E Swathu: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್‌: ಮನೆ-ಮನೆಗೆ ತೆರಳಿ ಇ-ಸ್ವತ್ತು ವಿತರಣೆ!

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಸರ್ಕಾರ ಇ-ಸ್ವತ್ತು ದಾಖಲೆಗಳನ್ನು ಮನೆ-ಮನೆಗೆ ತಲುಪಿಸುವ ಕ್ರಮಕ್ಕೆ ಮುಂದಾಗಿದೆ. ಆಸ್ತಿ ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಪದೇಪದೇ ಅಲೆದಾಡಬೇಕಾಗದಂತೆ ಈ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ.

ಇ-ಸ್ವತ್ತು ವ್ಯವಸ್ಥೆಯ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆಸ್ತಿಗಳ ವಿವರಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗುತ್ತದೆ. ಆಸ್ತಿಯ ಮಾಲೀಕತ್ವ, ಆಸ್ತಿ ಸಂಖ್ಯೆ, ವಿಸ್ತೀರ್ಣ ಸೇರಿದಂತೆ ಅಗತ್ಯ ಮಾಹಿತಿಯನ್ನು ಒಳಗೊಂಡ ದಾಖಲೆಗಳನ್ನು ಆನ್‌ಲೈನ್‌ ವ್ಯವಸ್ಥೆಯಲ್ಲಿ ನಿರ್ವಹಿಸುವುದರಿಂದ ಸಾರ್ವಜನಿಕರಿಗೆ ದಾಖಲೆ ಪಡೆಯುವುದು ಸುಲಭವಾಗಲಿದೆ.

E Swathu Karnataka Property Owners Get Good News E-Swathu Documents to Be Delivered Door-to-Door

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅವರು ಮಾತನಾಡಿ, ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚುವರಿ ಶ್ರಮ ವಹಿಸಿ ಮನೆ-ಮನೆಗೆ ತೆರಳಿ ಸ್ವತ್ತುಗಳ ಇ-ಸ್ವತ್ತು ಮತ್ತು ಖಾತಾ ದಾಖಲೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಡ್ರಾಫ್ಟ್ ಖಾತಾ ತಯಾರಾಗಿದ್ದು, ಯಾವುದೇ ಅನಗತ್ಯ ವ್ಯಕ್ತಿಗಳಿಗೆ ಅಥವಾ ಮೂರನೇ ವ್ಯಕ್ತಿಗಳಿಗೆ ಖಾತಾ ವರ್ಗಾವಣೆಗೆ ಅವಕಾಶವಿರುವುದಿಲ್ಲ. ಯಾರು ಮೂಲ ಮಾಲೀಕರಿದ್ದಾರೋ ಅವರಿಗೆ ಮಾತ್ರವೇ ಖಾತೆಗಳನ್ನು ನೀಡಬೇಕು ಎಂದು ತಿಳಿಸಿದರು.

24 ಗಂಟೆಗಳಲ್ಲಿ ಜಾಬ್ ಕಾರ್ಡ್ ವಿತರಣೆ

ಸಾರ್ವಜನಿಕರು ಅಥವಾ ಕೂಲಿ ಕಾರ್ಮಿಕರು ನರೇಗಾ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿದರೆ ಅಥವಾ ಜಾಬ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ, ಪರಿಶೀಲನೆ ನಡೆಸಿ 24 ಗಂಟೆಗಳ ಒಳಗೆ ಜಾಬ್ ಕಾರ್ಡ್ ವಿತರಿಸಬೇಕು. ಜಾಬ್ ಕಾರ್ಡ್ ಮೇಳ ನಡೆಸಬೇಕು. ಉದ್ಯೋಗ ಬೇಡಿಕೆ ಸಲ್ಲಿಸಿದರೂ ಕೆಲಸ ಸಿಗಲಿಲ್ಲ ಅಥವಾ ಜಾಬ್ ಕಾರ್ಡ್ ನೀಡುವಲ್ಲಿ ಅನಗತ್ಯ ವಿಳಂಬವಾಯಿತು ಎಂಬ ದೂರುಗಳು ಸಾರ್ವಜನಿಕರಿಂದ ಬರಬಾರದು ಎಂದರು.

ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರನ್ನು ತಲುಪಿಸುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದ್ದು, ಕಾಮಗಾರಿಗಳಲ್ಲಿ ಯಾವುದೇ ರೀತಿಯ ವಿಳಂಬ ಹಾಗೂ ಅಸಡ್ಡೆಯನ್ನು ಸಹಿಸುವುದಿಲ್ಲ. ಕಲುಷಿತ ನೀರು ಪೂರೈಕೆಯಿಂದ ಜನ ಅಸ್ವಸ್ಥರಾದರೆ ಸಂಬಂಧಿತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಲಜೀವನ್ ಮಿಷನ್ ಕಾಮಗಾರಿಗಾಗಿ ತೋಡಲಾದ ರಸ್ತೆಗಳನ್ನು ಸರಿಯಾಗಿ ಮರುನಿರ್ಮಾಣ ಮಾಡಿಲ್ಲ. ಕೊಳವೆ ಮಾರ್ಗ ಅಳವಡಿಕೆ ಪೂರ್ಣಗೊಂಡ ತಕ್ಷಣ ರಸ್ತೆಗಳನ್ನು ಹಳೆಯ ಸ್ಥಿತಿಗೆ ತರುವುದು ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಜಂಟಿಯಾಗಿ ಕಾರ್ಯನಿರ್ವಹಿಸಿ, ಜಲಜೀವನ್ ಮಿಷನ್ ಯೋಜನೆಯನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ ಅವರು, ತೆರಿಗೆ ಸಂಗ್ರಹದಲ್ಲಿ ವೇಗ ನೀಡಬೇಕು. ಜಿಲ್ಲೆಯ ಎಲ್ಲಾ ಸಾರ್ವಜನಿಕ ಗ್ರಂಥಾಲಯಗಳ ಪುಸ್ತಕ ದಾಸ್ತಾನು, ನಿರ್ವಹಣೆ, ಡಿಜಿಟಲ್ ಸೌಲಭ್ಯ ಒದಗಿಸುವಂತೆ ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಕೊರತೆಯಾಗಿದ್ದು, ಗ್ರಾಮೀಣ ಜನತೆ ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದ್ದರೂ ಉದ್ಯೋಗ ಖಾತ್ರಿ ಅಡಿ ಕೆಲಸ ನೀಡದಿರುವ ಪಂಚಾಯತಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆ ಕ್ಷೀಣಿಸಿದ್ದು ಗ್ರಾಮೀಣ ಜನರು ಉದ್ಯೋಗ ಅರಸಿ ನಗರಗಳಿಗೆ ಗುಳೆ ಹೋಗದಂತೆ ಇರುವಲ್ಲಿಯೇ ಪ್ರತಿ ಕುಟುಂಬದ ಅರ್ಹ ಫಲಾನುಭವಿಗಳಿಗೆ 'ವಿ ಬಿ - ಜಿ ರಾಮ್ ಜಿ' ಯೋಜನೆಯಡಿ ಕಡ್ಡಾಯವಾಗಿ ಕೆಲಸ ನೀಡುವಂತೆ ಸ್ಪಷ್ಟ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಬಡವರು, ಮಹಿಳೆಯರು, ವಿಶೇಷ ಚೇತನರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು ಕೆಲಸ ಅರಸಿ ವಲಸೆ ಹೋದರೆ, ಅದಕ್ಕೆ ಸಂಬಂಧಪಟ್ಟ ಇಓ, ಪಿಡಿಒ ಅಧಿಕಾರಿಗಳನ್ನೇ ಹೊಣೆ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವುದಾಗಿ ಕಟ್ಟೆಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಜುಲೈ ತಿಂಗಳವರೆಗೆ ನಿಗದಿಪಡಿಸಿದ್ದ ಮಾನವ ದಿನಗಳ ಸೃಜನೆಯ ಗುರಿಯಲ್ಲಿ ಶೇ. 46 ರಷ್ಟು ಮಾತ್ರ ಸಾಧನೆಯಾಗಿದ್ದು, ನಿರೀಕ್ಷಿತ ಮಟ್ಟ ತಲುಪದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಜಿಲ್ಲೆಯಲ್ಲಿ ಪ್ರಸಕ್ತ ವರ್ಷಕ್ಕೆ ಒಟ್ಟು 51.30 ಲಕ್ಷ ಮಾನವ ದಿನಗಳ ಸೃಷ್ಟಿಯ ಗುರಿ ಹೊಂದಲಾಗಿದೆ. ಆಗಸ್ಟ್ ತಿಂಗಳಿನಿಂದ ಉದ್ಯೋಗ ಸೃಷ್ಟಿ ವೇಗವನ್ನು ಹೆಚ್ಚಿಸಿ, ಪ್ರತಿ ತಿಂಗಳು ಕನಿಷ್ಠ 5 ರಿಂದ 6 ಲಕ್ಷ ಮಾನವ ದಿನಗಳನ್ನು ಸೃಜಿಸುವಂತೆ ಸಚಿವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 1.84 ಲಕ್ಷ ಸಕ್ರಿಯ ಜಾಬ್ ಕಾರ್ಡ್‌ಗಳಿದ್ದು, 4.60 ಲಕ್ಷ ಕಾರ್ಮಿಕರಿದ್ದಾರೆ. ಇದರಲ್ಲಿ ಸುಮಾರು 1.30 ಲಕ್ಷ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆ. ಆದಷ್ಟು ಬೇಗ ಬಾಕಿ ಇರುವ ಪ್ರಕ್ರಿಯೆ ಮುಗಿಸಿ ಎಂದು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+