ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂ.ಕೆ.ಗಣಪತಿ ಆತ್ಮಹತ್ಯೆ, ನ್ಯಾಯಾಂಗ ತನಿಖೆ?

|
Google Oneindia Kannada News

ಬೆಂಗಳೂರು, ಜುಲೈ 09 : ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಯುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಈಗಾಗಲೇ ತನಿಖೆಯನ್ನು ಸಿಐಡಿಗೆ ವಹಿಸಿದೆ. ಆದರೆ ಪ್ರತಿಪಕ್ಷಗಳಿಂದ ತಪ್ಪಿಸಿಕೊಳ್ಳಲು ಈ ತೀರ್ಮಾನ ಕೈಗೊಳ್ಳಬಹುದು.

ಮಳೆಗಾಲದ ವಿಧಾನಮಂಡಲ ಅಧಿವೇಶನ ಈಗಾಗಲೇ ಆರಂಭವಾಗಿದೆ. ಸೋಮವಾರದ ಕಲಾಪದಲ್ಲಿ ಪ್ರತಿಪಕ್ಷಗಳು ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಲಿವೆ. ಸಿಬಿಐ ತನಿಖೆಗೆ ನೀಡುವಂತೆಯೂ ಬಿಜೆಪಿ ಮತ್ತು ಜೆಡಿಎಸ್‌ ಒತ್ತಾಯಿಸಬಹುದು. [ಗಣಪತಿ ಆತ್ಮಹತ್ಯೆ, ಶುಕ್ರವಾರದ 10 ಬೆಳವಣಿಗೆಗಳು]

siddaramaiah

ಆದ್ದರಿಂದ, ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸೋಮವಾರ ಸದನದಲ್ಲಿ ಗದ್ದಲ ಹೆಚ್ಚಾದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿಯೇ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. [ಜಾರ್ಜ್ ವಿರುದ್ಧ FIR ದಾಖಲಿಸಬೇಕೆ?, ಓದುಗರ ಅಭಿಪ್ರಾಯ]

'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ, ಸೋಮವಾರ ಈ ಬಗ್ಗೆ ಸದನದಲ್ಲಿ ಬಿಸಿ-ಬಿಸಿ ಚರ್ಚೆ ನಡೆಯಲಿದೆ. [ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]

ಅವರು ಹೇಳಿದಂತೆ ಕೇಳಲು ಆಗುತ್ತದೆಯೇ? : ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದಾದರೂ ಪ್ರಕರಣವನ್ನು ಸಿಬಿಐಗೆ ನೀಡಿದೆಯೇ?' ಎಂದು ಪ್ರಶ್ನಿಸಿದರು.[ಗಣಪತಿ ಆತ್ಮಹತ್ಯೆ : ಯಾರು, ಏನು ಹೇಳಿದರು?]

'ಪ್ರಕರಣದ ಬಗ್ಗೆ ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದೆ. ಬೇಗ ತನಿಖೆ ಮುಗಿಯುತ್ತದೆ. ವಿರೋಧ ಪಕ್ಷದವರು ಹೇಳಿದಂತೆ ಕೇಳಲು ಆಗುತ್ತಾ?. ಜನರ ಹಿತಾಸಕ್ತಿಯಂತೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ' ಎಂದು ಸಿದ್ದರಾಮಯ್ಯ ಹೇಳಿದರು.

English summary
Karnataka government may order for judicial probe on DySP MK Ganapathi suicide case. Mangaluru Deputy Superintendent of Police (DySP) M.K. Ganapathi committed suicide in Madikeri on July 7, 2016 and CID investigating case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X