ಕಪ್ಪುಪಟ್ಟಿ ಧರಿಸಿ ಧರಣಿ ನಿರತ ಪ್ರತಿಪಕ್ಷಗಳ ಪಾದಯಾತ್ರೆ

Written By:
Subscribe to Oneindia Kannada

ಬೆಂಗಳೂರು, ಜುಲೈ, 14: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ಮುಂದುವರಿಸಿದ್ದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಬಿಜೆಪಿ ನಾಯಕ ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಧರಣಿ ನಿರತ ಶಾಸಕರು ವಿಧಾನಸೌಧದ ಸುತ್ತಲೂ ಪಾದಯಾತ್ರೆ ಮಾಡಿದರು.[ಸದನದ ಅಹೋರಾತ್ರಿ ಧರಣಿ: ಮಟನ್ ನಿಂದ ಅನ್ನಾಸಾಂಬರ್ ವರೆಗೆ]

bjp

ಧರಣಿ ನಡೆಸುತ್ತಿದ್ದ ಎಲ್ಲ ಶಾಸಕರು ಕಪ್ಪು ಪಟ್ಟಿ ಧರಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗಾಂಧಿ ಪ್ರತಿಮೆ ಎದುರು ಕುಳಿತ ಶಾಸಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿದರು.[ಗದ್ದಲದ ನಡುವೆಯೇ ಪರಿಷತ್ತಿನಲ್ಲಿ 3 ವಿಧೇಯಕಗಳಿಗೆ ಒಪ್ಪಿಗೆ]

ಧರಣಿ ನಿರತ ಪ್ರತಿಪಕ್ಷಗಳ ಜೊತೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ಗುರುವಾರ ಮಧ್ಯಾಹ್ನ ನಡೆಸಿದ ಸಭೆ ವಿಫಲವಾಗಿತ್ತು. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಲೇ ಇದೆ. ಸದನ ಕಲಾಪದ 4 ದಿನವನ್ನು ಜಾರ್ಜ್ ರಾಜೀನಾಮೆ ಪ್ರಹಸನವೇ ಬಲಿ ತೆಗೆದುಕೊಂಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
DySP Ganapathi suicide case: Karnaraka BJP and JDS MLAs continues their overnight protest at Karnataka Assembly demanding resignation of Bengaluru Development Minister KJ George.
Please Wait while comments are loading...