ಕಲ್ಲಪ್ಪ ಹಂಡಿಭಾಗ್ ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆ

Posted By:
Subscribe to Oneindia Kannada

ಬೆಂಗಳೂರು, ಜುಲೈ 14 : ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ. 'ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆಗೆ ಕಾರಣರಾದವರು ಯಾರೇ ಇರಲಿ, ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.[ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ]

ಬುಧವಾರದ ವಿಧಾನಸಭೆ ಕಲಾಪದಲ್ಲಿ ಉತ್ತರ ನೀಡಿದ ಸಿದ್ದರಾಮಯ್ಯ ಅವರು, 'ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರು ಸಹ ದುರದೃಷ್ಟವಶಾತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತೀರಾ ಬಡಕುಟುಂಬದಿಂದ ಬಂದಿದ್ದು ಈಗ ಚಿಕ್ಕ ವಯಸ್ಸಿನ ಪತ್ನಿ ಹಾಗೂ ಒಂದು ವರ್ಷದ ಮಗುವನ್ನು ಅಗಲಿದ್ದಾರೆ' ಎಂದರು.[ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಕೊಟ್ಟ ಉತ್ತರ]

DySP Kallappa Handibag wife may get government job soon

'ಸರ್ಕಾರವು ಮಾನವೀಯತೆಯ ದೃಷ್ಟಿಯಿಂದ ಬಿಎಸ್‌ಸಿ ಪದವೀಧರೆಯಾಗಿರುವ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿಗೆ ತತ್ಸಮಾನ ಉದ್ಯೋಗವನ್ನು ದೊರಕಿಸಿಕೊಡಲಿದೆ' ಎಂದು ಘೋಷಣೆ ಮಾಡಿದರು.

ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರ ಈ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.[ಕಲ್ಲಪ್ಪ ಪ್ರಕರಣದಲ್ಲಿ ಕಿಡ್ನಾಪ್ ಆಗಿದ್ದ ತೇಜಸ್ ಹೇಳಿದ್ದೇನು?]

'ಕಲ್ಲಪ್ಪ ಅವರ ಆತ್ಮಹತ್ಯೆ ಪ್ರಕರಕಲ್ಲಪ್ಪ ಪ್ರಕರಣದಲ್ಲಿ ಕಿಡ್ನಾಪ್ ಆಗಿದ್ದ ತೇಜಸ್ ಹೇಳಿದ್ದೇನು?ಣದಲ್ಲಿ ಹಲವಾರು ಹೆಸರುಗಳು ಕೇಳಿಬಂದಿವೆ. ವಿಶ್ವಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತನಾಗಿದ್ದು, ಸುಮಾರು 32 ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಪ್ರವೀಣ್ ಖಾಂಡ್ಯನ ಹೆಸರಿನ ಜೊತೆಗೆ ಇನ್ನೂ ಹಲವು ಹೆಸರುಗಳು ಕೇಳಿಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ' ಎಂದರು.

'ಪೊಲೀಸರ ಕೆಲಸ ಎಂಬುದು ತೀರಾ ಒತ್ತಡದ ಕೆಲಸ ಎಂದು ನಮಗೆಲ್ಲ ಗೊತ್ತಿದೆ. ಈ ಕಾರಣದಿಂದಲೇ ಪೊಲೀಸರು ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ಕಾಣಬಹುದು. ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ ದಲ್ಲಿರುವ ಮಾಹಿತಿ ಪ್ರಕಾರ 2003 ರಿಂದ 2013ರ ವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 122 ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಸಿದ್ದರಾಮಯ್ಯ ಸದನಕ್ಕೆ ಮಾಹಿತಿ ನೀಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah assured the Legislative Assembly of considering the possibility of providing government job for Chikkamagaluru Deputy Superintendents of Police (DySP) Kallappa Handibag who committed suicide on July 5, 2016.
Please Wait while comments are loading...