ಗಣಪತಿ ಆತ್ಮಹತ್ಯೆ ಪ್ರಕರಣ, ಸಿಬಿಐ ತನಿಖೆಗಾಗಿ ಹೈಕೋರ್ಟ್‌ಗೆ ಅರ್ಜಿ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 17 : ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆಯಾಗಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಗಣಪತಿ ಅವರ ತಂದೆ ಮತ್ತು ಸಹೋದರ ಸಿಬಿಐ ತನಿಖೆಗಾಗಿ ಮನವಿ ಮಾಡಿದ್ದಾರೆ.

ಶುಕ್ರವಾರ ಎಂ.ಕೆ.ಗಣಪತಿ ಅವರ ತಂದೆ ಕುಶಾಲಪ್ಪ ಮತ್ತು ಸಹೋದರ ಎಂ.ಕೆ.ಮಾಚಯ್ಯ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.[ಗಣಪತಿ ಸಾವಿನ ಪ್ರಕರಣದ Timeline]

mk ganapathi

ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಈ ತನಿಖೆಯಿಂದ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇಲ್ಲ. ಆದ್ದರಿಂದ, ಸಿಬಿಐ ತನಿಖೆ ನಡೆಯಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಕೇಳಿಬಂದಿದೆ. ಸಿಬಿಐ ತನಿಖೆ ನಡೆಯುವುದೇ ಸೂಕ್ತ ಎಂದು ಹೇಳಿದ್ದಾರೆ.[ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]

ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಬಿ ರಿಪೋರ್ಟ್ ಹಾಕಿ ಪ್ರಕರಣದ ತನಿಖೆಯನ್ನು ಅಂತ್ಯಗೊಳಿಸಲು ಸಿಐಡಿ ಮುಂದಾಗಿದೆ. ಆದ್ದರಿದ, ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಮನವಿ ಮಾಡಲಾಗಿದೆ.[ಗಣಪತಿ ಆತ್ಮಹತ್ಯೆ, ಸಿಐಡಿ ತನಿಖೆಗೆ ಗಡುವು ನಿಗದಿ]

ಜುಲೈ 7ರಂದು ಮಂಗಳೂರು ಐಜಿ ಕಚೇರಿಯ (ಪಶ್ಚಿಮ ವಲಯ) ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರ ಮೊದಲು ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ನಂತರ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The father and brother of DySP M.K. Ganapathy who allegedly committed suicide, moved the high court of Karnataka seeking a probe by the CBI into Ganapathy’s death.
Please Wait while comments are loading...