ಜಾರಿ ನಿರ್ದೇಶನಾಲಯದಿಂದ ಡಿ.ಕೆ.ಶಿವಕುಮಾರ್‌ಗೆ ಸಮನ್ಸ್‌

Recommended Video

      ಜಾರಿ ನಿರ್ದೇಶನಾಲಯದಿಂದ ಡಿ.ಕೆ.ಶಿವಕುಮಾರ್‌ಗೆ ಸಮನ್ಸ್‌ | D K Shivakumar | Oneindia Kannada

      ಬೆಂಗಳೂರು, ಆಗಸ್ಟ್ 29 : ಜಾರಿ ನಿರ್ದೇಶನಾಲಯ ವಿಚಾರಣೆಗೆ ಬರುವಂತೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್‌ಗೆ ಸಮನ್ಸ್‌ ನೀಡಿದೆ. ಸಮನ್ಸ್ ರದ್ದುಗೊಳಿಸುವಂತೆ ಕೋರಿದ್ದ ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

      ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ಮನೆಗೆ ತೆರಳಿ ಗುರುವಾರ ರಾತ್ರಿ ಸಮನ್ಸ್‌ ಜಾರಿ ಮಾಡಿದರು. ಶುಕ್ರವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ತಿಳಿಸಲಾಗಿದೆ.

      ED Summons Congress Leader DK Shivakumar

      ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್, "ಇಡಿ ಅಧಿಕಾರಿಗಳು ಯಾವಾಗ ಎಲ್ಲಿಗೆ ವಿಚಾರಣೆಗೆ ಕರೆದರೂ ಹಾಜರಾಗುತ್ತೇನೆ. ಉಳಿದ ವಿಚಾರಗಳನ್ನು ನಾಳೆ ಮಾತನಾಡುತ್ತೇನೆ" ಎಂದು ಪ್ರತಿಕ್ರಿಯೆ ನೀಡಿದರು.

      ಡಿ. ಕೆ. ಶಿವಕುಮಾರ್ ದೆಹಲಿಯ ನಿವಾಸದಲ್ಲಿ ಪತ್ತೆಯಾದ ಸುಮಾರು 8 ಕೋಟಿ ರೂ. ಹಣದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈ ತನಿಖೆಯ ವಿಚಾರದಲ್ಲಿ ತಮಗೆ ನೀಡಿರುವ ಸಮನ್ಸ್‌ ರದ್ದುಗೊಳಿಸುವಂತೆ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

      ಡಿ. ಕೆ. ಶಿವಕುಮಾರ್ ವಿರುದ್ದ ಸೆಕ್ಷನ್ 120 ಬಿ ಆರೋಪವಿದೆ. ಇದರ ಜತೆಗೆ ಮತ್ತೊಂದು ಅಧಿಸೂಚಿತ ಕೇಸ್ ಇರಬೇಕೆಂದಿಲ್ಲ ಎಂದಿರುವ ಹೈಕೋರ್ಟ್ ಇಡಿ ಪ್ರಕರಣದ ತನಿಖೆಯನ್ನು ಮುಂದುವರೆಸಲು ಒಪ್ಪಿಗೆ ನೀಡಿದೆ.

      ಹೈಕೋರ್ಟ್ ಆದೇಶ ಬರುತ್ತಿದ್ದಂತೆ ಇಡಿ ಅಧಿಕಾರಿಗಳು ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಆಗಮಿಸಿದರು. ಶುಕ್ರವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+