ಡಿವೈಎಸ್ಪಿ ಗಣಪತಿ ಕೇಸ್: ಸಚಿವ ಜಾರ್ಜ್ ಗೆ ಸುಪ್ರೀಂನಿಂದ ನೋಟಿಸ್

Posted By:
Subscribe to Oneindia Kannada

ಬೆಂಗಳೂರು, ಜುಲೈ 14: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಸುಪ್ರೀಂಕೋರ್ಟಿನಿಂದ ನೋಟಿಸ್ ಜಾರಿಯಾಗಿದೆ.

ಗಣಪತಿ ಸಾವಿನ ಪ್ರಕರಣದ Timeline

ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಗಣಪತಿ ಅವರ ತಂದೆ ಎಂ.ಕೆ. ಕುಶಾಲಪ್ಪ ಅವರು ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜಾರಿಯಲ್ಲಿದೆ.

ಕರ್ನಾಟಕ : ಪೊಲೀಸರ ಆತ್ಮಹತ್ಯೆಗೆ ಪ್ರಮುಖ ಕಾರಣಗಳೇನು?

DYSP Ganapathi Death Case : SC issues notice to Minister KJ George

ಆತ್ಮಹತ್ಯೆಗೂ ಮುನ್ನ ಗಣಪತಿ ತಮ್ಮ ಜೀವಕ್ಕೆ ಯಾವುದೇ ರೀತಿಯ ತೊಂದರೆಯಾದರೆ ಗೃಹಸಚಿವರಾಗಿದ್ದ ಕೆ.ಜೆ.ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರೇ ಕಾರಣವೆಂದು ಆರೋಪ ಮಾಡಿದ್ದಾರೆ.

ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?

ವಿಡಿಯೋ ಸಾಕ್ಷ್ಯವಿದ್ದರೂ ಯಾವುದೇ ಕ್ರಮ ಜರುಗಿಸುವಲ್ಲಿ ಕರ್ನಾಟಕ ಸರ್ಕಾರ, ತನಿಖಾ ತಂಡ ವಿಫಲವಾಗಿದೆ, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಎಂಕೆ ಗಣಪತಿ ಅವರ ತಂದೆ ಕುಶಾಲಪ್ಪ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಜಾರ್ಜ್, ಪ್ರಣವ್ ಮೊಹಾಂತಿ ಹಾಗೂ ಎ.ಎಂ ಪ್ರಸಾದ್ ಮೂವರಿಗೂ ಕ್ಲೀನ್ ಚಿಟ್ ನೀಡಿ, ಬಿ ರಿಪೋರ್ಟ್ ಸಲ್ಲಿಸಿದೆ. ಸಿಬಿಐ ತನಿಖೆಗೆ ಕೋರಿ ಹೈಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡ ಬಳಿಕ, ಗಣಪತಿ ಅವರ ಸೋದರ ಮಾಚಯ್ಯ, ಸೋದರಿ ಬಬಿತಾ, ತಂದೆ ಕುಶಾಲಪ್ಪ ಎಲ್ಲರೂ ಸುಪ್ರೀಂಕೋರ್ಟಿಗೆ ಅರ್ಜಿ ಹಾಕಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
DYSP Ganapathi Death Case : Supreme Court issued a notice to Minister KJ George and other two senior Police officers Pranab Mohanty and AM Prasad.
Please Wait while comments are loading...