ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನ ಮಾಜಿ ಶಾಸಕ ಕೆಎನ್ ರಾಜಣ್ಣಗೆ ಇ.ಡಿ. ನೋಟಿಸ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 1: ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್. ರಾಜಣ್ಣಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು ಅಕ್ರಮ ಹಣ ವರ್ಗಾವಣೆಗೆ ಪ್ರಕರಣ ಇನ್ನಷ್ಟು ಕಗ್ಗಂಟಾಗುತ್ತಾ ಹೋಗುತ್ತಿದೆ.

ರಾಜ್ಯದ ಆರ್ಥಿಕ ಅಪರಾಧಗಳ ಮೇಲೆ ವಿಶೇಷ ಕಣ್ಣಿಟ್ಟಿರುವಂತೆ ವರ್ತಿಸುತ್ತಿರುವ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ಬಳಿಕ ಇದೀಗ ಇನ್ನೊರ್ವ ಹಿರಿಯ ಕಾಂಗ್ರೆಸ್ ನಾಯಕ‌ ಕೆ.ಎನ್.ರಾಜಣ್ಣ ಬೇಟೆಗೆ ಸಜ್ಜಾಗಿದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದೆ.

ನಟರಾಜ್ ವಾದ: ಡಿಕೆಶಿ ವಿಚಾರಣೆ ಕುರಿತ ಕೆಲವು ಇಂಟರೆಸ್ಟಿಂಗ್ ಸಂಗತಿಗಳುನಟರಾಜ್ ವಾದ: ಡಿಕೆಶಿ ವಿಚಾರಣೆ ಕುರಿತ ಕೆಲವು ಇಂಟರೆಸ್ಟಿಂಗ್ ಸಂಗತಿಗಳು

ಅಪೆಕ್ಸ್‌ ಬ್ಯಾಂಕ್ ನಿಂದ ಹಾಲಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷ್ ಶುಗರ್ ಕಂಪನಿಗೆ 300 ಕೋಟಿ ರೂ ಸಾಲ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣಗೆ ನೋಟೀಸ್ ಜಾರಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾಜಿ ಶಾಸಕ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿರೋ ಕೆ.ಎನ್.ರಾಜಣ್ಣಗೆ ಅಕ್ಟೋಬರ್ 8 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿಯಾಗಿದ್ದು ಕೆ.ಎನ್.ರಾಜಣ್ಣ ಅಕ್ಟೋಬರ್ 9 ರಂದು ದೆಹಲಿಗೆ ತೆರಳಿ ವಿಚಾರಣಗೆ ತೆರಳಲಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್‌ಗೆ ಇಡಿ ನೋಟಿಸ್ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್‌ಗೆ ಇಡಿ ನೋಟಿಸ್

ಇನ್ನು ಇಡಿ ನೊಟೀಸ್ ನೀಡಿರುವ ವಿಚಾರವನ್ನು ಸ್ವತಃ ಕೆ.ಎನ್.ರಾಜಣ್ಣ ಖಚಿತಪಡಿಸಿದ್ದು ಅಕ್ಟೋಬರ್ 9 ರಂದು ವಕೀಲರೊಂದಿಗೆ ತೆರಳಿ ವಿಚಾರಣೆ ಎದುರಿಸುವುದಾಗಿ ಹೇಳಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಇಡಿ ಸಂಕಷ್ಟ ಮುಂದುವರಿದಿದ್ದು, ಒಬ್ಬರಾದ ಮೇಲೆ ಒಬ್ಬರಿಗೆ ಇ.ಡಿ ಶಾಕ್ ನೀಡುತ್ತಿದೆ.

ಮೊದಲು ಡಿಕೆ ಶಿವಕುಮಾರ್‌ಗೆ ಸಮನ್ಸ್, ಬಂಧನ

ಮೊದಲು ಡಿಕೆ ಶಿವಕುಮಾರ್‌ಗೆ ಸಮನ್ಸ್, ಬಂಧನ

ಮೊದಲು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಬಳಿಕ ಅವರನ್ನು ಇಡಿ ವಿಚಾರಣೆಗೆಂದು ಕರೆದೊಯ್ದಿದ್ದರು. ಪ್ರಸ್ತುತ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಂಗಳವಾರ ನ್ಯಾಯಾಂಗ ಬಂಧನ ಅಅಂತ್ಯವಾಗಲಿದ್ದು, ಮುಂದೇನು ಎನ್ನುವ ಚಿಂತೆ ಅವರನ್ನು ಕಾಡುತ್ತಿದೆ. ನ್ಯಾಯಾಂಗ ಬಂಧನ ಇನ್ನೂ ಕೆಲವು ದಿನಗಳ ಕಾಲ ಮುಂದುವರೆಯಬಹುದು ಎಂಬ ನಿರೀಕ್ಷೆ ಇದೆ.

ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ

ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ

ಲಕ್ಷ್ಮೀ ಅಕೌಂಟ್ ಗಳಿಗೆ ಡಿಕೆಶಿ ಖಾತೆಯಿಂದ ಹಣ ವರ್ಗಾವಣೆ ಆಗಿದೆಯಾ, ಅಥವಾ ಲಕ್ಷ್ಮೀ ಅಕೌಂಟಿನಿಂದ ಡಿಕೆಶಿ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆಯಾ ಎಂಬ ಬಗ್ಗೆ ವಿಚಾರಣೆ ಮಾಡಲಾಗಿದೆ. ಇಡಿ ಅಧಿಕಾರಿಗಳಿಗೆ ಲಕ್ಷ್ಮೀ ಅವರು ತಮ್ಮ ಬ್ಯಾಂಕ್ ಖಾತೆಗಳ ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಅಧಿಕಾರಿಗಳು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನೂರಾರು ಪ್ರಶ್ನೆಗಳನ್ನು ಕೇಳಿದ್ದಾರೆ.

ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್ ಫೋನ್ ಸಂಭಾಷಣೆ ಬಗ್ಗೆ ಅಧಿಕಾರಿಗಳು ಪ್ರಶ್ನೆ ಕೇಳಿದ್ದಾರೆ. ಇಡಿ‌ ಸಮನ್ಸ್ ವಿಚಾರಣೆ ವೇಳೆ ಡಿಕೆಶಿ ಲಕ್ಷ್ಮೀ ಜೊತೆ ಮಾತನಾಡಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿರಬಹುದೆಂಬ ಅನುಮಾನದಿಂದ ವಿಚಾರಣೆ ಮಾಡಲಾಗಿದೆ. ಈ ಪ್ರಶ್ನೆಗೆ ಅವರು ನಾವಿಬ್ಬರು ರಾಜಕಾರಣಿಗಳು, ರಾಜಕಾರಣ ಚರ್ಚಿಸಿದ್ದೇವೆ ಎಂದು ಉತ್ತರಿಸಿದ್ದಾರೆ.

ಐಶ್ವರ್ಯಾ ಶಿವಕುಮಾರ್ ವಿಚಾರಣೆ

ಐಶ್ವರ್ಯಾ ಶಿವಕುಮಾರ್ ವಿಚಾರಣೆ

ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಜಾರಿಗೊಳಿಸಿದ್ದ ಸಮನ್ಸ್​ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಶಿವಕುಮಾರ್ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್‌ಗೆ ಇಡಿ ನೋಟಿಸ್

ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್‌ಗೆ ಇಡಿ ನೋಟಿಸ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಕುಟುಂಬಕ್ಕೆ ಎದುರಾಗಿರುವ ಸಂಕಷ್ಟ ಮತ್ತಷ್ಟು ತೀವ್ರವಾಗುವ ಸೂಚನೆ ದೊರಕಿದೆ. ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರಿಗೆ ಕೂಡ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಡಿಕೆ. ಶಿವಕುಮಾರ್ ಅವರ ದೆಹಲಿ ಫ್ಲ್ಯಾಟ್‌ನಲ್ಲಿ ದೊರೆತ 40 ಲಕ್ಷದಲ್ಲಿ 21 ಲಕ್ಷ ರೂ. ತಮ್ಮದು ಎಂದು ಡಿಕೆ ಸುರೇಶ್ ಅವರು ಹೇಳಿಕೊಂಡಿದ್ದರು. ಜತೆಗೆ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯಾ ಅವರಿಗೆ ಸಾಲ ನೀಡಿದ್ದಾಗಿ ಲೋಕಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ತಿಳಿಸಿದ್ದರು.

English summary
ED has issued notice to Former MLA KN Rajanna on Tuesday. Related To Harsh Sugar Company.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X