ಕರ್ನಾಟಕ ಸರ್ಕಾರಕ್ಕೆ ಮತ್ತೊಮ್ಮೆ ಗಣಪತಿ ಆತ್ಮಹತ್ಯೆ ಕೇಸ್ ಕಾಟ

Posted By:
Subscribe to Oneindia Kannada

ಬೆಂಗಳೂರು, ಜನವರಿ 06: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಗಣಪತಿ ಅವರ ತಂದೆ ಎಂ.ಕೆ. ಕುಶಾಲಪ್ಪ ಅವರು ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ಕರ್ನಾಟಕ ಸರ್ಕಾರಕ್ಕೆ ಮತ್ತೊಮ್ಮೆ ತಲೆನೋವು ಶುರುವಾಗಿದೆ.

ಎಂಕೆ ಗಣಪತಿ ಅವರ ತಂದೆ ಕುಶಾಲಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಏಕೆ ನೀಡಬಾರದು ಎಂದು ಕಾರಣ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಶುಕ್ರವಾರದಂದು ಪ್ರಶ್ನಿಸಿದೆ.[ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]

DySP Ganapati case returns to haunt Karnataka government

ಆತ್ಮಹತ್ಯೆಗೂ ಮುನ್ನ ಗಣಪತಿ ತಮ್ಮ ಜೀವಕ್ಕೆ ಯಾವುದೇ ರೀತಿಯ ತೊಂದರೆಯಾದರೆ ಗೃಹಸಚಿವರಾಗಿದ್ದ ಕೆ.ಜೆ.ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರೇ ಕಾರಣವೆಂದು ಆರೋಪ ಮಾಡಿದ್ದಾರೆ. ವಿಡಿಯೋ ಸಾಕ್ಷ್ಯವಿದ್ದರೂ ಯಾವುದೇ ಕ್ರಮ ಜರುಗಿಸುವಲ್ಲಿ ಕರ್ನಾಟಕ ಸರ್ಕಾರ, ತನಿಖಾ ತಂಡ ವಿಫಲವಾಗಿದೆ, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಎಂಕೆ ಗಣಪತಿ ಅವರ ತಂದೆ ಕುಶಾಲಪ್ಪ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಸಿಐಡಿ ಅಧಿಕಾರಿಗಳು ಈ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮೇಲ್ಕಂಡ ಆರೋಪಿಗಳ ವಿರುದ್ಧ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಅಲ್ಲದೆ ತನಿಖೆ ಅಂತಿಮ ಹಂತದಲ್ಲಿರುವಾಗ ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸುವಂತೆ ಕೋರಿರುವುದು ಸರಿಯಲ್ಲ. ನ್ಯಾಯಾಂಗ ಆಯೋಗವೂ ತನಿಖೆ ಮುಂದುವರಿಸಿದೆ. ಹೀಗಾಗಿ ಈ ಪ್ರಕರಣ ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಈ ಹಿಂದೆ ಹೈಕೋರ್ಟ್ ನ್ಯಾ.ಎಸ್.ಅಬ್ದುಲ್‌ನಜೀರ್ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Supreme court on Thursday asked Karnataka government 's reply on a petition in DySP M K Ganapati. The apex court asked the government why the case should not be handed over to the Central bureau of investigation.
Please Wait while comments are loading...