MUDA Case: ಸಿದ್ದರಾಮಯ್ಯ ವಿರುದ್ಧ ಹಗರಣದ ಪುರಾವೆ ಕೊಟ್ಟ ED: ಸಿಎಂಗೆ ಹೆಚ್ಚಾಯ್ತು ಭೀತಿ

ಬೆಂಗಳೂರು, ಡಿಸೆಂಬರ್‌ 04: ಆಡಳಿತರೂಢ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಡುವೆ ಭಾರಿ ರಾಜಕೀಯ ಸಮರಕ್ಕೆ ಕಾರಣವಾಗಿದ್ದ ಮೂಡ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣಕ್ಕೆ ಇದೀಗ ಸ್ಪೋಟಕ ತಿರುಗು ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ 14 ನಿವೇಶನಗಳ ಹಸ್ತಾಂತರದ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಸಾಕ್ಷಿಗಳನ್ನ ಪತ್ತೆಯಾಗಿದೆ ಎಂದು ಇ.ಡಿ(ಜಾರಿ ನಿರ್ದೇಶನಲಯ) ಬಹಿರಂಗಪಡಿಸಿದೆ. ಬೇನಾಮಿ ಹಾಗೂ ಇನ್ನಿತರ ಅವ್ಯವಹಾರಗಳ ಮೂಲಕ ಸಾವಿರದ 10 95 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಇದರ ಮೌಲ್ಯ ಬರೋಬರಿ 700 ಕೋಟಿ ರೂಪಾಯಿ ಎಂದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದೆ. ಇಡಿ ಕೊಟ್ಟ ಸಾಕ್ಷ್ಯದಿಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭೀತಿ ಹೆಚ್ಚಾಗುತ್ತಿದೆ.

ED Gives Evidence In Connection With Muda Scam

ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯ (ED) ಪತ್ತೆ ಮಾಡಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರಿಗೆ ಉರುಳಾಗಿ ಪರಿಣಮಿಸಿದೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮಾಡಲಾದ ಭೂಪರಿವರ್ತನೆಯಲ್ಲಿ ಶಾಸನಬದ್ಧ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಸಾಕ್ಷ್ಯ ತಿರುಚುವಿಕೆಯ ಸಾಕ್ಷ ಲಭಿಸಿದೆ. ಕಚೇರಿ ಕಾರ್ಯ ವಿಧಾನಗಳ ಉಲ್ಲಂಘನೆ, ಅನವಶ್ಯಕ ಒಲವು ತೋರಿರುವುದು, ಪ್ರಭಾವದ ಬಳಕೆ, ಪೋರ್ಜರಿ ಮಾಡಿರುವುದಕ್ಕೆ ಸಾಕ್ಷ್ಯಗಳು ಇಡಿ ತನಿಖೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರಿಗೆ ನಿವೇಶನ ಸಿಕ್ಕಾಗ ಅವರ ಪುತ್ರ ಯತೀಂದ್ರ ಮುಡಾ ಮಂಡಳಿಯಲ್ಲಿದ್ದರು. ಪತಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದರು. ಮುಡಾದಿಂದ ಕೆಲವೊಂದು ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಜಾಗವನ್ನೇ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಖರೀದಿಸಿದ್ದಾರೆ ಎಂದು ಇಡಿ ತನಿಖಯಿಂದ ತಿಳಿದು ಬಂದಿದೆ.

ಮುಡಾ ಅಕ್ರಮ ಕುರಿತು ವಿಜಯೇಂದ್ರ ಟ್ವೀಟ್‌

ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ ಸಿದ್ದರಾಮಯ್ಯನವರ ಪಾತ್ರವನ್ನು ಸಾಕ್ಷಿಕರಿಸುತ್ತಿತ್ತು. ಇದರ ಆಧಾರದ ಮೇಲೆ ಉಚ್ಛ ನ್ಯಾಯಾಲಯ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯ ನಿರ್ಧಾರವನ್ನು ಎತ್ತಿ ಹಿಡಿದು ತನಿಖೆಗೆ ಮುಕ್ತ ಅವಕಾಶ ಕಲ್ಪಿಸಿ ಕೊಟ್ಟಿತ್ತು ಎಂದು ಬಿ ವೈ ವಿಜಯೇಂದ್ರ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಮುಡಾಗೆ ಸಾವಿರಾರು ಕೋಟಿ ರೂ ನಷ್ಟವಾಗಿರುವುದನ್ನು ಅಂದಿನ ಜಿಲ್ಲಾಧಿಕಾರಿಗಳೇ ಸರ್ಕಾರಕ್ಕೆ ಪತ್ರ ಬರೆದು ತಿಳಿಸಿದ್ದರು, ಈ ಹಿನ್ನೆಲೆಯಲ್ಲಿ ದಾಖಲಾದ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯವು (ED)ನಡೆಸುತ್ತಿರುವ ತನಿಖೆ ವಾಸ್ತವ ಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತಿದೆ. ಇದರ ವಾಸನೆಯನ್ನು ಅರಿತೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಹೈಕಮಾಂಡ್ ಬೆದರಿಸಲು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲು ಹೊರಟಿದ್ದರು. ಕಾಂಗ್ರೆಸ್ ವರಿಷ್ಠರಿಗೂ ಮುಖ್ಯಮಂತ್ರಿಗಳು ಭಂಡತನದಿಂದ ಅಧಿಕಾರದಲ್ಲಿ ಮುಂದುವರೆಯುವುದು ಬೇಕಿಲ್ಲ. ಈ ಕಾರಣಕ್ಕಾಗಿಯೇ ಹಾಸನದ ಸಿದ್ದರಾಮಯ್ಯನವರ ಸ್ವಪ್ರತಿಷ್ಠೆಯ ಸ್ವಾಭಿಮಾನಿ ಸಮಾವೇಶಕ್ಕೆ ಕಡಿವಾಣ ಹಾಕಿದ್ದಾರೆ.

ಲೋಕಾಯುಕ್ತದ ತನಿಖೆಯ ದಿಕ್ಕು ಅನುಮಾನ ಮೂಡಿಸಿರುವ ನಡುವೆ ಜಾರಿ ನಿರ್ದೇಶನಾಲಯದಿಂದ ಹೊರಬಂದಿರುವ ವರದಿ ಮುಖ್ಯಮಂತ್ರಿಗಳ ಮುಖವಾಡ ಬಯಲು ಮಾಡಿದೆ. ಇಷ್ಟಾಗಿಯೂ ತಮ್ಮ ಭಂಡತನ ಮುಂದುವರಿಸಲು ನಿರ್ಧರಿಸಿರುವ ಸಿದ್ದರಾಮಯ್ಯನವರು ದೆಹಲಿಯ ಹಿಂದಿನ ಮುಖ್ಯಮಂತ್ರಿ ಕೇಜ್ರಿವಾಲರಂತೆ 'ಜೈಲಿಗೆ ಹೋದರೂ ಮುಖ್ಯಮಂತ್ರಿ ಗಾದಿ ಬಿಡುವುದಿಲ್ಲ' ಎಂಬ ಶಪಥ ಕೈಗೊಂಡಂತಿದೆ. ನಿಶಕ್ತ ಕಾಂಗ್ರೆಸ್‌ ಹೈಕಮಾಂಡ್ ಸಿದ್ದರಾಮಯ್ಯನವರ ಮುಂದೆ ಮಂಡಿಯೂರಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+