ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಹೋರಾತ್ರಿ ಧರಣಿಗೆ ಒಂದಾದ ಬಿಜೆಪಿ-ಜೆಡಿಎಸ್

By Madhusoodhan
|
Google Oneindia Kannada News

ಬೆಂಗಳೂರು, ಜುಲೈ, 13: ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು, ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ನಾಯಕ ಕುಮಾರ ಸ್ವಾಮಿ ಅವರು, ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಂಗ ತನಿಖೆಗೆ ಒಪ್ಪಿಸಿರುವ ನಿರ್ಧಾರ ಸರಿಯಲ್ಲ ಎಂದು ಆರೋಪಿಸಿ ಧರಣಿ ಆರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.[ನ್ಯಾಯಾಂಗ ತನಿಖೆ ಮೇಲೆ ನಂಬಿಕೆ ಇಲ್ಲ: ಗಣಪತಿ ಪತ್ನಿ ಪಾವನಾ]

bjp

ಪ್ರಕರಣ ಮುಚ್ಚಿಹಾಕಲು ರಾಜ್ಯ ಸರ್ಕಾರ ಹವಣಿಸುತ್ತಿದೆ. ಜಾರ್ಜ್ ರಾಜೀನಾಮೆ ಪಡೆಯುವ ತನಕ ಧರಣಿ ನಡೆಸುತ್ತೇವೆ ಎಂದು ಶೆಟ್ಟರ್ ಹೇಳಿದ್ದಾರೆ. ಶಾಸಕರಿಗೆ ಇದ್ದಲ್ಲಿಯೇ ಊಟದ ವ್ಯವಸ್ಥೆಯನ್ನು ಮಾಡಿಕೊಡಲಾಗಿದೆ.[ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]

ಗುರುವಾರ ಕಲಾಪ ಆರಂಭವಾಗಲಿದ್ದು ಪ್ರತಿಪಕ್ಷಗಳು ಹೋರಾಟ ಮುಂದುವರಿಸಲಿವೆ. ಸರ್ಕಾರ ಸಿಬಿಐ ತನಿಖೆಗೆ ಆದೇಶ ನೀಡದಿದ್ದರೆ ನಾಳೆಯೂ ಅಹೋರಾಥ್ರಿ ಧರಣಿ ಮುಂದುವರಿಯಲಿದೆ.

ರಾಜಕೀಯವೇ ಕಾರಣ
ಪ್ರತಿಪಕ್ಷಗಳ ಪ್ರತಿಭಟನೆಗೆ ಅರ್ಥವಿಲ್ಲ. ಕೇವಲ ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

English summary
DySP Ganapathi suicide case: Karnaraka BJP and JDS MLAs start overnight protest at Karnataka Assembly demanding resignation of Bengaluru Development Minister KJ George.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X