ಮಾಜಿ ಸಚಿವನ ಆಪ್ತರ ಮನೆಗಳ ಮೇಲೆ ಇಡಿ ದಾಳಿ

ಮಾಜಿ ಸಚಿವರೊಬ್ಬರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಶಾಕ್‌ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಲುಕಿಕೊಂಡಿರುವ ಕಾಂಗ್ರೆಸ್‌ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ.

ಇನ್ನು ಇದೇ ಹಗರಣದ ಸಂಬಂಧವಾಗಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದ್ದು, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನ ವಿವಿಧೆಡೆ ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರ ಅವರ ಸಂಬಂಧಿ ಎನ್ನಲಾದ ಎರ್ರಿಸ್ವಾಮಿ ಸೇರಿದಂತೆ ಇವರಿಗೆ ಆಪ್ತರಾಗಿದ್ದ ಹಲವರ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಇದೇ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಲು ಅಧಿಕಾರಿಗಳು ಮುಂದಾಗಿದ್ದು, ಇದೇ ವೇಳೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ.

ED Officials Raid On Karnataka Former Minister B Nagendra s Aides

ಏನಿದು ಹಗರಣ?: ನಾಗೇಂದ್ರ ಅವರು ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ದೇವೇಂದ್ರಪ್ಪ ಅವರ ಆಪ್ತ ನೆಟ್ಟಂಕಿ ನಾಗರಾಜ್ ಮತ್ತು ಅವರ ಸಂಬಂಧಿಕ ನಾಗೇಶ್ವರ್‌ ರಾವ್ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಚರ್ಚೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇದೆ. ಇದೇ ಸಂದರ್ಭದಲ್ಲಿ ಯೂನಿಯನ್ ಬ್ಯಾಂಕ್‌ನಲ್ಲಿ ಹೊಸ ಖಾತೆ ತೆರೆಯುವಂತೆ ನಾಗೇಂದ್ರ ಅವರು ಸೂಚನೆ ನೀಡಿದ್ದರು ಎಂಬ ಆರೋಪವೂ ಇದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂ.ಜಿ.ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಈ ಭಾರೀ ಪ್ರಮಾಣದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ಕೂಡ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್‌ಐಟಿ ಬಂಧಿಸಿತ್ತು.

ED Officials Raid On Karnataka Former Minister B Nagendra s Aides

ಇನ್ನು ಇದೇ ಕೇಸ್‌ ಸಂಬಂಧ ಇಡಿ ಅಧಿಕಾರಿಗಳು ಕಳೆದ ತಿಂಗಳು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​​ ಹಾಗೂ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿದ್ದ ಬಿ.ನಾಗೇಂದ್ರ ಅವರ ಫ್ಲ್ಯಾಟ್‌ ಸೇರಿದಂತೆ ಏಕಕಾಲಕ್ಕೆ 18 ಕಡೆ ದಾಳಿ ನಡೆದಿತ್ತು. ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಕಚೇರಿಯನ್ನೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ನಿಗಮದ ಹಣದಿಂದ ಕಳೆದ ಲೋಕಸಭೆ ಚುನಾವಣೆ ವೇಳೆ ಮದ್ಯ ಖರೀದಿ ಮಾಡಿರುವ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ದದ್ದಲ್​ ಮತ್ತು ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿದ್ದಾಗಿ ಇಡಿ ಹೇಳಿತ್ತು. ಕೊನೆಗೆ ಸಚಿವ ಸ್ಥಾನದಲ್ಲಿದ್ದ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಇತ್ತೀಚೆಗೆ ನಾಗೇಂದ್ರ ಅವರು ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಕೂಡ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+