2ನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟ

ಬೆಂಗಳೂರು, ಮಾರ್ಚ್ 27 : ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳು ಮಾ.28ರಂದು 14 ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಗುರುವಾರದಿಂದಲೇ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ.

EC to issues notification for 2nd phase of Lok Sabha election on March 28

ಅಭ್ಯರ್ಥಿಗಳು ಏಪ್ರಿಲ್ 4ರ ತನಕ ಉಮೇದುವಾರಿಕೆ ಸಲ್ಲಿಸಬಹುದಾಗಿದೆ. ಏಪ್ರಿಲ್ 5ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ.

ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

14 ಕ್ಷೇತ್ರಗಳು : ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ.

ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಗುರುವಾರದಿಂದಲೇ ಅವರು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿ ಘೋಷಣೆಯಾಗಬೇಕಾದ ಕ್ಷೇತ್ರ : ಬಿಜೆಪಿ ಚಿಕ್ಕೋಡಿ ಮತ್ತು ಕೊಪ್ಪಳ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಬೇಕು. ಕಾಂಗ್ರೆಸ್ ಧಾರವಾಡ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+