ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: 8.5 ಕೋಟಿ ಬೇನಾಮಿ ವಹಿವಾಟು: ಡಿಕೆ ವಿರುದ್ಧ ಇಡಿ ಚಾರ್ಜ್ ಶೀಟ್ !

|
Google Oneindia Kannada News

ಬೆಂಗಳೂರು, ಮೇ. 26: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಉರುಳಿನಲ್ಲಿ ಲಾಕ್ ಆಗಿದ್ದಾರೆ. ಹಣದ ಅಕ್ರಮ ವಹಿವಾಟು ಆರೋಪಕ್ಕೆ ಸಂಬಂಧಿಸಿದಂತೆ 2019 ರಲ್ಲಿ ದಾಖಲಿಸಿದ್ದ ಪ್ರಕರಣ ಸಂಬಂಧ ದೆಹಲಿಯ ಇಡಿ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಸಿಎಂ ಆಗುವ ಆಸೆ ಹೊತ್ತು ಬಿಜೆಪಿ ಭ್ರಷ್ಟಾಚಾರ ವಿರೋಧಿ ಆಂದೋಲನ, ಮೇಕೆದಾಟು ಪಾದಯಾತ್ರೆ ಕೈಗೊಂಡು ರಾಜ್ಯದಲ್ಲಿ ಮತ್ತಷ್ಟು ಜನಪ್ರಿಯ ಗಳಿಸುತ್ತಿದ್ದ ಡಿ.ಕೆ. ಶಿವಕುಮಾರ್‌ಗೆ ಇದೀಗ ಇಡಿ ಪ್ರಕರಣ ಸಂಕಟ ತಂದೊಡ್ಡಿದೆ. ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ಪ್ಲಾಟ್ ನಲ್ಲಿ 8.5 ಕೋಟಿ ರೂ. ಬೇನಾಮಿ ಹಣ ಪತ್ತೆಯಾದ ಬಗ್ಗೆ ಐಟಿ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಪಿಎಂಎಲ್ ಎ ಕಾಯ್ದೆ ಅಡಿ 2018 ರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು.

2019 ರಲ್ಲಿ ಈ ಪ್ರಕರಣದ ವಿಚಾರಣೆ ಸಂಬಂಧ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದರು. ಸ್ಪಷ್ಟ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿಡಲಾಗಿತ್ತು. ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಲು ತಿರಸ್ಕರಿಸಿತ್ತು. ಆ ಬಳಿಕ ಹೈಕೋರ್ಟ್ ಜಾಮೀನು ನೀಡಿದ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದರು.

ED Files Charge Sheet Against Karnataka Congress President DK Shivakumar

8.5 ಕೋಟಿ ರೂ. ಬೇನಾಮಿ ವಹಿವಾಟು:

ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಸಿದಿಂತೆ ದೆಹಲಿಯ ಅಪಾರ್ಟ್‌ಮೆಂಟ್ ಗಳಲ್ಲಿ ಪತ್ತೆಯಾಗಿದ್ದ 8.5 ಕೋಟಿ ರೂ. ಹಣದ ಮೂಲದ ಬಗ್ಗೆ ತನಿಖೆ ನೆಡಸಿರುವ ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಮೊದಲ ಅರೋಪಿಯಾಗಿದ್ದು, ಸಚಿನ್ ನಾರಾಯಣ್, ಪಾಲುದಾರ ಸ್ನೇಹಿತ ಸುನೀಲ್ ಕುಮಾರ್ ಶರ್ಮಾ ಮತ್ತಿತರರ ವಿರುದ್ಧ ಬೇನಾಮಿ ವಹಿವಾಟು ನಡೆಸಿದ ಅರೋಪ ಹೊರಿಸಲಾಗಿದೆ. 2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಡಿ.ಕೆ ಶಿವಕುಮಾರ್ ಅವರ ಸಿಎಂ ಆಗುವ ಕನಸಿನ ಮೇಲೆ ಈ ಇಡಿ ಕೇಸು ಭಾರಿ ಪರಿಣಾಮ ಬೀರುವ ಸಾಧ್ಯತೆಯಿದೆ.

Recommended Video

DK Shivakumar ಗೆ ಮತ್ತೊಮ್ಮೆ ED ಸಂಕಟ | #Politics | Oneindia Kannada

English summary
The Enforcement Directorate (ED) filed a charge sheet against KPCC president D K Shivakumar and others in an alleged money laundering case. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X