Weather Report: ಇಂದು ಈ ಭಾಗಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಳಿಯ ಪ್ರಮಾಣ ತಗ್ಗಿದ್ದು, ಬಿಸಿಲು ಸುಡಲಾರಂಭಿಸಿದೆ. ಅವಧಿಗೂ ಮುನ್ನವೇ ಈ ಬಾರಿ ಬೇಸಿಗೆ ಆರಂಭವಾಗಿದೆ. ಸಾಮಾನ್ಯವಾಗಿ ಈ ತಿಂಗಳ ಕೊನೆಯ ವಾರದಂದು ಚಳಿಗಾಲ ನಿರ್ಗಮಿಸುತ್ತಿತ್ತು. ಆದರೆ ಕಳೆದ ವಾರದಿಂದಲೇ ಚಳಿಯಲ್ಲಿ ಇಳಿಕೆ ಕಂಡಿದೆ. ಇನ್ನು ಹವಾಮಾನ ಇಲಾಖೆಯು ಹಲವು ಭಾಗಗಳಲ್ಲಿ ಇಂದು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ..
ರಾಜ್ಯದಲ್ಲಿ ಹವಾಮಾನ ವೈಪರೀತ್ಯದ ಹಿನ್ನೆಲೆ ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ತುಸು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಪ್ಪಳ, ಕೋಲಾರ, ಮಂಡ್ಯ, ರಾಮನಗರ, ರಾಯಚೂರು, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ಹಾವೇರಿ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದೆ.

ಫೆಬ್ರವರಿ 19ರವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.ರಾಜ್ಯದಾದ್ಯಂತ ಕೆಳ ಉಷ್ಣವಲಯದ ಮಟ್ಟದಲ್ಲಿ ಹಗುರದಿಂದ ಮಧ್ಯಮ ಪೂರ್ವ ಅಥವಾ ಪೂರ್ವ ಹವಾಮಾನವಿರುತ್ತದೆ. ಕನಿಷ್ಠ ತಾಪಮಾನವು ಕರಾವಳಿಯಲ್ಲಿ 19ರಿಂದ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ 15ರಿಂದ 17 ಡಿಗ್ರಿ ಸೆಲ್ಸಿಯಸ್, ಬೀದರ್, ಕಲಬುರಗಿ ಮತ್ತು ಕೊಪ್ಪಳದಲ್ಲಿ 18ರಿಂದ 21 ಡಿಗ್ರಿ ಸೆಲ್ಸಿಯಸ್ ಇತ್ತು. ದಕ್ಷಿಣ ಒಳನಾಡಿನ ಆಗುಂಬೆ, ಚಾಮರಾಜನಗರ, ಚಿಂತಾಮಣಿ, ಮಂಡ್ಯ, ಮಡಿಕೇರಿ ಮತ್ತು ಮೈಸೂರಿನಲ್ಲಿ 11ರಿಂದ 14 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ 15 ರಿಂದ 17 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಉತ್ತರ ಒಳನಾಡಿನ ವಿಜಯಪುರದ ಕನಿಷ್ಠ ತಾಪಮಾನದಲ್ಲಿ 2.5 ಡಿಗ್ರಿ ಸೆಲ್ಸಿಯಸ್ ಕುಸಿತ ಕಂಡಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಕರಾವಳಿಯ ಪಣಂಬೂರಿನಲ್ಲಿ ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗಿದೆ. ಉತ್ತರ ಒಳನಾಡಿನ ಕಲಬುರ್ಗಿ, ದಕ್ಷಿಣ ಒಳನಾಡಿನ ಮೈಸೂರು ಮತ್ತು ಹಾಸನ, ಮಂಡ್ಯ, ಚಿಂತಾಮಣಿ ಮತ್ತು ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ.

ಚಿಕ್ಕಮಗಳೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಗರಿಷ್ಠ ತಾಪಮಾನವು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಕಡೆಗಳಲ್ಲಿ 33ರಿಂದ 36 ಡಿಗ್ರಿ ಸೆಲ್ಸಿಯಸ್ ನಡುವೆ ಇದೆ. ದಕ್ಷಿಣ ಒಳನಾಡಿನ ಆಗುಂಬೆಯಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚುವರಿ 4.5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಉಳಿದ ಕಡೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹೇಳಿದೆ.
ಕರಾವಳಿಯ ಹೊನ್ನಾವರ ಮತ್ತು ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ ಮತ್ತು ಕಲಬುರಗಿ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ ಮತ್ತು ಕೊಪ್ಪಳದಲ್ಲಿ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿದೆ. ದಕ್ಷಿಣ ಒಳನಾಡಿನ, ಹಾಸನ, ಬೆಂಗಳೂರು, ಚಿತ್ರದುರ್ಗ, ಮೈಸೂರಿನಲ್ಲೂ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿದೆ. ಬೆಂಗಳೂರು ಭಾಗದಲ್ಲಿ ಮೋಡವಿಲ್ಲದ ಆಕಾಶವಿರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್‌ನಿಂದ 16 ಡಿಗ್ರಿ ಇರಲಿದೆ.
ಯಾವ ರಾಜ್ಯಗಳಲ್ಲಿ ಮಳೆ?: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರದಲ್ಲಿ ತಾಪಮಾನ ಏರಿ ಚಳಿ ಕಡಿಮೆಯಾಗುತ್ತಿದೆ. ಆದರೆ, ಈಗ ದಿಢೀರನೆ ಉತ್ತರ ಭಾರತದಲ್ಲಿ ಚಳಿ ಮತ್ತೆ ಏರಲಿದೆ ಎಂದು ಇಲಾಖೆ ಹೇಳಿದೆ. ಭಾರತೀಯ ಹವಾಮಾನ ಇಲಾಖೆಯು ಬುಧವಾರ (ಫೆಬ್ರವರಿ 12, 2025) ದೆಹಲಿ ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಮಳೆ ಮತ್ತು ಶೀತ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಶೀಘ್ರದಲ್ಲೇ ಮಳೆಯಾಗಬಹುದು, ಇದರಿಂದಾಗಿ ತಾಪಮಾನ ಕಡಿಮೆಯಾಗಬಹುದು ಎಂದು ಹೇಳಿದೆ.












Click it and Unblock the Notifications