ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ, ನ್ಯಾಯಾಂಗ ತನಿಖೆ

Posted By:
Subscribe to Oneindia Kannada

ಬೆಂಗಳೂರು, ಜುಲೈ 13 : ಮಂಗಳೂರು ಐಜಿ ಕಚೇರಿ (ಪಶ್ಚಿಮ ವಲಯ) ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯಲಿದೆ. ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸದನದಲ್ಲಿ ಆಹೋರಾತ್ರಿ ಧರಣಿ ನಡೆಸಲು ಮುಂದಾಗಿವೆ.

ಬುಧವಾರ ಸಂಜೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ. 'ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದರು. ಈ ಮೊದಲು ಸರ್ಕಾರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.[ಗಣಪತಿ ಆತ್ಮಹತ್ಯೆ, ಸಚಿವ ಜಾರ್ಜ್ ಹೇಳುವುದೇನು?]

mk ganapathi

ಇಂದು ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿವೈಎಸ್‌ಪಿ ಗಣಪತಿ, ಡಿವೈಎಸ್‌ಪಿ ಕಲ್ಲಪ್ಪ ಅವರ ಆತ್ಮಹತ್ಯೆ ಬಗ್ಗೆ ಎರಡು ದಿನಗಳಿಂದ ನಿಯಮ 69ರ ಅಡಿ ನಡೆದ ಚರ್ಚೆಗೆ ಉತ್ತರ ನೀಡಿದರು. ಈ ಸಂದರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ಸಮರ್ಥಿಸಿಕೊಂಡಿದ್ದರು. [ಸದನದಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?]

ಪ್ರತಿಪಕ್ಷಗಳು ಮುಖ್ಯಮಂತ್ರಿಗಳ ಉತ್ತರಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತು ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಒತ್ತಾಯಿಸಿದ್ದವು. ಆದರೆ, ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. [ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]

ಆಹೋರಾತ್ರಿ ಧರಣಿ : ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಅಹೋರಾತ್ರಿ ಧರಣಿ ನಡೆಸಲಿವೆ. ಪ್ರತಿಪಕ್ಷಗಳ ಧರಣಿ ಹಿನ್ನಲೆಯಲ್ಲಿ ವಿಧಾನಸಭೆ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ. [ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ಕೊಡಿ]

ಜಂಟಿ ಸುದ್ದಿಗೋಷ್ಠಿ : ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಶಾಸಕಾಂಗ ನಾಯಕ ಜಗದೀಶ್ ಶೆಟ್ಟರ್, ಜೆಡಿಎಸ್‌ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು, 'ಸರ್ಕಾರ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನ ನಡೆಸುತ್ತಿದೆ. ಸಿಬಿಐ ತನಿಖೆಗೆ ಆದೇಶ ನೀಡುವ ತನಕ ಮತ್ತು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯುವ ತನಕ ಆಹೋರಾತ್ರಿ ಧರಣಿಯನ್ನು ಮುಂದುವರೆಸುತ್ತೇವೆ' ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka government ordered for judicial probe on DySP MK Ganapathi suicide case. Mangaluru Deputy Superintendent of Police (DySP) M.K. Ganapathi committed suicide in Madikeri on July 7, 2016.
Please Wait while comments are loading...