ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 28: ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಅಕ್ಟೋಬರ್ 1ರಿಂದ ಅಧಿಸೂಚನೆ ಹೊರಡಿಸಲಾಗುತ್ತದೆ.
ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ಅಕ್ಟೋಬರ್ 11ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಅಕ್ಟೋಬರ್ 13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.
ಅಕ್ಟೋಬರ್ 30ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ್ತು ಅಂದೇ ಫಲಿತಾಂಶ ಹೊರಬೀಳಲಿದೆ.

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿತ್ತು. ಇನ್ನು ಎಂ.ಸಿ. ಮನಗೂಳಿ ನಿಧನದಿಂದಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ECI Announced Sindagi, Hanagal Assembly By Election Dates; Voting on Oct 30, Results on Nov 2

ದೇಶದ ವಿವಿಧೆಡೆ ಉಪ ಚುನಾವಣೆ
ದಾದ್ರಾ ಮತ್ತು ನಗರ್ ಹವೇಲಿ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದ ತಲಾ ಒಂದೊಂದು ಕ್ಷೇತ್ರದಂತೆ ಮೂರು ಲೋಕಸಭಾ ಸ್ಥಾನಗಳಿಗೆ ಮತ್ತು ವಿವಿಧ ರಾಜ್ಯಗಳಲ್ಲಿನ 30 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣಾ ಆಯೋಗವು ಸಾಂಕ್ರಾಮಿಕ, ಪ್ರವಾಹ, ಹಬ್ಬಗಳು, ಕೆಲವು ಪ್ರದೇಶಗಳಲ್ಲಿನ ಶೀತ ಪರಿಸ್ಥಿತಿಗಳ ಬಗ್ಗೆ, ಸಂಬಂಧಿತ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಪ್ರತಿಕ್ರಿಯೆಗಳನ್ನು ಪರಿಶೀಲಿಸಿದೆ ಮತ್ತು ಎಲ್ಲಾ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿದೆ.

ಮೂರು ಸಂಸತ್ ಕ್ಷೇತ್ರಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಈ ಉಪ ಚುನಾವಣೆ ನಡೆಯುತ್ತಿದೆ. ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ 30 ಸೀಟುಗಳು ಖಾಲಿ ಇವೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.

ಕುಮಾರಸ್ವಾಮಿ ಪ್ರತಿಕ್ರಿಯೆ

ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, "ಸೋಮವಾರದಿಂದ ಜೆಡಿಎಸ್ ಪಕ್ಷದ ಕಾರ್ಯಕರ್ತ ಕಾರ್ಯಾಗಾರ ನಡೆಸುತ್ತಿದ್ದೇವೆ. ಉಪ ಚುನಾವಣೆಯನ್ನು ಸ್ವಾಗತ ಮಾಡುತ್ತೇನೆ," ಎಂದು ಹೇಳಿದ್ದಾರೆ.

"ಹಾನಗಲ್ ಮತ್ತು ಸಿಂದಗಿ ಎರಡು ಕ್ಷೇತ್ರಗಳಿಗೂ ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡುತ್ತೇವೆ. ಮಂಗಳವಾರ ಕಾರ್ಯಾಗಾರ ಮುಗಿದ ಬಳಿಕ ಉಸ್ತುವಾರಿಗಳ ನೇಮಕದ ಬಗ್ಗೆ ಸಭೆ ಮಾಡಿ ತೀರ್ಮಾನಿಸುತ್ತೇವೆ," ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

Recommended Video

ವಿರಾಟ್ ಕೊಹ್ಲಿ ಕಾಲೆಳೆದ ಸಂಜಯ್ ! | Oneindia Kannada

English summary
The Election Commission Of India has announced the by-election date for the Hanagal and Sindagi assembly constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X