ಡಿವೈಎಸ್‌ಪಿ ಆತ್ಮಹತ್ಯೆ : ಸಚಿವ ಜಾರ್ಜ್‌ ಹೇಳುವುದೇನು?

Posted By:
Subscribe to Oneindia Kannada

ಬೆಂಗಳೂರು, ಜುಲೈ 08 : 'ಪ್ರತಿಪಕ್ಷಗಳು ನನ್ನನ್ನು ವಿನಾಕಾರಣ ಟಾರ್ಗೆಟ್ ಮಾಡುತ್ತಿವೆ. ಅಧಿಕಾರಿಗೆ ಮಾನಸಿಕ ಕಿರುಕುಳ ನೀಡುವ ಪ್ರಶ್ನೆಯೇ ಇಲ್ಲ. ಒಮ್ಮೆ ಮಾತ್ರ ಗಣಪತಿ ಅವರು ನನ್ನನ್ನು ಭೇಟಿ ಮಾಡಿದ್ದರು' ಎಂದು ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದರು.

'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿಕೆ ನೀಡಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. [ಕರ್ನಾಟಕ ಪೊಲೀಸ್ ಇಲಾಖೆಗೆ ಏನಾಗಿದೆ?]

kj george

ಮಂಗಳೂರು ಐಜಿ ಕಚೇರಿಯ (ಪಶ್ಚಿಮ ವಲಯ) ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮಾಧ್ಯಮಗಳಿಗೆ ಶುಕ್ರವಾರ ಬೆಳಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.... [ಕೊನೆಯಲ್ಲಿ ಎಂ.ಕೆ.ಗಣಪತಿ ಅವರು ಹೇಳಿದ್ದೇನು?]

ಕೆ.ಜೆ.ಜಾರ್ಜ್ ಹೇಳಿದ್ದೇನು.....

* ಕೇಸ್ ಒಂದರ ಸಂಬಂಧ ಎಂ.ಕೆ.ಗಣಪತಿ ಅವರನ್ನು ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದರು. ಆಗ ಅವರು ನನ್ನನ್ನು ಭೇಟಿಯಾಗಿದ್ದರು. ಇಲಾಖೆಯ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಅವರಿಗೆ ತಿಳಿಸಿದ್ದೆ.

* ಎಂ.ಕೆ.ಗಣಪತಿ ಅವರಿಗೆ ಸರಿಯಾದ ಹುದ್ದೆ ನೀಡಿಲ್ಲ ಎಂಬ ಆರೋಪಗಳಲ್ಲಿ ಹುರುಳಿಲ್ಲ. ನಾನು ಗೃಹ ಸಚಿವನಾಗಿದ್ದಾಗ ಗಣಪತಿ ಅವರು ಪೊಲೀಸ್ ಇನ್ಸಪೆಕ್ಟರ್ ಆಗಿದ್ದರು. [ಎಂ.ಕೆ.ಗಣಪತಿ ಅವರ ಪರಿಚಯ]

* ಪ್ರತಿಪಕ್ಷಗಳು ನಾನು ಅಧಿಕಾರ ಸ್ವೀಕರಿಸಿದ ದಿನದಿಂದ ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿವೆ. ಅವರು ಹೇಳಿದ ತಕ್ಷಣ ರಾಜೀನಾಮೆ ಕೊಡಲು ಆಗುವುದಿಲ್ಲ. ಮಾಡಿರುವ ಆರೋಪಗಳಿಗೆ ಸರಿಯಾದ ದಾಖಲೆಗಳನ್ನು ನೀಡಲಿ.

* ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಬಳಿ ಏನೂ ಮಾತನಾಡಿಲ್ಲ. ಅವರು ಕೇಳಿದರೆ ಉತ್ತರ ನೀಡುತ್ತೇನೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Bengaluru Development Minister K.J.George clarification on DySP MK Ganapathi suicide. Mangalore Inspector General office (Western Range) DySP MK Ganapathi committed suicide On July 7, 2016.
Please Wait while comments are loading...