ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್‌ಗೆ ಇಡಿ ನೋಟಿಸ್

ನವದೆಹಲಿ, ಸೆಪ್ಟೆಂಬರ್ 30: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಕುಟುಂಬಕ್ಕೆ ಎದುರಾಗಿರುವ ಸಂಕಷ್ಟ ಮತ್ತಷ್ಟು ತೀವ್ರವಾಗುವ ಸೂಚನೆ ದೊರಕಿದೆ. ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರಿಗೆ ಕೂಡ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ಡಿಕೆ. ಶಿವಕುಮಾರ್ ಅವರ ದೆಹಲಿ ಫ್ಲ್ಯಾಟ್‌ನಲ್ಲಿ ದೊರೆತ 40 ಲಕ್ಷದಲ್ಲಿ 21 ಲಕ್ಷ ರೂ. ತಮ್ಮದು ಎಂದು ಡಿಕೆ ಸುರೇಶ್ ಅವರು ಹೇಳಿಕೊಂಡಿದ್ದರು. ಜತೆಗೆ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯಾ ಅವರಿಗೆ ಸಾಲ ನೀಡಿದ್ದಾಗಿ ಲೋಕಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ತಿಳಿಸಿದ್ದರು. ತಂದೆ ಕೆಂಪೇಗೌಡ ಅವರ ಆಸ್ತಿಯನ್ನು ಡಿಕೆ ಸುರೇಶ್ ಅವರಿಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ಸುರೇಶ್ ಅವರು ತಮ್ಮ ಬಳಿ 338 ಕೋಟಿ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ 2017ರ ಆಗಸ್ಟ್‌ನಲ್ಲಿ ಐಟಿ ದಾಳಿಯಾಗಿ 11 ಕೋಟಿ ರೂ. ವಶಪಡಿಸಿಕೊಂಡ ಎರಡು ವರ್ಷದ ಬಳಿಕ 21 ಲಕ್ಷ ತಮ್ಮ ಹಣ ಎಂದು ಸುರೇಶ್ ಹೇಳಿದ್ದರು.

ಹೆಚ್ಚಿನ ವಿಚಾರಣೆ ಸಾಧ್ಯತೆ

ಹೆಚ್ಚಿನ ವಿಚಾರಣೆ ಸಾಧ್ಯತೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟು ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರ ವ್ಯವಹಾರಗಳ ಕುರಿತು ಇಡಿ ಆಳವಾದ ತನಿಖೆ ನಡೆಸಿದೆ. ಸಹೋದರರ ವ್ಯವಹಾರಗಳ ಕುರಿತು ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಡಿಕೆ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ದೆಹಲಿ ಫ್ಲ್ಯಾಟ್‌ನಲ್ಲಿ ದೊರೆತ ಹಣದ ಕುರಿತು ಮಾತ್ರವಲ್ಲದೆ, ಸುರೇಶ್ ಅವರು ನಡೆಸಿರುವ ವಿವಿಧ ವ್ಯವಹಾರಗಳ ಕುರಿತು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಹೆಚ್ಚಿನ ವಿಚಾರಣೆ ಸಾಧ್ಯತೆ

ಹೆಚ್ಚಿನ ವಿಚಾರಣೆ ಸಾಧ್ಯತೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟು ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರ ವ್ಯವಹಾರಗಳ ಕುರಿತು ಇಡಿ ಆಳವಾದ ತನಿಖೆ ನಡೆಸಿದೆ. ಸಹೋದರರ ವ್ಯವಹಾರಗಳ ಕುರಿತು ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಡಿಕೆ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ದೆಹಲಿ ಫ್ಲ್ಯಾಟ್‌ನಲ್ಲಿ ದೊರೆತ ಹಣದ ಕುರಿತು ಮಾತ್ರವಲ್ಲದೆ, ಸುರೇಶ್ ಅವರು ನಡೆಸಿರುವ ವಿವಿಧ ವ್ಯವಹಾರಗಳ ಕುರಿತು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಕುಟುಂಬದ ವಿಚಾರಣೆ ಸಾಧ್ಯತೆ

ಕುಟುಂಬದ ವಿಚಾರಣೆ ಸಾಧ್ಯತೆ

ಅಕ್ರಮ ಹಣ ವರ್ಗಾವಣೆ ಪ್ರಕರಣದ ನೆಪದಲ್ಲಿ ಒಂದೊಂದೇ ವ್ಯವಹಾರದ ಪ್ರಕರಣಗಳನ್ನು ಹೊರತೆಗೆಯುತ್ತಿರುವ ಜಾರಿ ನಿರ್ದೇಶನಾಲಯವು ಡಿಕೆ ಶಿವಕುಮಾರ್ ಅವರ ಇಡೀ ಕುಟುಂಬವನ್ನು ವಿಚಾರಣೆಗೆ ಒಳಪಡಿಸುವ ನಿರೀಕ್ಷೆಯಿದೆ. ಡಿಕೆ ಸುರೇಶ್ ನಂತರ ಅವರ ತಾಯಿ ಗೌರಮ್ಮ ಹಾಗೂ ಡಿಕೆ ಶಿವಕುಮಾರ್ ಪತ್ನಿ ಉಷಾ ಮತ್ತು ಸಂಬಂಧಿ ಚಂದ್ರಶೇಖರ್ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಲಿದೆ ಎಂದು ಹೇಳಲಾಗಿದೆ.ಐಟಿ ದಾಳಿ ವೇಳೆ ತಾಯಿಯನ್ನು ವಿಚಾರಣೆ ನಡೆಸಲು ಅಧಿಕಾರಿಗಳು ಮುಂದಾದಾಗ ಡಿಕೆ ಸುರೇಶ್ ಮತ್ತು ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಕ್ಕಳ ಆಸ್ತಿಗೆ ತಾಯಿ ಬೇನಾಮಿ ಆಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದರು. ಈಗ ಮತ್ತೆ ಈ ಗದ್ದಲ ಉಂಟಾಗುವ ಸಾಧ್ಯತೆ ಇದೆ.

ಡಿಕೆಶಿ ಪುತ್ರಿ ಐಶ್ವರ್ಯಾ ವಿಚಾರಣೆ

ಡಿಕೆಶಿ ಪುತ್ರಿ ಐಶ್ವರ್ಯಾ ವಿಚಾರಣೆ

ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯಾ ಯಾವುದೇ ಉದ್ಯೋಗ ಮಾಡದೇ ಇದ್ದರೂ ಅವರ ಹೆಸರಿನಲ್ಲಿ ನೂರಾರು ಕೋಟಿ ಆಸ್ತಿ ಇದೆ ಮತ್ತು ಅವರ ಬ್ಯಾಂಕ್ ಖಾತೆಗಳಿಂದ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆ ನಡೆಸಿತ್ತು. ಸೆ. 11ರಂದು ಐಶ್ವರ್ಯಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ

ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ

ಡಿಕೆ ಶಿವಕುಮಾರ್ ಅವರ ಆಪ್ತರಾಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದ ಜಾರಿ ನಿರ್ದೇಶನಾಲಯವು ಸೆ. 19 ಮತ್ತು 20ರಂದು ಸತತ ವಿಚಾರಣೆಗೆ ಒಳಪಡಿಸಿತ್ತು. ಮೊದಲ ದಿನ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಎಂದು ಗಂಟೆ ವಿಚಾರಣೆಗೆ ಒಳಪಡಿಸಿತ್ತು. ಎರಡನೆಯ ದಿನ ಏಳು ಗಂಟೆ ವಿಚಾರಣೆ ನಡೆಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+