Veerendra Puppy Arrest: ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇ.ಡಿ: 12 ಕೋಟಿ ವಶಕ್ಕ
ನವದೆಹಲಿ, ಆಗಸ್ಟ್ 23: ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರನ್ನು ಸಿಕ್ಕಿಂನಲ್ಲಿ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ತಿಳಿಸಿದೆ.
ಶುಕ್ರವಾರ ಹಲವು ರಾಜ್ಯಗಳಲ್ಲಿ ನಡೆಸಿದ ದಾಳಿಯ ನಂತರ 12 ಕೋಟಿ ರೂ. ನಗದು (ಕೋಟಿ ರೂ. ವಿದೇಶಿ ಕರೆನ್ಸಿ ಸೇರಿದಂತೆ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಸುಮಾರು 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿರುವುದಾಗಿ ಕೇಂದ್ರದ ತನಿಖಾ ಸಂಸ್ಥೆ ತಿಳಿಸಿದೆ. ಜಾರಿ ನಿರ್ದೇಶನಾಲಯವು 12 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದು, ಅದರಲ್ಲಿ 1 ಕೋಟಿ ರೂಪಾಯಿ ವಿದೇಶಿ ಕರೆನ್ಸಿಯೂ ಸೇರಿದೆ. 100 ಅಮೆರಿಕನ್ ಡಾಲರ್‌ಗಳ ಬಂಡಲ್‌ಗಳು, 10 ಮತ್ತು 20 ಬ್ರಿಟಿಷ್ ಪೌಂಡ್‌ಗಳು, 100 ಮತ್ತು 50 ಯೂರೋ ಕರೆನ್ಸಿ ನೋಟುಗಳು ಪತ್ತೆಯಾಗಿದೆ.

ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ ನಾಲ್ಕು ವಾಹನ ಜಪ್ತಿ ಮಾಡಿದ್ದಾರೆ. ನಿನ್ನೆ ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಶಾಸಕ ಕೆ ಸಿ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ನಿನ್ನೆ ಚಳ್ಳೆಕೆರೆ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು ಕೆ ಸಿ ವೀರೇಂದ್ರ ಹಾಗೂ ಸಹೋದರ ರಮೇಶ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು. ಕೆಸಿ ವೀರೇಂದ್ರಗೆ ಸೇರಿದ 17 ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದೆ.
ಚಿತ್ರದುರ್ಗದ ಕಾಂಗ್ರೆಸ್ ಶಾಸಕರನ್ನು ಶುಕ್ರವಾರ ಸಿಕ್ಕಿಂನ ರಾಜಧಾನಿ ಗ್ಯಾಂಗ್ಟಾಕ್‌ನಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು ಮತ್ತು ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಟ್ರಾನ್ಸಿಟ್ ರಿಮಾಂಡ್ ಪಡೆಯಲಾಯಿತು ಎಂದು ಅದು ಹೇಳಿದೆ. ಶಾಸಕರು ತಮ್ಮ ಸಹಚರರೊಂದಿಗೆ ಕ್ಯಾಸಿನೊವನ್ನು ಗುತ್ತಿಗೆ ಪಡೆಯುವ ಸಲುವಾಗಿ ಮಾತುಕತೆ ನಡೆಸಲು ಗ್ಯಾಂಗ್ಟಾಕ್‌ಗೆ ಭೇಟಿ ನೀಡಿದ್ದರು ಎಂದು ತನಿಖಾ ಸಂಸ್ಥೆ ತಿಳಿಸಿದೆ.
ವೀರೇಂದ್ರ ಅವರ ಸಹೋದರ ಕೆಸಿ ನಾಗರಾಜ್ ಮತ್ತು ಅವರ ಮಗ ಪೃಥ್ವಿ ಎನ್ ರಾಜ್ ಅವರ ನಿವಾಸದಿಂದ ಆಸ್ತಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಸಹೋದರ ಕೆಸಿ ತಿಪ್ಪೇಸ್ವಾಮಿ ಮತ್ತು ಅವರ ಇತರ ಸಹಚರರು ದುಬೈನಿಂದ ಆನ್‌ಲೈನ್ ಗೇಮಿಂಗ್ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಇ.ಡಿ ತಿಳಿಸಿದೆ. ಸಹೋದರ ಕೆ.ಸಿ. ತಿಪ್ಪೇಸ್ವಾಮಿ ಮತ್ತು ಪೃಥ್ವಿ ಎನ್ ರಾಜ್, ದುಬೈನಿಂದ ಆನ್‌ಲೈನ್ ಗೇಮಿಂಗ್ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತಿದ್ದಾರೆ. ಇದಲ್ಲದೆ, ಕೆ.ಸಿ. ವೀರೇಂದ್ರ ಮತ್ತು ಅವರ ಸಹಚರರು ಕ್ಯಾಸಿನೊವನ್ನು ಗುತ್ತಿಗೆ ಪಡೆಯಲು ವ್ಯಾಪಾರ ಭೇಟಿಗಾಗಿ ಬಾಗ್ಡೋಗ್ರಾ ಮೂಲಕ ಗ್ಯಾಂಗ್ಟಾಕ್‌ಗೆ ಪ್ರಯಾಣಿಸಿದ್ದರು ಎಂದು ತಿಳಿದುಬಂದಿದೆ ಎಂದು ಇಡಿ ತಿಳಿಸಿದೆ.












Click it and Unblock the Notifications