ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

500 ಕೋಟಿ ರೂ. ವಂಚನೆ: ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನ ಬಂಧನ

|
Google Oneindia Kannada News

ಬೆಂಗಳೂರು, ಜನವರಿ12: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಬಂಧಿತ ಕರಣ್ ಗ್ರೂಪ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು 10 ದಿನಗಳ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಲಾಗಿದೆ.

ಕಾಂಗ್ರೆಸ್ ಕಚೇರಿ ಇರುವ ಕಟ್ಟಡ ಸೇರಿ 5 ಸ್ಥಳಗಳಲ್ಲಿ ಇಡಿ ದಾಳಿ ಕಾಂಗ್ರೆಸ್ ಕಚೇರಿ ಇರುವ ಕಟ್ಟಡ ಸೇರಿ 5 ಸ್ಥಳಗಳಲ್ಲಿ ಇಡಿ ದಾಳಿ

ಇನ್ನೂ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಕರಣ್ ಗ್ರೂಪ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ. ಓಜಾ ಅವರ ವಿರುದ್ಧ ಕರ್ನಾಟಕ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.

ED Arrests Head Of Karan Group Builders Developers In Rs 500 Crore Fraud Case In Bengaluru

ಅದಲ್ಲದೇ ವಿವಿಧ ಗುಂಪುಗಳು ಮತ್ತು ವ್ಯಕ್ತಿಗಳು ಕೈಗೊಂಡ ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇನ್ನೂ ದೂರುದಾರರು ಮಾಡಿದ ಒಟ್ಟು 526 ಕೋಟಿ ರೂಪಾಯಿ ಹೂಡಿಕೆಯಲ್ಲಿ 121.5 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಮಹೇಶ್ ಬಿ. ಓಜಾ ನೇತೃತ್ವದ ಕರಣ್ ಗ್ರೂಪ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕೈಗೊಂಡ ರಿಯಲ್ ಎಸ್ಟೇಟ್ ಯೋಜನೆಯಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.

English summary
ed arrests head of karan group builders developers in rs 500 crore fraud case in bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X