Satish Jarkiholi: ಸಚಿವ ಸತೀಶ್‌ ಜಾರಕಿಹೊಳಿಗೆ ಬೆಳ್ಳಂಬೆಳಗ್ಗೆ ಇ.ಡಿ ಶಾಕ್

Satish Jarkiholi: ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಬುಧವಾರ (ಸೆಪ್ಟೆಂಬರ್ 9) ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ಹಾಗಾದ್ರೆ ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅವರ ಬೆಂಗಳುರು, ಬೆಳಗಾವಿ ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳು ಸೇರಿದಂತೆ ಇತರ ಸ್ಥಳಗಳಲ್ಲಿ ದಾಳಿ ನಡೆದಲಾಗಿದೆ. ಜಾರಕಿಹೊಳಿ ಕುಟುಂಬಕ್ಕೆ ಸೇರಿದ ವ್ಯವಹಾರಗಳು, ಅವರ ಕುಟುಂಬ ಸದಸ್ಯರು ಹಾಗೂ ಆಪ್ತರ ನಿವಾಸಗಳು ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ಮಾಲಡಾಗುತ್ತಿದೆ ಎಂದು ತಿಳಿದುಬಂದಿದೆ.

ED Raids on Minister Satish Jarkiholi Searches at 18 Locations in Karnataka Know complete details

ಈ ವರ್ಷದ ಜೂನ್ ತಿಂಗಳಲ್ಲಿ ಅಬಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದನ್ನ ಆಧರಿಸಿ, ಸತೀಶ್ ಜಾರಕಿಹೊಳಿ ಅವರ ಭಾಮೈದ ಹಾಗೂ ಹಿರಿಯ ಅಬಕಾರಿ ಅಧಿಕಾರಿಯಾದ ವೈ.ಮಂಜುನಾಥ್ ಅವರ ಮೇಲೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿಯಲ್ಲಿ ದಾಳಿ ನಡೆಸಿತ್ತು. ನಿಯಮಗಳನ್ನು ಮೀರಿ ಮದ್ಯದ ಪರವಾನಗಿಗಳನ್ನು ನೀಡುವ ಮೂಲಕ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪ ಇದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್‌ ಲೈಸೆನ್ಸ್‌ ನೀಡಿದ್ದರು ಎನ್ನಲಾಗಿದೆ. ಬಾರ್‌ನಿಂದ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಈಗ ದಾಳಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಿದೇಶಿ ಹೂಡಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಬಿಗ್ ಶಾಕ್ ನೀಡಿದ್ದು, ಅವರ ಬೆಂಗಳೂರಿನ ನಿವಾಸ ಸೇರಿದಂತೆ ಅವರಿಗೆ ಸೇರಿದ ಒಟ್ಟು 18 ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದೆ. ಸಚಿವ ಸತೀಶ್ ಜಾರಕಿಹೊಳಿ ಮಾತ್ರವಲ್ಲದೆ, ಅವರ ಪುತ್ರಿ ಹಾಗೂ ಸಂಸದೆ ಪ್ರಿಯಾಂಕಾ ಮತ್ತು ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದ ಆಸ್ತಿಪಾಸ್ತಿ ಹಾಗೂ ಕಚೇರಿಗಳಲ್ಲೂ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಈ ದಾಳಿಯು ಅಕ್ರಮ ಹಣ ವರ್ಗಾವಣೆ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಚರ್ಚೆಯಲ್ಲಿದ್ದ ಅಬಕಾರಿ ಇಲಾಖೆಯ ಮಾಜಿ ಅಧಿಕಾರಿ ವೈ.ಮಂಜುನಾಥ್ ಪ್ರಕರಣಕ್ಕೂ ಈ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿದ್ದು, ಕೇವಲ ವಿದೇಶಿ ಹೂಡಿಕೆ ಕಾಯ್ದೆಗಳ ಉಲ್ಲಂಘನೆಯ ಆಧಾರದ ಮೇಲೆಯೇ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಸತೀಶ್ ಜಾರಕಿಹೊಳಿ ಮತ್ತು ಅವರ ಕುಟುಂಬಸ್ಥರು ಆಫ್ರಿಕನ್ ದೇಶಗಳಲ್ಲಿ, ವಿಶೇಷವಾಗಿ ಉಗಾಂಡದಲ್ಲಿ ಗಣಿಗಾರಿಕೆ ವ್ಯವಹಾರದಲ್ಲಿ ಭಾರಿ ಪ್ರಮಾಣದ ಹೂಡಿಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಉಗಾಂಡದ ಮೈನಿಂಗ್ ಕಂಪನಿಯೊಂದಿಗೆ ಸಚಿವರ ಕುಟುಂಬವು ವ್ಯವಹಾರಿಕ ಪಾಲುದಾರಿಕೆ ಹೊಂದಿರುವ ಬಗ್ಗೆ ಇಡಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಮತ್ತು ಆಧಾರಗಳು ಲಭ್ಯವಾಗಿವೆ ಎಂದು ವರದಿಯಾಗಿದೆ.

ಆಫ್ರಿಕಾ ಖಂಡದ ಪ್ರಮುಖ ದೇಶಗಳಲ್ಲಿ ಬಂಡವಾಳ ಹೂಡುವಾಗ ದೇಶದ ನಿಯಮಾವಳಿಗಳಿಗೆ ಅನುಗುಣವಾಗಿ ಸ್ಪಷ್ಟ ದಾಖಲೆಗಳನ್ನು ಸಲ್ಲಿಕೆ ಮಾಡಿಲ್ಲ ಎಂಬ ಆರೋಪವಿದೆ. ವಿದೇಶಿ ಬಂಡವಾಳ ಹೂಡಿಕೆಯ ಅಕ್ರಮ ಪ್ರಕ್ರಿಯೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಇದು ಫೆಮಾ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ ಎಂದು ಇಡಿ ಅಧಿಕಾರಿಗಳು ತೀರ್ಮಾನಕ್ಕೆ ಬಂದಿದ್ದಾರೆ.

ಭಾರಿ ಪ್ರಮಾಣದ ಬಂಡವಾಳ ಹೂಡಿಕೆ ಆರೋಪ

ಸಚಿವರ ಪುತ್ರಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜಾರಕಿಹೊಳಿ ಅವರ ಹೆಸರಿನಲ್ಲಿ ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಮೊತ್ತದ ಬಂಡವಾಳ ಹೂಡಿಕೆಯಾಗಿದೆ ಎಂಬ ಮಾಹಿತಿ ದೊರೆತಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಮೂರು ತಿಂಗಳುಗಳಿಂದ ಹಣಕಾಸಿನ ವ್ಯವಹಾರಗಳ ಸಂಪೂರ್ಣ ದಾಖಲೆಗಳನ್ನು ರಹಸ್ಯವಾಗಿ ಸಂಗ್ರಹಿಸಿದ್ದರು. ಹೂಡಿಕೆಯಲ್ಲಿ ಅಕ್ರಮ ನಡೆದಿರುವುದು ಖಚಿತವಾದ ಬಳಿಕವೇ ಇಡಿ ತಂಡಗಳು ಏಕಕಾಲದಲ್ಲಿ ಈ ಬೃಹತ್ ದಾಳಿಯನ್ನು ಸಂಘಟಿಸಿವೆ. ಪ್ರಸ್ತುತ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸ್ಥಳಗಳಲ್ಲಿ ಸತತ ಶೋಧ ನಡೆಸುತ್ತಿದ್ದು, ಪ್ರಮುಖ ದಾಖಲೆಗಳು ಹಾಗೂ ಕಂಪ್ಯೂಟರ್ ಡಿವೈಸ್‌ಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+