E- Khata: ಕರ್ನಾಟಕದ ಈ ಜಿಲ್ಲೆಯಲ್ಲಿ ಶೇ.48.76 ಮಾತ್ರ ಇ - ಖಾತಾ ಪ್ರಗತಿ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು

E- Khata: ಕರ್ನಾಟಕದ ಪ್ರಮುಖ ಜಿಲ್ಲೆಯಲ್ಲಿ ಇ - ಖಾತಾ ವಿತರಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ.

ವಿಜಯಪುರ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿಗೆ ನಾವು ಸದಾ ಬದ್ಧ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಜಯಪುರ, ಬಾಕಿ ವಸೂಲಿ, ಇ-ಖಾತಾ, ತ್ಯಾಜ್ಯ ನಿರ್ವಹಣೆ ಹಾಗೂ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ನಿಮ್ನ ಅಭಿವೃದ್ದಿಯೇ ನಮ್ಮ ಧ್ಯೇಯ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

E- Khata

ವಿಜಯಪುರ ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆ ಹಾಗೂ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಸಚಿವರು ನಗರದ ಕುಡಿಯುವ ನೀರು, ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಆಸ್ತಿ ತೆರಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಿ, ಇ-ಖಾತಾ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲಿಸಿದರು. ಮಳೆಯ ಹಿನ್ನೆಲೆಯಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ.

ಮುಂದುವರಿದು ಮಹಾನಗರ ಪಾಲಿಕೆಗೆ ಬರಬೇಕಿರುವ ಆಸ್ತಿ ತೆರಿಗೆ ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆಯನ್ನು ಯಾವುದೇ ಬಾಕಿ ಉಳಿಸದೆ ಪರಿಣಾಮಕಾರಿಯಾಗಿ ವಸೂಲಿ ಮಾಡಬೇಕು ತೆರಿಗೆ ಹಾಗೂ ಇತರೆ ಆದಾಯ ಮೂಲಗಳ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದಲ್ಲಿ ಈಗಾಗಲೇ 2 ವಿಕೇಂದ್ರೀಕೃತ ತ್ಯಾಜ್ಯ ನಿರ್ವಹಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 2 ಘಟಕಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಈ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ನಗರದ ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದೂ ಯತೀಂದ್ರ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

E- Khata: ಇ - ಖಾತಾ ವಿತರಣೆಯಲ್ಲಿ ವಿಳಂಬ

ಇ-ಖಾತಾ ವಿತರಣೆಯಲ್ಲಿ ಪ್ರಸ್ತುತ ಶೇ.48.76ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ ಇದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಸಾರ್ವಜನಿಕರಿಗೆ ಯಾವುದೇ ಅನಗತ್ಯ ವಿಳಂಬವಾಗದಂತೆ ಇ-ಖಾತಾ ಪ್ರಕ್ರಿಯೆಯನ್ನು ಸರಳ ಹಾಗೂ ವೇಗವಾಗಿ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಪೌರ ಕಾರ್ಮಿಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ನಗರ ಸ್ವಚ್ಛತಾ ವ್ಯವಸ್ಥೆಯನ್ನು ಬಲಪಡಿಸಬೇಕುಎಂದು ನಿರ್ದೇಶನ ನೀಡಿದರು.

ನಗರದ ವಿವಿಧೆಡೆ ಹಾಳಾಗಿರುವ ರಸ್ತೆಗಳನ್ನು ಗುರುತಿಸಿ, ಅವುಗಳ ದುರಸ್ತಿಗೆ ಅಗತ್ಯವಿರುವ ಅಂದಾಜು ವೆಚ್ಚವನ್ನು ಸಿದ್ಧಪಡಿಸಿ, ಸಮಗ್ರ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಅಲ್ಲದೆ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 17 ಗ್ರಾಮಗಳು ಒಳಗೊಂಡಿವೆ. ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಉದ್ದೇಶದಿಂದ 75 ಎಕರೆ ಜಮೀನು ಮಂಜೂರು ಮಾಡುವಂತೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿರುವ ಕುರಿತು ಸಚಿವರು ಪರಿಶೀಲಿಸಿದರು. ಈ ಪ್ರಸ್ತಾವನೆಯ ಕುರಿತು ಅಗತ್ಯ ಕ್ರಮಗಳನ್ನು ಕೈಗೊಂಡು, ಪ್ರಗತಿಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರವು ಪ್ರತಿ ತಿಂಗಳು ನಿಯಮಿತವಾಗಿ ಸಭೆ ನಡೆಸಿ, ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಬೇಕು. ನಗರದಲ್ಲಿ ವಸತಿ ಅಗತ್ಯವಿರುವ ಜನರಿಗೆ ಅನುಕೂಲವಾಗುವಂತೆ ಸೂಕ್ತ ವಸತಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವತ್ತ ಗಮನಹರಿಸಬೇಕು. ನಗರದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+