ವಂಚನೆ ಆರೋಪ ಸಂಬಂಧ ಬೆಂಗಳೂರು-ದಾವಣಗೆರೆಯ 7 ಕಡೆ ED ದಾಳಿ
ಬೆಂಗಳೂರು, ಜೂನ್ 07: ಕರ್ನಾಟಕ ರಾಜ್ಯದಲ್ಲಿ ವಂಚಕರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಎರಡು ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ದಾಳಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ ಲಿಮಿಟೆಡ್ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದಾಳಿ ವೇಳೆ ಕೋಟ್ಯಂತರ ಮೌಲ್ಯದ ಆಸ್ತಿ ಮತ್ತು ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ.

ಬ್ಯಾಂಕ್ಗೆ ವಂಚನೆ ಪ್ರಕರಣ ಕುರಿತಂತೆ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಒಟ್ಟು 07 ಕಡೆ ದಾಳಿ ನಡೆದಿದೆ. ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ, 14 ಲಕ್ಷ ರೂಪಾಯಿ ನಗದು ಪತ್ತೆ ಮಾಡಿದ ಅಧಿಕಾರಿಗಳು ಮಹತ್ವದ ದಾಖಲೆ ವಶಕ್ಕೆ ಪಡೆದಿದ್ದಾರೆ. ಅಗತ್ಯ ಡಿಜಿಟಲ್ ಡಿವೈಸ್ಗಳನ್ನೂ ವಶಕ್ಕೆ ಪಡೆದಿದ್ದಾರೆ ಎಂದು ಟಿವಿ ನೈನ್ ವರದಿ ಮಾಡಿದೆ.
ರಾಜ್ಯದಲ್ಲಿ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿ ಯು ಓಡಾ ಕ್ಲಾಸ್ ಆ್ಯಪ್ ಮೂಲಕ ಆನ್‌ಲೈನ್ ಶಿಕ್ಷಣವನ್ನು ಒದಗಿಸುವ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವಿರುದ್ಧ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿತ್ತು. ಇದೀಗ ಮತ್ತೆ ದಾಳಿ ಮೂಲಕ ಅಕ್ರಮ, ವಂಚಕ ವಿರುದ್ಧ ಭೇಟೆಗೆ ಮುಂದಾಗಿದೆ.












Click it and Unblock the Notifications