E - Property: ಇ–ಸ್ವತ್ತು: "ಗ್ರಾಮೀಣ ಆಸ್ತಿ" ತೆರಿಗೆ ವಿಚಾರದಲ್ಲಿ ಸರ್ಕಾರದಿಂದ ಗುಡ್‌ನ್ಯೂಸ್!
ಕರ್ನಾಟಕ ಸರ್ಕಾರವು ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಸರ್ಕಾರವು ಆಸ್ತಿಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಇ ಖಾತಾ ಹಾಗೂ ಇ ಸ್ವತ್ತುಗಳನ್ನು ಪರಿಚಯಿಸಿದೆ. ಆದರೆ, ಗ್ರಾಮೀಣ ಹಾಗೂ ನಗರ ಭಾಗದಲ್ಲಿನ ಆಸ್ತಿದಾರರು ಇ ಖಾತಾ ಹಾಗೂ ಇ -ಸ್ವತ್ತುಗಳ ವಿಚಾರದಲ್ಲಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದೀಗ ಈ ಸಂಕಷ್ಟವನ್ನು ತಪ್ಪಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು. ರಾಜ್ಯದ ಆಸ್ತಿದಾರರು ತುಸು ನಿರಾಳವಾಗುವಂತಹ ಸುದ್ದಿಯೊಂದನ್ನು ಕೊಟ್ಟಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ನೀಡುವ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆ ಆಗುತ್ತಿದೆ ಎನ್ನುವ ಆರೋಪವು ಕಳೆದ ಮೂರು ತಿಂಗಳಿಗೂ ಹೆಚ್ಚಿನ ಅವಧಿಯಿಂದ ಕೇಳಿ ಬರುತ್ತಿದೆ. ಇದೀಗ ಈ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ರಾಜ್ಯದಾದ್ಯಂತ ಆಸ್ತಿಗಳ ಸಂರಕ್ಷಣೆ ಹಾಗೂ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಉದ್ದೇಶದಿಂದ ಇ ಖಾತಾ ಹಾಗೂ ಇ ಸ್ವತ್ತುಗಳನ್ನು ಕಡ್ಡಾಯ ಮಾಡಲಾಗಿದೆ. ಆದರೆ, ಇದರ ವಿತರಣೆಯಲ್ಲಿ ನಿರಂತರವಾಗಿ ಸಮಸ್ಯೆಗಳು ಎದುರಾಗುತ್ತಿದ್ದು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಕ್ರಮವೊಂದನ್ನು ತೆಗೆದುಕೊಂಡಿದೆ.

ರಾಜ್ಯದ ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ನೀಡುವ ಸಂದರ್ಭದಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ಪರಿಹಾರ ಸೂಚಿಸುವುದಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಾಜ್ಯ ಸರ್ಕಾರವು ರಚಿಸಿದೆ. ಈ ಸಮಿತಿಯಲ್ಲಿ 12 ಜನ ಸದಸ್ಯರು ಇರಲಿದ್ದಾರೆ. ಈ ಸಂಬಂಧ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಚಂದ್ರಶೇಖರ್ ಅವರು ಆದೇಶ ಮಾಡಿದ್ದಾರೆ. ಈ ಮೂಲಕ ಕರ್ನಾಟಕದ ಗ್ರಾಮೀಣ ಭಾಗದ ರೈತರಿಗೆ ಸಮಸ್ಯೆ ತಪ್ಪುವ ಭರವಸೆ ಮೂಡಿದೆ.
ಇ-ಸ್ವತ್ತು ಹಾಗೂ ಗ್ರಾಮೀಣ ಆಸ್ತಿಗಳ ತೆರಿಗೆ ನಿಗದಿಗೆ ಸಂಬಂಧಿಸಿದಂತೆ ವಿಷಯ ತಜ್ಞ ಹಾಗೂ ಪಂಚಾಯತ್ ರಾಜ್ ಆಯುಕ್ತಾಲಯದ ನಿವೃತ್ತ ಉಪ ನಿರ್ದೇಶಕ ಕೆ.ಜಿ. ಜಗದೀಶ ಅವರನ್ನು ವಿಶೇಷ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಇನ್ನು ಈ ಸಮಿತಿಯು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ 1993ರ ಸೆಕ್ಷನ್ 199ರ ಇ-ಸ್ವತ್ತು ವಿಷಯಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವುದಕ್ಕೆ ನಿರ್ದಿಷ್ಟ ಸಲಹೆ ಹಾಗೂ ಸೂಚನೆಗಳನ್ನು ನೀಡಬೇಕಿದೆ. ಮುಂದುವರಿದು ಕರ್ನಾಟಕದ ಇ ಸ್ವತ್ತು ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಪರಿಶೀಲನೆ ನಡೆಸಿ, ಅದಕ್ಕೂ ಪರಿಹಾರ ಸೂಚಿಸಬೇಕಿದೆ. ಇ-ಸ್ವತ್ತು ತಂತ್ರಾಂಶದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುವುದಕ್ಕೂ ಈ ಸಮಿತಿ ಸಲಹೆ ನೀಡಲಿದೆ ಎಂದು ಹೇಳಲಾಗಿದೆ ಇನ್ನು. ಈ ಸಮಿತಿಯು ವರದಿ ಸಲ್ಲಿಸಲು ಎರಡು ತಿಂಗಳ ಗಡುವು ವಿಧಿಸಲಾಗಿದೆ.
ಆಸ್ತಿದಾರರಿಗೆ ಸಮಸ್ಯೆ: ಇನ್ನು ರಾಜ್ಯ ಸರ್ಕಾರವು ಇ ಸ್ವತ್ತುಗಳನ್ನು ನೀಡುತ್ತಿದೆ. ಗ್ರಾಮೀಣ ಭಾಗದ ಆಸ್ತಿದಾರರಿಗೆ ಇ ಸ್ವತ್ತು ನೀಡಲಾಗುತ್ತಿದೆಯಾದರೂ ಆಸ್ತಿದಾರರಿಗೆ ಸಕಾಲದಲ್ಲಿ ಇ ಸ್ವತ್ತು ಸಿಗದೆ ಸಂಕಷ್ಟ ಎದುರಾಗಿದೆ.
ಇ ಸ್ವತ್ತು ಸಂಕಷ್ಟಗಳಿಗೆ ಮುಕ್ತಿ: ಇನ್ನು ಇಲ್ಲಿಯ ವರೆಗೆ ಇ- ಸ್ವತ್ತಿನಲ್ಲಿ ಉಂಟಾಗಿದ್ದ ಗೊಂದಲಗಳು ಇನ್ನು ಪರಿಹಾರವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇ - ಸ್ವತ್ತಿನಲ್ಲಿ ಎದುರಾಗಿದ್ದ ಸಮಸ್ಯೆಯಿಂದ ಗ್ರಾಮೀಣ ಭಾಗದ ಆಸ್ತಿದಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications