ಕಲ್ಲಪ್ಪ ಆತ್ಮಹತ್ಯೆ: ಚಿಕ್ಕಮಗಳೂರು ಬಂದ್ ಯಶಸ್ವಿ
ಚಿಕ್ಕಮಗಳೂರು, ಜುಲೈ, 16: ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಚಿಕ್ಕಮಗಳೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಚಿಕ್ಕಮಗಳೂರು ನಗರದಲ್ಲಿ ಮೆರವಣಿಗೆ ನಡೆಸಿದವು.[ಕಲ್ಲಪ್ಪ ಆತ್ಮಹತ್ಯೆ: ಸಿಐಡಿ ಕಲೆ ಹಾಕಿದ ಮಾಹಿತಿ ಏನು]

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವೇ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ. ಚಿಕ್ಕಮಗಳೂರು ಡಿವೈಎಸ್ ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ರಾಜಕಾರಣಿಗಳಿಗೂ ಬೇಕಾಗಿಲ್ಲ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.
ಕಲ್ಲಪ್ಪ ಆತ್ಮಹತ್ಯೆ ತನಿಖೆಯನ್ನು ಸಮರ್ಪಕವಾಗಿ ನಡೆಸಬೇಕು. ಪ್ರಕರಣದಲ್ಲಿ ಹೆಸರು ಕೇಳಿಬಂದಿರುವರರನ್ನು ಬಂಧಿಸಬೇಕು ಎಂದು ಸಂಘಟನೆಗಳು ಒತ್ತಾಯ ಮಾಡಿದವು.[ಕಲ್ಲಪ್ಪ ಯಾರು?]
ಚಿಕ್ಕಮಗಳೂರು ಡಿವೈ ಎಸ್ ಪಿ ಯಾಗಿದ್ದ ಕಲ್ಲಪ್ಪ ಹಂಡಿಭಾಗ್ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡದಲ್ಲಿನ ತಮ್ಮ ಮಾವನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಅನೇಕ ಪ್ರಶ್ನೆಗಳನ್ನು ಹುಟ್ಟಿಹಾಕಿತ್ತು. ಅಪಹರಣ ಮತ್ತು ಹಣಕ್ಕಾಗಿ ಬೇಡಿಕೆಯಿಟ್ಟ ಆರೋಪ ಹಂಡಿಭಾಗ್ ಅವರ ಮೇಲೆ ಬಂದಿತ್ತು.












Click it and Unblock the Notifications