Earthquake: ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಭೂಕಂಪದ ಅನುಭವ: ಬೆದರಿದ ಜನ
Earthquake: ರಾಜ್ಯದಲ್ಲಿ ಅತೀ ಹೆಚ್ಚು ಭೂಕಂನಕ್ಕೆ ಒಳಗಾಗಿರುವ ಜಿಲ್ಲೆ ಅಂದ್ರೆ ಅದು ವಿಜಯಪುರ. ಆದರೆ, ಇದೀಗ ಡಿಸೆಂಬರ್ 13ರ ಶನಿವಾರ ಸಂಜೆ ವಿಜಯನಗರ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವ ಆಗಿರುವ ಘಟನೆ ನಡೆದಿದೆ. ಹಾಗಾದ್ರೆ, ಯಾವ್ಯಾವ ಭಾಗಗಳಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಜಗಳೂರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಿನ್ನೆ ಸಂಜೆ 7.30ರ ವೇಳೆ ಭಾರೀ ಸದ್ದಿನೊಂದಿಗೆ ಭೂ ಕಂಪನದ ಅನುಭವ ಆಗಿದೆ. ಪಡಿಣಾಮ ಮನೆಗಳಲ್ಲಿನ ವಸ್ತುಗಳು ಅಲ್ಲಾಡಿ ನೆಲಕ್ಕುರುಳಿದ್ದು, ಈ ವೇಳೆ ಜನರು ಭಯಗೊಂಡು ಮನೆಯಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ.

ಜಗಳೂರು ತಾಲೂಕಿನ ಚಿಕ್ಕಮಲ್ಲನ ಹೊಳೆ ಚಿರಂಜೀವಿ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಜಗಳೂರು ತಹಶೀಲ್ದಾರರಿಗೆ ಗ್ರಾಮಸ್ಥರು ಈ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಬಳಿಕ ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲ್ಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವ ಆಗಿದ್ದು, ಪರಿಣಾಮ ಜನರು ಮನೆಯಿಂದ ಹೊರಗಡೆ ಓಡಿಬಂದ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಶನಿವಾರ ಸಂಜೆ 7:10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿಯಲ್ಲಿ ಭಾರೀ ಶಬ್ಧದೊಂದಿಗೆ ಭೂಮಿ ಗಢಗಢ ನಡುಗಿದ ಅನಭವ ಜನರಿಗೆ ಆಗಿದೆ. ಈಗಲೂ ಕೂಡ ಈ ಭಾಗಗಳಲ್ಲಿ ಜನರು ಅದೇ ಆತಂಕದಲಿದ್ದಾರೆ.
ಭೂಕಂನದಿಂದ ಬೆಚ್ಚಿದ ಜನ: ಇನ್ನೂ ದೇಶದಗಳ ವಿಚಾರಕ್ಕೆ ಬಂದರೆ ಅತೀ ಹೆಚ್ಚು ಭೂಕಂಪನಕ್ಕೆ ಒಳಗಾಗಿರುವ ದೇಶ ಜಪಾನ್ ಆಗಿದೆ.ಇತ್ತೀಚೆಗಷ್ಟೇ ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7ರಷ್ಟು ದಾಖಲಾಗಿದೆ.
ಒಂದೇ ದಿನದಲ್ಲಿ 5 ಬಾರಿ ಭೂಮಿ ಕಂಪಿಸಿದ್ದು, ಪರಿಣಾಮ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ದತ್ತಾಂಶ ಸಂಗ್ರಹಿಸಿವೆ. ಆದರೆ, ವಿವರವಾದ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಬಂದಿದೆ.
ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ ಕೇವಲ 10 ಕಿಲೋ ಮೀಟರ್ ಆಳದಲ್ಲಿ ಇತ್ತು. ಜಪಾನ್ನಲ್ಲಿ ಸಂಭವಿಸಿದ 5ನೇ ಭೂಕಂಪ ಇದಾಗಿದೆ. ಜಪಾನ್ ಹವಾಮಾನ ಸಂಸ್ಥೆ ಪ್ರಕಾರ, ಶುಕ್ರವಾರ ಈಶಾನ್ಯ ಜಪಾನ್ನಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸುನಾಮಿ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಈ ಹಿನ್ನೆಲೆ ಈ ಭಾಗಗಳ ಜನರು ಆತಂಕದಲ್ಲಿದ್ದಾರೆ.
ಈ ವಾರದ ಆರಂಭದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಪೆಸಿಫಿಕ್ ಮಹಾಸಾಗರದ ಕರಾವಳಿಯಲ್ಲಿ ಬಿರುಕುಗಳು, ಸಣ್ಣ ಹಾನಿ ಮತ್ತು ಸುನಾಮಿಯನ್ನು ಉಂಟುಮಾಡಿತ್ತು. ಜಪಾನ್ನ ಪ್ರಮುಖ ದ್ವೀಪವಾದ ಹೊನ್ಶುವಿನ ಉತ್ತರದ ತುದಿಯಲ್ಲಿರುವ ಅಮೋರಿ ಕರಾವಳಿಯಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ.
ಭೂಕಂಪದ ನಂತರ ಜಪಾನ್ ಹವಾಮಾನ ಸಂಸ್ಥೆಯು 1 ಮೀಟರ್ ಎತ್ತರದ ಅಲೆಗಳು ಏಳಬಹುದು ಎಂದು ಎಚ್ಚರಿಕೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಲವಾರು ಕರಾವಳಿ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಸಂದೇಶ ಕಳುಹಿಸಲಾಗಿದೆ.
ಇನ್ನೂ ಭೂಕಂಪದ ನಂತರ ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳಲ್ಲಿ ಹಲವಾರು ರೈಲುಗಳನ್ನು ಸ್ಥಗಿತಗೊಳಿಸಲಾಯಿತು ಮತ್ತು ಕರಾವಳಿ ಭಾಗದ ಹೆದ್ದಾರಿಗಳನ್ನು ಮುಚ್ಚಲಾಯಿತು. ಈಗಲೂ ಸಹ ಈ ಭಾಗಗಳ ಜನರು ಮತ್ತೆ ಎಲ್ಲಿ ಭೂಕಂಪ ಸಂಭವಿಸುತ್ತದೆಯೋ ಎನ್ನುವ ಭಯದಲ್ಲೇ ಜೀವನ ನಡೆಸುತ್ತಿದ್ದಾರೆ ಎನ್ನುವ ಮಾಹಿತಿಯಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications