e-Office: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೂ ಇ-ಆಫಿಸ್ ವ್ಯವಸ್ಥೆ ವಿಸ್ತರಣೆ; ಯಾವಾಗಿನಿಂದ?
e-Office: ಈಗಾಗಲೇ ಇ-ವ್ಯವಸ್ಥೆಯನ್ನು ತಲ್ಲೂಕು ಮಟ್ಟದ ಕಚೇರಿಗಳಿಗೂ ವಿಸ್ತರಣೆ ಮಾಡಲಾಗಿತ್ತು. ಇದೀಗ ಇದನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೂ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಯಾವಾಗಿನಿಂದ ಇದು ಜಾರಿಗೆ ಬರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಬಾರಿಯ ಅಂದರೆ 2025ರ ಆರ್ಥಿಕ ವರ್ಷದ ಅಂತ್ಯದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಇ-ಆಫೀಸ್ ವ್ಯವಸ್ಥೆಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ರಾಜ್ಯ ಸರ್ಕಾರ ರೈತರ ಪರವಾಗಿದೆ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಸಿಎಂ ಸಿದ್ದರಾಮಯ್ಯ ಅವರು ರೈತರ ಹಿತಾಸಕ್ತಿಗಾಗಿ ಹಾಗೂ ರೈತರು ಸರ್ಕಾರಿ ಕಛೇರಿಗೆ ಅಲೆದಾಡುವ ಸಮಯ ಉಳಿಸುವುದಕ್ಕಾಗಿ ಇ-ಆಡಳಿತ ವ್ಯವಸ್ಥೆಯನ್ನು ಮತ್ತಷ್ಟೂ ಚುರುಕುಗೊಳಿಸಿದೆ. ಇದರಿಂದ ಅನ್ನದಾತರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಇ-ಆಡಳಿತ ಇಲಾಖೆಯು ರಾಜ್ಯ ದತ್ತಾಂಶ ಕೇಂದ್ರ, ರಾಜ್ಯವ್ಯಾಪಿ ವಲಯ ಜಾಲ, ನೇರ ನಗದು ವರ್ಗಾವಣೆ ವೇದಿಕೆ, ಕುಟುಂಬ, ರೈತರ ದತ್ತಾಂಶ, ಸೇವಾ ಸಿಂಧು, ಸಕಾಲ, ಕರ್ನಾಟಕ ಒನ್, ಗ್ರಾಮ ಒನ್ ಮುಂತಾದ ನಿರ್ಣಾಯಕ ಸೇವೆಗಳನ್ನು ನಿರ್ವಹಿಸುತ್ತಿವೆ. ಸರ್ಕಾರ ಇಂತಹ ಪ್ರಮುಖ ಸಾಧನೆಗಳನ್ನು ಇ-ಆಡಳಿತ ಇಲಾಖೆಯ ಅಡಿಯಲ್ಲಿ ಬರುವಂತೆ ಈ ವರ್ಷದಿಂದ ಜಾರಿ ಮಾಡಿದೆ ಎಂದರು.
ಸರ್ಕಾರ ಇ-ಆಫೀಸ್ ವ್ಯವಸ್ಥೆಯನ್ನು ಎಲ್ಲಾ ತಾಲ್ಲೂಕು ಮಟ್ಟದ ಕಚೇರಿಗಳು, 395 ನಾಡಕಚೇರಿಗಳು ಮತ್ತು 427 ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿದೆ. ಈ ಬಾರಿಯ ಆರ್ಥಿಕ ವರ್ಷದ ಅಂತ್ಯದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಈ ವ್ಯವಸ್ಥೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗುವುದ ಎಂದು ತಿಳಿಸಿದ್ದಾರೆ.
ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಇಲಾಖೆಗಳಿಗೆ ಸಂಭಂದಿಸಿದಂತೆ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಜಾರಿ ಮಾಡಿದೆ. ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್‌ನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎಲ್ಲಾ ಟೆಂಡರ್ ಸಂಬಂಧಿತ ಚಟುವಟಿಕೆಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಸಿಎಂ ಸಿದ್ದರಾಮಯ್ಯನವರು ಇ-ಆಡಳಿತ ಇಲಾಖೆಯಡಿಯಲ್ಲಿ ಹಲವು ಯೋಜನೆ ಜಾರಿ ಮಾಡುವ ಮೂಲಕ ನಾಡಿನ ರೈತರ ಹಿತಾಸಕ್ತಿ ಕಾಪಾಡುತ್ತಿದ್ದಾರೆ ಎಂದರು.
ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಆಗಾಗ ಅಪ್ಡೇಟ್ ಮಾಹಿತಿಗಳು ಹೊರಬೀಳುತ್ತಲೇ ಇರುತ್ತವೆ. ಇದೀಗ ಬೆಂಗಳೂರು ಬಿಟ್ಟು ರಾಜ್ಯದ ಇತರ ಸಂಸ್ಥೆಗಳ ನಗರ ಪ್ರದೇಶ ವ್ಯಾಪ್ತಿಯಲ್ಲಿ ಇ ಖಾತಾ ಹೊಂದಿಲ್ಲದ 30ರಿಂದ 32 ಲಕ್ಷ ಆಸ್ತಿಗಳಿಗೆ ಬಿ-ಖಾತಾ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳು ಇವೆ. ಈ ಪೈಕಿ 22 ಲಕ್ಷ ಆಸ್ತಿಗಳ ಮಾಲೀಕರು ಇ-ಖಾತಾ ಮಾಡಿಸಿದ್ದಾರೆ. ಆದರೆ, 30ರಿಂದ 32 ಲಕ್ಷ ಸ್ವತ್ತುಗಳಿಗೆ ಯಾವುದೇ ರೀತಿಯ ಇ-ದಾಖಲೆಗಳಿಲ್ಲ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ಇದೇ ಜನವರಿ 7ರಂದು ಸಭೆ ನಡಡಸಿ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಇ-ಆಸ್ತಿ ನಮೂದಿಸಿ ಬಿ-ಖಾತೆಗೆ ಸಮಾನಾಂತರ ದಾಖಲೆ ನೀಡಬೇಕೆಂದು ಸೂಚನೆ ನೀಡಿದ್ದಾರೆ.
ಆದ್ದರಿಂದ ಮುಖ್ಯಕಾರ್ಯದರ್ಶಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಲಾಗಿದೆ. ಫೆಬ್ರವರಿ 10ರೊಳಗೆ ಸುತ್ತೋಲೆ ಹೊರಡಿಸಿ, ಬಾಕಿಯಿರುವ ಆಸ್ತಿಗಳಿಗೆ ಗರಿಷ್ಠ 3 ತಿಂಗಳೊಳಗೆ ಅಭಿಯಾನ ಮಾದರಿಯಲ್ಲಿ ಬಿ-ಖಾತಾ ಮಾಡಿಸಿಕೊಡಬೇಕೆಂದು ಸೂಚಿಸಲಾಗಿದೆ ಎಂದರು.
ಅನಧಿಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಅದನ್ನು ಪಾಲಿಸಬೇಕಾದ ತುರ್ತು ಎದುರಾಗಿದೆ. ಆದ್ದರಿಂದ ಎಷ್ಟು ಸ್ವತ್ತುಗಳಿವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಬಳಿಕ ರಾಜ್ಯದಲ್ಲಿ ಬಿ-ಖಾತಾ ವ್ಯವಸ್ಥೆ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ಇದೇ ಮಾದರಿ ಆರಂಭಿಸಲಾಗುವುದು ಎಂದು ಇತ್ತೀಚೆಗಷ್ಟೇ ತಿಳಿಸಿದ್ದರು.
-
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications