KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ED ದಾಳಿಯಲ್ಲಿ ಬಯಲಾಯ್ತು ಪೇಪರ್ ಲೀಕ್ ಸೀಕ್ರೆಟ್!

ಬೆಂಗಳೂರು: ರಾಜ್ಯದ ಪ್ರತಿಭಾವಂತರಿಗೆ ನೆರವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದ ಭ್ರಷ್ಟಾಚಾರವೊಂದು ಬಯಲಾಗಿದೆ. ಬಹುಕೋಟಿ ಮೊತ್ತದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ಅಮಾನತುಗೊಂಡಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಶಾಂತ ಹೊಸಮನಿ, ಮಧ್ಯವರ್ತಿಗಳು ಹಾಗೂ ಅಭ್ಯರ್ಥಿಗಳ ನಿವಾಸ ಸೇರಿದಂತೆ ರಾಜ್ಯ ಮತ್ತು ಗುಜರಾತ್‌ನ ಅಹಮದಾಬಾದ್‌ನ ಒಟ್ಟು 21 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ED Raids

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ: ರೆಸಾರ್ಟ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ

ಈ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು ಕೇವಲ ಹಣದ ವಹಿವಾಟಿಗೆ ಸೀಮಿತವಾಗಿಲ್ಲ, ಬದಲಿಗೆ ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ವಿಚಾರ ಇ.ಡಿ ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಧ್ಯವರ್ತಿಗಳು ಕೆಲ ಅಭ್ಯರ್ಥಿಗಳನ್ನು ಬೆಂಗಳೂರು ಹೊರವಲಯ ಹಾಗೂ ರಾಜ್ಯದ ಗಡಿ ಭಾಗದಲ್ಲಿರುವ ಐಷಾರಾಮಿ ಹೋಟೆಲ್ ಹಾಗೂ ರೆಸಾರ್ಟ್‌ಗಳಿಗೆ ಕರೆದೊಯ್ದು, ಅಲ್ಲಿ ಅವರಿಗೆ ಮುಂಚಿತವಾಗಿಯೇ ಉತ್ತರ ಸಹಿತ ಪ್ರಶ್ನೆ ಪತ್ರಿಕೆಗಳನ್ನ ನೀಡಿ ತರಬೇತಿ ನೀಡಿದ್ದರು ಎಂಬ ಸ್ಫೋಟಕ ಮಾಹಿತಿಯನ್ನ ಅಭ್ಯರ್ಥಿಗಳೇ ಬಾಯ್ಬಿಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾಕ್ಷ್ಯ ಸಂಗ್ರಹಕ್ಕಾಗಿ ರೆಸಾರ್ಟ್‌ಗಳ ಮೇಲೆ ದಾಳಿ ನಡೆಸಿರುವ ಇ.ಡಿ, ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಅಭ್ಯರ್ಥಿಗಳ ಮೊಬೈಲ್ ಕಾಲ್ ರೆಕಾರ್ಡ್ ಅನ್ನ ಪರಿಶೀಲಿಸುತ್ತಿದೆ. ಮೇಲ್ನೋಟಕ್ಕೇ ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಲೀಕ್ ಆಗಿರುವುದು ಇದರಿಂದ ದೃಢಪಟ್ಟಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳು ಒಂದು ಸರ್ಕಾರಿ ಹುದ್ದೆಗೆ ಬರೋಬ್ಬರಿ 70 ರಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪವಿದೆ. ಆರೋಪಿತ ಅಭ್ಯರ್ಥಿಗಳ ಮನೆಗಳ ಮೇಲೆ ದಾಳಿ ನಡೆಸಿದ ವೇಳೆ, ಅಧಿಕಾರಿಗಳು ಅಭ್ಯರ್ಥಿಗಳಿಗೆ 20 ಅಂಕಗಳ ಪ್ರಶ್ನೆಗಳನ್ನ ನೀಡಿ ತಕ್ಷಣವೇ ಉತ್ತರಿಸುವಂತೆ ಸೂಚಿಸಿದಾಗ ಅವರು ತಬ್ಬಿಬ್ಬಾಗಿದ್ದಾರೆ. ಇ.ಡಿ ಪ್ರಶ್ನೆಗಳ ಸುರಿಮಳೆಗೆ ಬೆಚ್ಚಿಬಿದ್ದ ಸುಮಾರು ಆರು ಅಭ್ಯರ್ಥಿಗಳು ಅಂತಿಮವಾಗಿ ತಮ್ಮ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಕೆಪಿಎಸ್‌ಸಿ ಕಚೇರಿಯಲ್ಲೂ ಸತತ ಮೂರು ದಿನಗಳ ಕಾಲ ಶೋಧ ನಡೆಸಿರುವ ಅಧಿಕಾರಿಗಳು, ಓಎಂಆರ್ ಶೀಟ್‌ಗಳನ್ನ ಇರಿಸಿದ್ದ ಕೊಠಡಿಯ ಸಿಸಿಟಿವಿ ದೃಶ್ಯಗಳನ್ನ ಡಿಲೀಟ್ ಮಾಡಿರುವುದನ್ನ ಪತ್ತೆಹಚ್ಚಿದ್ದಾರೆ. ಜೊತೆಗೆ, ಅಭ್ಯರ್ಥಿಗಳ ಓಎಂಆರ್ ಶೀಟ್‌ಗಳನ್ನ ವ್ಯವಸ್ಥಿತವಾಗಿ ಅದಲು-ಬದಲು ಮಾಡಿರುವುದು ಕೂಡ ಇ.ಡಿ ಮೂಲಗಳಿಂದ ತಿಳಿದುಬಂದಿದೆ.

ಶಾಂತ ಹೊಸಮನಿ ನಾಪತ್ತೆ

ಇ.ಡಿ ಅಧಿಕಾರಿಗಳು ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಅವರು ಸ್ಥಳದಲ್ಲಿ ಇರಲಿಲ್ಲ. ಅವರನ್ನು ಸಂಪರ್ಕಿಸಲು ತನಿಖಾಧಿಕಾರಿಗಳು ಎಷ್ಟೇ ಪ್ರಯತ್ನಿಸಿದರೂ ಅವರು ಸಿಗದೆ, ಸದ್ಯ ತಲೆಮರೆಸಿಕೊಂಡಿದ್ದಾರೆ.

ಮತ್ತೊಂದೆಡೆ, ಪಶುವೈದ್ಯಾಧಿಕಾರಿ ಅಕ್ರಮದ ಜೊತೆಗೆ, ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಅಕ್ರಮವಾಗಿ ನೇಮಕಗೊಂಡಿರುವ ಪ್ರಕರಣವೂ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಕುರಿತು ದಾಖಲೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಇದರ ಬೆನ್ನಲ್ಲೇ, ಸತತ ವಿಚಾರಣೆಯಿಂದ ಕಂಗೆಟ್ಟಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಇ.ಡಿ ದಾಳಿ ಅಂತ್ಯವಾಗುತ್ತಿದ್ದಂತೆಯೇ ಗುರುವಾರ ಮುಂಜಾನೆ ತಮ್ಮ ಕುಟುಂಬ ಸಮೇತ ಮಂತ್ರಾಲಯಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+