ಸಚಿವ ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಸೂಚನೆ

ಮಡಿಕೇರಿ, ಜುಲೈ 18 : ಮಂಗಳೂರು ಐಜಿ ಕಚೇರಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಸೂಚನೆ ನೀಡಿದೆ. [ಜಾರ್ಜ್ ವಿರುದ್ಧ FIR : ಯಾರು, ಏನು ಹೇಳಿದರು?]

ಮಡಿಕೇರಿ ಜೆಎಂಎಫ್‌ಸಿ ಕೋರ್ಟ್ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು ಸೋಮವಾರ ಮಧ್ಯಾಹ್ನ ಈ ಕುರಿತು ಆದೇಶ ನೀಡಿದ್ದಾರೆ. ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಅವರು ಜುಲೈ 11ರಂದು ಸಲ್ಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ. [ಗಣಪತಿ ಆತ್ಮಹತ್ಯೆ, ಸಚಿವ ಜಾರ್ಜ್ ಹೇಳುವುದೇನು?]

kj george

ಸಚಿವ ಕೆ.ಜೆ.ಜಾರ್ಜ್, ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಜೆಎಂಎಫ್‌ಸಿ ಕೋರ್ಟ್ ಮಡಿಕೇರಿ ಟೌನ್ ಪೊಲೀಸರಿಗೆ ಆದೇಶ ನೀಡಿದೆ. ಇದರಿಂದ ಸಚಿವರಿಗೆ ಹೊಸ ಸಂಕಷ್ಟ ಎದುರಾಗಿದೆ. [ಗಣಪತಿ ಆತ್ಮಹತ್ಯೆ, ಎಡಿಜಿಪಿ ಎ.ಎಂ.ಪ್ರಸಾದ್ ಹೇಳಿದ್ದೇನು?]

ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 'ನನಗೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. [ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]

ಈ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ನೇಹಾಲ್ ಅವರು ಮೂರು ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಿ, ತನಿಖೆ ನಡೆಸಬೇಕು ಎಂದು ಜೆಎಂಎಫ್‌ಸಿ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರಿಗ ಮಾನ್ಯತೆ ನೀಡಿರುವ ಕೋರ್ಟ್‌ ಎಫ್‌ಐಆರ್ ದಾಖಲು ಮಾಡಲು ಸೂಚಿಸಿದೆ.

ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಅವರ ಪರವಾಗಿ ಹಿರಿಯ ವಕೀಲ ಎಂ.ಟಿ.ನಾಣಯ್ಯ ಅವರು ವಾದ ಮಂಡನೆ ಮಾಡಿದ್ದರು. 'ಕೋರ್ಟ್ ಆದೇಶದಿಂದಾಗಿ ಗಣಪತಿ ಅವರ ಕುಟುಂಬಕ್ಕೆ ಪ್ರಾಥಮಿಕ ಜಯ ಸಿಕ್ಕಿದಂತಾಗಿದೆ' ಎಂದು ನಾಣಯ್ಯ ಅವರು ಪ್ರತಿಕ್ರಿಯೆ ನೀಡಿದರು.

ಎ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಈ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಕಳೆದ ವಾರ ಸರ್ಕಾರ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+