಭವಾಗಲಿದ್ದು ಸದನದಲ್ಲಿ ಹೋರಾಟ ಮುಂದುವರಿಸುವುದಾಗಿ ಹೇಳಿದರು.[ಡಿವೈಎಸ್‌ಪಿ ಆತ್ಮಹತ್ಯೆ : ಸಚಿವ ಜಾರ್ಜ್‌ ಹೇಳುವುದೇನು?]

ಮರಳು ಲಾಬಿ, ಸಾರಾಯಿ ಲಾಬಿ ವಿರುದ್ಧ ಹೋರಾಟ ಮಾಡುತ್ತಿರುವ ಎಲ್ಲ ಅಧಿಕಾರಿಗಳ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ನೀವು ಪ್ರಾಮಾಣಿಕರಾಗಿದ್ದರೆ ಬದುಕಲು ಬಿಡಲ್ಲ. ನಿಮಗೆ ಆತ್ಮಹತ್ಯೆಯೊಂದೇ ದಾರಿ ಎಂದು ಸರ್ಕಾರ ಸಂದೇಶ ನೀಡುತ್ತಿದೆ ಎಂದು ಆರ್ ಅಶೋಕ್ ಆರೋಪಿಸಿದರು.

bjp

ಒಂದು ವಾರದ ಅವಧಿಯಲ್ಲಿ ಇಬ್ಬರು ಡಿವೈ ಎಸ್ ಪಿ ಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ರಾಜ್ಯದ ಪೊಲೀಸ್ ಇಲಾಖೆ ಪರಿಸ್ಥಿತಿ ಎಲ್ಲಿಗೆ ತಲುಪಿದೆ ಎಂಬುದು ಅರ್ಥವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.[ಕರ್ನಾಟಕ ಬಿಜೆಪಿ ಕೋರ್ ಕಮಿಟಿಯಿಂದ ಶೋಭಾ ಔಟ್!]
bjp

ಮಡಿಕೇರಿಯಲ್ಲೂ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲೂ ಪ್ರತಿಭಟನೆ ನಡೆಸುತ್ತಿದ್ದು ಎಂಕೆ ಗಣಪತಿ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮಂಗಳೂರು ಐಜಿ ಕಚೇರಿಯಲ್ಲಿ ಡಿವೈ ಎಸ್ ಪಿ ಯಾಗಿದ್ದ ಮಡಿಕೇರಿಯ ಎಂಕೆ ಗಣಪತಿ ಗುರುವಾರ ಸಂಜೆ ಮಡಿಕೇರಿಯ ವಸತಿ ಗೃಹವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

bjp

English summary
BJP demanded resignation of Bengaluru Development Minister K J George regarding DySP MK Ganapathi Suicide case. BJP Leaders gathered at Mysuru bank circle on 08 July , 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X