Muda Scam: ಸಿಎಂ ಸಿದ್ದರಾಮಯ್ಯ ಪತ್ನಿಗೆ ಇಡಿ ನೋಟಿಸ್
ಬೆಂಗಳೂರು, ಜನವರಿ 27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಮಂಜೂರಾತಿ ಪ್ರಕರಣದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ.
ಇಂದು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ. ಈ ಮೂಲಕ ಮುಡಾ ಹಗರಣದಲ್ಲಿ ಮತ್ತೊಂದು ತಿರುವು ಸಿಕ್ಕಂತಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ.
ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಹೈಕೋರ್ಟ್ ಗೆ ಇಂದು ತನಿಖೆಯ ವರದಿ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಲ್ಲಾ ತನಿಖೆ ಮುಗಿಸಿದ್ದು, ಇದೀಗ ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡ ಮೂರು ತಿಂಗಳಿಂದ ಮುಡಾ ಪ್ರಕರಣ ಸಂಬಂಧ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಕಚೇರಿಯಲ್ಲಿನ ಸಂಬಂಧಿತ ದಾಖಲೆ, ಸಾಮಾನ್ಯ ಸಭೆ ನಡಾವಳಿ ಪರಿಶೀಲಿಸಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖಾ ವರದಿ ಸಿದ್ದಪಡಿಸಿ ಹೈಕೋರ್ಟ್ ಗೆ ಸಲ್ಲಿಸಿದೆ.
ಇನ್ನೂ ಧಾರವಾಡ ಹೈಕೋರ್ಟ ಬಳಿ ಮಾದ್ಯಮಗಳ ಜೊತೆಗೆ ಸಾಮಾಜಿಕ ಹೋರಾಟಗಾರ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇಯ ಆರೋಪಿ ಆಗಿರುವುದರಿಂದ ಸರಿಯಾದ ತನಿಖೆ ನಡೆಯೋದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿಎಂ ಮುಡಾ ಹಗರಣ ವಿಚಾರಣೆ ಆಗತಿದ್ದು, ಲೋಕಾಯುಕ್ತ ತನಿಖೆ ಮಾಡುತ್ತಿದೆ. ಲೋಕಾಯುಕ್ತರ ಪೋಲಿಸರು ರಾಜ್ಯ ಸರಕಾರದ ಅಧಿನದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಆ ಕಾರಣಕ್ಕೆ ಪ್ರಕರಣವನ್ನ ಸಿಬಿಐಗೆ ಕೊಡಬೇಕು ಎಂದು ಅರ್ಜಿ ಸಲ್ಲಿಸಿದ್ದೇನೆ. ಇವತ್ತು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಈ ಪ್ರಕರಣವನ್ನ ಸಿಬಿಐ ತನಿಖೆಗೆ ಆದೇಶ ಮಾಡುತ್ತಾರೆ ಎಂಬ ನಂಬಿಕೆ ಇದ್ದುನ್ಯಾಯಾಲಯ ಅಂತಮ ವರದಿ ಕೇಳಿಲ್ಲಇಲ್ಲಿಯವರೆಗೆ ಲೋಕಾ ತನಿಖೆ ವರದಿಯನ್ನ ಸಲ್ಲಿಸುವಂತೆ ಹೇಳಿದ್ದಾರೆ.
ಅಂತಿಮ ವರದಿ ಸಲ್ಲಿಸಲು ಸಾಕಷ್ಟು ಅವಕಾಶ ಇದೆ ಇವತ್ತು. ಸೂಕ್ತ ಆದೇಶವನ್ನ ಮಾಡುತ್ತದೆ ನ್ಯಾಯಾಲಯ ಸಿಎಂ ಕೇಸ್ ನ್ನ ಉದಾಹರಣೆ ಇಟ್ಟುಕ್ಕೋಂಡು ನಾನು ಮಾಡುತ್ತಿದ್ದೆನೆ. ಮೈಸೂರು ನಗರಾಭಿವೃದ್ಧಿ ಯಲ್ಲಿ 1000 ಕೋಟಿಗೂ ಅಧಿಕ ಹಗರಣ ನಡೆದಿದ್ದು, ಸಿಎಂ ಸೇರಿದಂತೆ ಹಲವಾರು ರಾಜಕಾರಣಿಗಳು ದೊಡ್ಡ ದೊಡ್ಡ ಅಧಿಕಾರಿಗಳು ಜೈಲು ಸೇರೋದು ಪಕ್ಕಾ, ನನಗೆ ವಿಶ್ವಾಸವಿದೆ. ಇವತ್ತು ಜೈ ಕೋರ್ ಸಿಬಿಐ ತನಿಖೆಗೆ ಆದೇಶ ಮಾಡುತ್ತೆ ಎಂದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.












Click it and Unblock the Notifications